TVS: 158 Km ರೇಂಜ್.. ಅಗ್ಗದ ಟಿವಿಎಸ್ ಆರ್ಬಿಟರ್‌ಗೆ 5 ಪರ್ಯಾಯ ಇ-ಸ್ಕೂಟರ್‌ಗಳಿವು.. ಬೆಲೆ ಎಷ್ಟು.. ವಿಶೇಷತೆಗಳೇನು?
ಟಿವಿಎಸ್ ಆರ್ಬಿಟರ್ (TVS Orbiter) ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಇದು ಕನಿಷ್ಠ ರೂ.84,500 ಹಾಗೂ ಗರಿಷ್ಠ ರೂ.92,250 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಆರ್ಬಿಟರ್ ವಿ1 ಹಾಗೂ ಆರ್ಬಿಟರ್ ವಿ2 ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ನಿಯಾನ್ ಸನ್‌ಬರ್ಸ್ಟ್, ಸ್ಟ್ರಾಟೋಸ್ ಬ್ಲ್ಯೂ, ಕಾಸ್ಮಿಕ್ ಟೈಟಾನಿಯಂ, ಲೂನಾರ್ ಗ್ರೇ, ಮಾರ್ಷಿಯನ್ ಕಾಪರ್ ಮತ್ತು ಸ್ಟೆಲ್ಲರ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. ಸಾಕಷ್ಟು ವಿಶಾಲವಾಗಿದೆ. 155 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,301 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ನೂತನ 'ಆರ್ಬಿಟರ್' 1.8 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 86 ರಿಂದ 158 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕನೆಕ್ಟ್ಡ್ ಸ್ಮಾರ್ಟ್‌ಫೋನ್ ಅಪ್ಲಿಕೇಶನ್, ಟರ್ನ್-ಬೈ-ಟರ್ನ್, ಒಟಿಎ ಅಪ್‌ಡೇಟ್‌ಗಳು, ಹಿಲ್ ಹೋಲ್ಡ್ ಅಸಿಸ್ಟ್ ಹಾಗೂ ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ನೀವು ಇದೇ 'ಟಿವಿಎಸ್ ಆರ್ಬಿಟರ್'ಗೆ ಬದಲಾಗಿ ಈ 5 ಎಲೆಕ್ಟ್ರಿಕ್ ಸ್ಕೂಟರ್‌ಗಳಾದ ಹೀರೋ ವಿಡಾ ವಿಎಕ್ಸ್2, ಯಮಹಾ ಇಸಿ-06, ಎಥರ್ ರಿಜ್ಟಾ, ಹೀರೋ ವಿಡಾ ವಿ2 ಹಾಗೂ ಸುಜುಕಿ ಇ ಆಕ್ಸೆಸ್ ಮಾಡೆಲ್‌ಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಹೀರೋ ವಿಡಾ ವಿಎಕ್ಸ್2 (Hero Vida VX2):
ಇದು ಕೈಗೆಟುಕುವ ಬೆಲೆಯಲ್ಲಿಯೂ ದೊರೆಯುತ್ತದೆ. ರೂ.73,850 ರಿಂದ ರೂ.94,800 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 92 ರಿಂದ 142 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ರೇರ್ ಪಿಲಿಯನ್ ಬ್ಯಾಕ್‌ರೆಸ್ಟ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಯಮಹಾ ಇಸಿ-06 (Yamaha EC-06):
ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.67 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 169 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಎಥರ್ ರಿಜ್ಟಾ (Ather Rizta):
ಇದೊಂದು ಜನಪ್ರಿಯ ಇ-ಸ್ಕೂಟರ್ ಆಗಿದೆ. ರೂ.1.05 ಲಕ್ಷದಿಂದ ರೂ.1.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಹಾಗೂ ಮಲ್ಟಿ ಪರ್ಪಸ್ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ವಿಡಾ ವಿ2 (Hero Vida V2):
ಈ ಎಲೆಕ್ಟ್ರಿಕ್ ಸ್ಕೂಟರ್, ರೂ.1.04 ಲಕ್ಷದಿಂದ ರೂ.1.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 3.44 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 3.94 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 143 ರಿಂದ 165 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಸುಜುಕಿ ಇ ಆಕ್ಸೆಸ್ (Suzuki e Access):
ಇದು ನಂಬಿಕಾರ್ಹ ಆಗಿದೆ. ರೂ.1.88 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 3.07 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 95 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಟಿಎಫ್‌ಟಿ ಡಿಸ್‌ಪ್ಲೇ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ಪಡೆದಿದೆ. ಸವಾರರ ರಕ್ಷಣೆಯ ಸಲುವಾಗಿ ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








