ಬರೀ 3.59 ಲಕ್ಷ.. 200 Km ರೇಂಜ್, ಹೊಸ ಮಹೀಂದ್ರಾ ಉಡೋಗೆ 3 ಬದಲಿ ಎಲೆಕ್ಟ್ರಿಕ್ ಆಟೋಗಳಿವು.. ಬೆಲೆ ಎಷ್ಟು, ಹೇಗಿವೆ?
ಮಹೀಂದ್ರಾ ಉಡೋ (Mahindra Udo) ಇ-ಆಟೋರಿಕ್ಷಾ ಗುರುವಾರ ಬಿಡುಗಡೆಗೊಂಡಿದೆ. ರೂ.3.59 ಲಕ್ಷ ಪರಿಚಯಾತ್ಮಕ ಬೆಲೆಯನ್ನು ಹೊಂದಿದೆ. ಇದು ಸೀಮಿತಾವಧಿಯ ಕೊಡುಗೆಯಾಗಿದೆ. ಈ ಎಲೆಕ್ಟ್ರಿಕ್ ಆಟೋರಿಕ್ಷಾ ಸಖತ್ ಬೋಲ್ಡ್ ಲುಕ್‌ನ್ನು ಪಡೆದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. 11.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 200 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 55 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಹೊಸ 'ಉಡೋ' ಇ-ಆಟೋರಿಕ್ಷಾ ಇನ್ಫಾರ್ಮಶನ್ ಡಿಸ್‌ಪ್ಲೇಯಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ರೇಂಜ್, ರೈಡ್ ಮತ್ತು ರೇಸ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಮುಂಭಾಗ (ಫ್ರಂಟ್) ಡುಯಲ್ ಫೋರ್ಕ್ & ಹಿಂಭಾಗ (ರೇರ್) ಇಂಡಿಪೆಂಡೆಂಟ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ನೀವು ಇದೇ 'ಮಹೀಂದ್ರಾ ಉಡೋ'ಗೆ ಪರ್ಯಾಯವಾಗಿ ಈ 3 ಎಲೆಕ್ಟ್ರಿಕ್ ಆಟೋರಿಕ್ಷಾಗಳಾದ ಬಜಾಜ್ ಗೋಗೋ ಪಿ7012, ಮೋಂಟ್ರಾ ಎಲೆಕ್ಟ್ರಿಕ್ ಸೂಪರ್ ಆಟೋ ಹಾಗೂ ಮಹೀಂದ್ರಾ ಟ್ರಿಯೋಗಳನ್ನು ಖರೀದಿಸಬಹುದು. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಬಜಾಜ್ ಗೋಗೋ ಪಿ7012 (Bajaj GoGo P7012):
ಇದು ಪ್ರಮುಖ ಇ-ಆಟೋರಿಕ್ಷಾ ಎಂದೇ ಹೆಸರುವಾಸಿಯಾಗಿದೆ. 'ಮಹೀಂದ್ರಾ ಉಡೋ'ಗೆ ಬದಲಾಗಿಯೂ ಖರೀದಿಸಬಹುದು. ರೂ.3.83 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಮೆಟಲ್ ಬಾಡಿಯನ್ನು ಒಳಗೊಂಡಿದೆ. 12.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 251 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

ನೂತನ 'ಬಜಾಜ್ ಗೋಗೋ ಪಿ7012' ಡಿಜಿಟಲ್ ಡ್ರೈವರ್ ಇನ್ಫಾರ್ಮಶನ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಇಕೋ, ಪವರ್ ಹಾಗೂ ಕ್ಲೈಂಬ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಹೆಲಿಕಲ್ ಕಾಯಿಲ್ ಸ್ಪ್ರಿಂಗ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಮೋಂಟ್ರಾ ಎಲೆಕ್ಟ್ರಿಕ್ ಸೂಪರ್ ಆಟೋ (Montra Electric Super Auto):
ಈ ಎಲೆಕ್ಟ್ರಿಕ್ ಆಟೋರಿಕ್ಷಾವನ್ನು 'ಮಹೀಂದ್ರಾ ಉಡೋ'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ರೂ.3.23 ಲಕ್ಷದಿಂದ ರೂ.3.38 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. 10.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 239 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 55 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ಹೊಸ 'ಸೂಪರ್ ಆಟೋ' 4.3-ಇಂಚಿನ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಇಕೋ, ಡ್ರೈವ್ ಹಾಗೂ ಪವರ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಡಬಲ್ ಫೋರ್ಕ್ ಹೆಲಿಕಲ್ ಸ್ಪ್ರಿಂಗ್ ಮತ್ತು ಹಿಂಭಾಗ (ರೇರ್) ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಮಹೀಂದ್ರಾ ಟ್ರಿಯೋ (Mahindra Treo):
ಇದು 'ಮಹೀಂದ್ರಾ' ಕಂಪನಿಯ ಆಟೋರಿಕ್ಷಾ ಆಗಿದೆ. ಆದರೂ 'ಮಹೀಂದ್ರಾ ಉಡೋ'ಗೆ ಬದಲಾಗಿ ತೆಗೆದುಕೊಳ್ಳಬಹುದು. ರೂ.3.23 ಲಕ್ಷದಿಂದ ರೂ.3.38 ಲಕ್ಷ ಎಕ್ಸ್-ಶೋರೂಂ) ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. 7.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 139 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 55 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ಈ 'ಮಹೀಂದ್ರಾ ಟ್ರಿಯೋ' ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇಕೋ ಹಾಗೂ ಬೂಸ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಹೈಡ್ರಾಲಿಕ್ ಶಾಕ್ ಅಬ್ಸಾರ್ಬರ್ ಹಾಗೂ ಹಿಂಭಾಗ (ರೇರ್) ಹೈಡ್ರಾಲಿಕ್ ಡ್ಯಾಂಪರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








