ಬೆಸ್ಟ್ 5 ಮೈಲೇಜ್ ಸ್ಕೂಟರ್‌ಗಳಿವು.. ಬೆಲೆಯೂ ಕಮ್ಮಿ.. ಜನಪ್ರಿಯ ಆಕ್ಟಿವಾದಿಂದ ಆಕ್ಸೆಸ್ 125ವರೆಗೆ!
ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಸ್ಕೂಟರ್‌ಗಳಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ನೀವು ದಿನಬಳಕೆಗೆ ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಗರಿಷ್ಠ ಮೈಲೇಜ್ ನೀಡಬಲ್ಲ ಹೋಂಡಾ ಆಕ್ಟಿವಾ 125, ಯಮಹಾ ಫ್ಯಾಸಿನೊ 125 ಎಫ್ಐ ಹೈಬ್ರಿಡ್, ಟಿವಿಎಸ್ ಜುಪಿಟರ್ 125, ಟಿವಿಎಸ್ ಎನ್‌ಟಾರ್ಕ್ 125 ಹಾಗೂ ಸುಜುಕಿ ಆಕ್ಸೆಸ್ 125 ಮಾಡೆಲ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಹೋಂಡಾ ಆಕ್ಟಿವಾ 125 (Honda Activa 125):
ಇದು ಪ್ರಖ್ಯಾತ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಅಗ್ಗದ ದರದಲ್ಲೂ ಲಭ್ಯವಿದೆ. ರೂ.88,339 ರಿಂದ ರೂ.94,096 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಪ್ರೆಷಿಯಸ್ ವೈಟ್, ರೆಬೆಲ್ ರೆಡ್ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ ಹಾಗೂ ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಚ್ಚ ಹೊಸ 'ಆಕ್ಟಿವಾ' ಸ್ಕೂಟರ್, ಶಕ್ತಿಯುತವಾದ 123.92-ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 47 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಟಿಎಫ್‌ಟಿ ಕನ್ಸೋಲ್ & ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಯಮಹಾ ಫ್ಯಾಸಿನೊ 125 ಎಫ್ಐ ಹೈಬ್ರಿಡ್ (Yamaha Fascino 125 Fi Hybrid):
ಈ ಸ್ಕೂಟರ್‌ನ್ನು ಗ್ರಾಹಕರು ಮೆಚ್ಚಿದ್ದಾರೆ. ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ರೂ.74,910 ರಿಂದ ರೂ.95,200 (ಎಕ್ಸ್-ಶೋರೂಂ) ದರವನ್ನು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಮೆಟಾಲಿಕ್ ಬ್ಲ್ಯಾಕ್, ಡಾರ್ಕ್ ಮ್ಯಾಟ್ ಬ್ಲೂ, ವಿವಿಡ್ ರೆಡ್, ಮ್ಯಾಟ್ ಕಾಪರ್, ಮೆಟಾಲಿಕ್ ವೈಟ್, ಕೂಲ್ ಬ್ಲೂ ಮೆಟಾಲಿಕ್ ಮತ್ತು ಡಾರ್ಕ್ ಮ್ಯಾಟ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ಫ್ಯಾಸಿನೊ' ಬಲಿಷ್ಠವಾದ 125-ಸಿಸಿ ಮೈಲ್ಡ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. 68.75 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 5-ಇಂಚಿನ ಟಿಎಫ್‌ಟಿ ಕನ್ಸೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಟಿವಿಎಸ್ ಜುಪಿಟರ್ 125 (TVS Jupiter 125):
ಇದೊಂದು ಜನಪ್ರಿಯ ಸ್ಕೂಟರ್ ಆಗಿದೆ. ರೂ.84,150 ರಿಂದ ರೂ.93,110 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 50 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ & ಎಲೆಕ್ಟ್ರಿಕ್ ಸೈಲಂಟ್ ಸ್ಟಾರ್ಟ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ಎನ್‌ಟಾರ್ಕ್ 125 (TVS Ntorq 125):
ಈ ಸ್ಕೂಟರ್‌ನ್ನು ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ರೂ.81,250 ರಿಂದ ರೂ.1 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 47 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 98 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ & ಯುಎಸ್‌ಬಿ ಚಾರ್ಜರ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ.

ಸುಜುಕಿ ಆಕ್ಸೆಸ್ 125 (Suzuki Access 125):
ಇದು ವಿಶ್ವಾಸಾರ್ಹ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ರೂ.81,508 ರಿಂದ ರೂ.1.01 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 45 ರಿಂದ 64 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 4.2-ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








