ನೀವು ಗಿಫ್ಟ್ ಕೊಡಬೇಕೇ.. ಮಹಿಳೆಯರಿಗೆ ಈ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಸ್ಟ್.. 212 ಕಿ.ಮೀವರೆಗೆ ರೇಂಜ್.. ಬೆಲೆ ಎಷ್ಟು?

ಪ್ರತಿ ವರ್ಷ ಮಾರ್ಚ್ 8ರಂದು ವಿಶ್ವ ಮಹಿಳಾ ದಿನ (International Women's Day) ಆಚರಿಸಲಾಗುತ್ತದೆ. ಈ ದಿನ ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕ್ಷೇತ್ರದ ಮಹಿಳಾ ಸಾಧಕರನ್ನು ಗುರುತಿಸಿ, ಸನ್ಮಾನಿಸಲಾಗುತ್ತದೆ. ಜೊತೆಗೆ ಮಹಿಳಾ ಹಕ್ಕುಗಳು ಮತ್ತು ಸಮಾನತೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಇಂದು ನಿಮ್ಮ ಮಡದಿ ಅಥವಾ ಸಹೋದರಿಗೆ ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಗಿಫ್ಟ್ ನೀಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಟಿವಿಎಸ್ ಐಕ್ಯೂಬ್, ಎಥರ್ ರಿಜ್ಟಾ, ಹೀರೋ ವಿಡಾ ವಿಎಕ್ಸ್2, ಟಿವಿಎಸ್ ಆರ್ಬಿಟರ್ ಹಾಗೂ ಯಮಹಾ ಇಸಿ-06ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಿವಿಎಸ್ ಐಕ್ಯೂಬ್ (Tvs iQube):

ಇದು ನಂಬರ್ 1 ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಮಹಿಳೆಯರಿಗೆ ಬೆಸ್ಟ್ ಚಾಯ್ಸ್ ಆಗಲಿದೆ. ರೂ.1.10 ಲಕ್ಷದಿಂದ ರೂ.1.61 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಟ್ಯಾಂಡರ್ಡ್ ಐಕ್ಯೂಬ್, ಐಕ್ಯೂಬ್ ಎಸ್ ಹಾಗೂ ಐಕ್ಯೂಬ್ ಎಸ್‌ಟಿ ರೂಪಾಂತರಗಳೊಂದಿಗೂ ದೊರೆಯುತ್ತದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ವೈಟ್, ಟೈಟಾನಿಯಂ ಗ್ರೇ ಗ್ಲಾಸಿ, ವಾಲ್ನಟ್ ಬ್ರೌನ್, ಕಾಪರ್ ಬ್ರೌನ್ ಬೀಜ್ & ಸ್ಟಾರ್ಲೈಟ್ ಬ್ಲೂ ಬೀಜ್ ಎಂಬ ಬಣ್ಣದೊಂದಿಗೆ ಸಿಗುತ್ತದೆ. 157 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1301 ವೀಲ್‌ಬೇಸ್‌ನ್ನು ಪಡೆದಿದೆ.

Best 5 Electric Scooters For Women In India iQube Rizta Vida Vx2 Orbiter And EC-06

ನೂತನ 'ಐಕ್ಯೂಬ್' 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್), 3,1 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್), 3.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 5.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 94 ರಿಂದ 212 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಎಥರ್ ರಿಜ್ಟಾ (Ather Rizta):

ಈ ಸ್ಕೂಟರ್‌ನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಮಹಿಳೆಯರು ಸುಲಭವಾಗಿ ಬಳಕೆ ಮಾಡಬಹುದು. ರೂ.1.05 ಲಕ್ಷದಿಂದ ರೂ.1.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ರಿಜ್ಟಾ ಎಸ್ & ರಿಜ್ಟಾ ಜಡ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಡೆಕ್ಕನ್ ಗ್ರೇ, ಸಿಯಾಚಿನ್ ವೈಟ್, ಪ್ಯಾಂಗಾಂಗ್ ಬ್ಲೂ ಹಾಗೂ ಟೆರಾಕೋಟಾ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 150 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 1,285 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Best 5 Electric Scooters For Women In India iQube Rizta Vida Vx2 Orbiter And EC-06

ಹೊಸ 'ರಿಜ್ಟಾ' 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.7 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ದೊಡ್ಡ ಗಾತ್ರದ 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಹಾಗೂ ಮಲ್ಟಿ ಪರ್ಪಸ್ ಚಾರ್ಜರ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೀರೋ ವಿಡಾ ವಿಎಕ್ಸ್2 (Hero Vida Vx2):

ಇದೊಂದು ಪ್ರಖ್ಯಾತ ಸ್ಕೂಟರ್ ಆಗಿದ್ದು, ಮಹಿಳೆಯರಿಗೆ ಹೇಳಿ ಮಾಡಿದ ರೀತಿಯಲ್ಲಿದೆ. ರೂ.73,850 ರಿಂದ ರೂ.94,800 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 3.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ 92 ರಿಂದ 142 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಜಿಪಿಎಸ್ ಟ್ರ್ಯಾಕಿಂಗ್ ಮತ್ತು ರಿಮೋಟ್ ಇಮೊಬಿಲೈಸೇಶನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Best 5 Electric Scooters For Women In India iQube Rizta Vida Vx2 Orbiter And EC-06

ಟಿವಿಎಸ್ ಆರ್ಬಿಟರ್ (TVS Orbiter):

ಈ ಸ್ಕೂಟರ್‌ನ್ನು ಜನಮೆಚ್ಚಿದ್ದಾರೆ. ಮಹಿಳೆಯರಿಗೆ ಅತ್ಯುತ್ತಮವಾದ ಆಯ್ಕೆಯಾಗಲಿದೆ. ರೂ.1.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 3.1 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 158 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಕ್ರೂಸ್ ಕಂಟ್ರೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

Best 5 Electric Scooters For Women In India iQube Rizta Vida Vx2 Orbiter And EC-06

ಯಮಹಾ ಇಸಿ-06 (Yamaha EC-06):

ಇದು ಹೊಸ ಸ್ಕೂಟರ್ ಆಗಿದ್ದು, ಮಹಿಳೆಯರಿಗೆ ಹೆಚ್ಚು ಸೂಕ್ತವಾಗಲಿದೆ. ರೂ.1.67 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 169 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌ ಹಾಗೂ ರಿವರ್ಸ್ ಅಸಿಸ್ಟ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Sunday, March 8, 2026, 11:51 [IST]
English summary
Best 5 electric scooters for women in india iqube rizta vida vx2 orbiter and ec 06
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+