ಈ ಜನಪ್ರಿಯ ಬಜಾಜ್ ಬಂಡಿಗೆ 5 ಪರ್ಯಾಯ ಬೈಕ್‌ಗಳಿವು.. ಬರೀ 65,897 ರೂಪಾಯಿ.. 90 ಕಿ.ಮೀ ಮೈಲೇಜ್!
ಬಜಾಜ್ ಪ್ಲಾಟಿನಾ 100 (Bajaj Platina 100) ಬಡವರ ಬಂಡಿ ಮನೆ ಮಾತಾಗಿದೆ. ಅಗ್ಗದ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಯಿಂದಲೂ ಹೆಚ್ಚು ಜನಪ್ರಿಯವಾಗಿದೆ. ರೂ.65,897 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಬ್ಲ್ಯಾಕ್ - ರೆಡ್, ಬ್ಲ್ಯಾಕ್ - ಸಿಲ್ವರ್, ಬ್ಲ್ಯಾಕ್ - ಗೋಲ್ಡ್ ಮತ್ತು ಬ್ಲ್ಯಾಕ್ - ಬ್ಲ್ಯೂ ಎಂಬ ಬಣ್ಣದ ಆಯ್ಕೆಯಲ್ಲಿಯೂ ಲಭ್ಯವಿದೆ. 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,255 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ಈ ಮೋಟಾರ್‌ಸೈಕಲ್ 102 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 4 ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 75 ರಿಂದ 90 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ನೀವು ಇದೇ 'ಬಜಾಜ್ ಪ್ಲಾಟಿನಾ 100'ಗೆ ಬದಲಾಗಿ ಈ 5 ಬೈಕ್‌ಗಳಾದ ಹೀರೋ ಸ್ಪ್ಲೆಂಡರ್ ಪ್ಲಸ್, ಹೋಂಡಾ ಶೈನ್ 100, ಹೀರೋ ಹೆಚ್ಎಫ್ ಡಿಲಕ್ಸ್, ಟಿವಿಎಸ್ ರೇಡಿಯನ್ ಹಾಗೂ ಟಿವಿಎಸ್ ಸ್ಪೋರ್ಟ್‌ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus):
ಇದು ಪ್ರಮುಖ ಮೋಟಾರ್‌ಸೈಕಲ್ ಆಗಿದ್ದು, ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.74,196 ರಿಂದ ರೂ.76,353 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 70 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 87 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್‌ನಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಶೈನ್ 100 (Honda Shine 100):
ಈ ಬೈಕ್ ಸಹ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ರೂ.65,243 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 98.98-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ & ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಸಿಬಿಎಸ್ (ಕಾಂಬಿ ಬ್ರೇಕ್ ಸಿಸ್ಟಮ್) ಹಾಗೂ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಹೀರೋ ಹೆಚ್ಎಫ್ ಡಿಲಕ್ಸ್ (Hero HF Deluxe):
ಇದನ್ನು ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಮುಗಿಬಿದ್ದು ಕೊಂಡುಕೊಳ್ಳುತ್ತಾರೆ. ಅದಕ್ಕೆ ತಕ್ಕಂತೆ ರೂ. 56,742 ರಿಂದ ರೂ.69,235 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 70 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ರೇಡಿಯನ್ (Tvs Radeon):
ಈ ಮೋಟಾರ್‌ಸೈಕಲ್‌ನ್ನು ಖರೀದಿದಾರರು ಇಷ್ಟಪಟ್ಟು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ರೂ.68,100 ರಿಂದ ರೂ.80,300 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 60 ರಿಂದ 70 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಟಿವಿಎಸ್ ಸ್ಪೋರ್ಟ್ (TVS Sport):
ಇದು ಪ್ರಖ್ಯಾತ ಬೈಕ್ ಆಗಿದೆ. ರೂ.55,500 ರಿಂದ ರೂ.57,500 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 70 ರಿಂದ 75 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








