169 Km ರೇಂಜ್: 1.67 ಲಕ್ಷ.. ದೇಶದ ಪ್ರಪ್ರಥಮ ಯಮಹಾ EC-06ಗೆ 3 ಬದಲಿ ಇ-ಸ್ಕೂಟರ್‌ಗಳಿವು, ಬೆಲೆ ಎಷ್ಟು.. ವಿಶೇಷತೆಗಳೇನು?

ಬಹುನಿರೀಕ್ಷಿತ ಯಮಹಾ ಇಸಿ-06 (Yamaha EC-06) ಎಲೆಕ್ಟ್ರಿಕ್ ಸ್ಕೂಟರ್ ಸೋಮವಾರ ಮಾರಾಟಕ್ಕೆ ಬಂದಿದೆ. ಇದು ರೂ.1.67 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. 'ಬ್ಲ್ಯೂಯಿಶ್ ವೈಟ್' ಎಂಬ ಏಕೈಕ ಬಣ್ಣದೊಂದಿಗೆ ಗ್ರಾಹಕರ ಲಭ್ಯವಿದೆ. ಹೆಚ್ಚು ವಿಶಾಲವಾಗಿದ್ದು, 145 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,354 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಸ್ಕೂಟರ್ 4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 169 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 79 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌ ಮತ್ತು ರಿವರ್ಸ್ ಅಸಿಸ್ಟ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಸಿಬಿಎಸ್ (ಕಾಂಬಿ ಬ್ರೇಕ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Best 3 Alternative Electric Scooter For Yamaha EC-06 Suzuki e Access Ather Rizta River Indie

ನೀವು ಇದೇ 'ಯಮಹಾ ಇಸಿ-06'ಗೆ ಪರ್ಯಾಯವಾಗಿ ಈ 3 ಎಲೆಕ್ಟ್ರಿಕ್ ಸ್ಕೂಟರ್‌ಗಳಾದ ಸುಜುಕಿ ಇ ಆಕ್ಸೆಸ್, ಎಥರ್ ರಿಜ್ಟಾ ಹಾಗೂ ರಿವರ್ ಇಂಡೀಗಳನ್ನು ಕೊಂಡುಕೊಳ್ಳಬಹುದು. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಸುಜುಕಿ ಇ ಆಕ್ಸೆಸ್ (Suzuki e Access)

ಇದು ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. 'ಯಮಹಾ ಇಸಿ-06' ಬದಲಾಗಿಯೂ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.1.88 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಗ್ರೇಸ್ ವೈಟ್ ಮತ್ತು ಪರ್ಲ್ ಜೇಡ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1,305 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Best 3 Alternative Electric Scooter For Yamaha EC-06 Suzuki e Access Ather Rizta River Indie

ನೂತನ 'ಇ ಆಕ್ಸೆಸ್' 3.07 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 95 ಕಿಲೋಮೀಟರ್‌ ರೇಂಜ್ (ಮೈಲೇಜ್) ಕೊಡುತ್ತದೆ. 71 ಕೆಎಂಪಿಹೆಚ್ ಸ್ಪೀಡ್‌ನ್ನು ಪಡೆದಿದೆ. ಟಿಎಫ್‌ಟಿ ಡಿಸ್‌ಪ್ಲೇ, ರಿಮೋಟ್ ಸ್ಟಾರ್ಟ್ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಎಥರ್ ರಿಜ್ಟಾ (Ather Rizta):

ಈ ಸ್ಕೂಟರ್‌ನ್ನು 'ಯಮಹಾ ಇಸಿ-06'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ರೂ.1.05 ಲಕ್ಷದಿಂದ ರೂ.1.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಡೆಕ್ಕನ್ ಗ್ರೇ, ಸಿಯಾಚಿನ್ ವೈಟ್, ಪ್ಯಾಂಗಾಂಗ್ ಬ್ಲೂ ಹಾಗೂ ಟೆರಾಕೋಟಾ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 150 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Best 3 Alternative Electric Scooter For Yamaha EC-06 Suzuki e Access Ather Rizta River Indie

ಹೊಸ 'ರಿಜ್ಟಾ' 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್ ಹಾಗೂ 3.7 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ಗಳನ್ನು ಒಳಗೊಂಡಿದೆ ಭರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್‌ ರೇಂಜ್ (ಮೈಲೇಜ್) ನೀಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 7 ಇಂಚಿನ ಎಲ್‌ಸಿಡಿ ಸ್ಕ್ರೀನ್ ಹಾಗೂ ಮಲ್ಟಿ ಪರ್ಪಸ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ರಿವರ್ ಇಂಡೀ (River Indie):

ಇದೊಂದು ಪ್ರಖ್ಯಾತ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, 'ಯಮಹಾ ಇಸಿ-06'ಗೆ ಬದಲಾಗಿಯೂ ಮನೆಗೆ ತರಬಹುದು. ರೂ.1.46 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಟಾರ್ಮ್ ಗ್ರೇ, ವಿಂಟರ್ ವೈಟ್, ಮಾನ್ಸೂನ್ ಬ್ಲೂ ಮತ್ತು ಸ್ಪ್ರಿಂಗ್ ಯೆಲ್ಲೋ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1365 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Best 3 Alternative Electric Scooter For Yamaha EC-06 Suzuki e Access Ather Rizta River Indie

ನೂತನ 'ಇಂಡೀ' 4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. 161 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

Article Published On: Tuesday, February 3, 2026, 18:30 [IST]
English summary
Best 3 alternative electric scooter for yamaha ec 06 suzuki e access ather rizta river indie
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+