ಬಡವರಿಗೆ ಬೆಸ್ಟ್: 5 ಜನಪ್ರಿಯ ಬೈಕ್‌ಗಳಿವು.. 75 ಕಿ.ಮೀವರೆಗೆ ಮೈಲೇಜ್.. ಬೆಲೆಯೂ ಕಮ್ಮಿ!

ಭಾರತದಲ್ಲಿ ಮೋಟಾರ್‌ಸೈಕಲ್‌ಗಳಿಗೆ ವಿಪರೀತವಾದ ಬೇಡಿಕೆಯಿದೆ. ಇವುಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಬಜಾಜ್ ಪ್ಲಾಟಿನಾ 110, ಹೀರೋ ಪ್ಯಾಶನ್ ಪ್ಲಸ್, ಟಿವಿಎಸ್ ರೇಡಿಯನ್, ಹೀರೋ ಹೆಚ್ಎಫ್ ಡಿಲಕ್ಸ್ ಹಾಗೂ ಹೋಂಡಾ ಶೈನ್ 100 ಡಿಎಕ್ಸ್ ಮಾಡೆಲ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಬಜಾಜ್ ಪ್ಲಾಟಿನಾ 110 (Bajaj Platina 110):

ಇದೊಂದು ಜನಮೆಚ್ಚಿದ ಮೋಟಾರ್‌ಸೈಕಲ್‌ ಎಂದೇ ಮನೆ ಮಾತಾಗಿದೆ. ಕಡಿಮೆ ಬೆಲೆಯಲ್ಲಿಯೂ ಲಭ್ಯವಿದೆ. ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.69,284 ರಿಂದ ರೂ.74,214 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಬೊನಿ ಬ್ಲ್ಯಾಕ್-ಬ್ಲ್ಯೂ ಹಾಗೂ ಎಬೊನಿ ಬ್ಲ್ಯಾಕ್-ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,255 ಎಂಎಂ ವೀಲ್‌ಬೇಸ್‌ನ್ನು ತನ್ನದಾಗಿಸಿಕೊಂಡಿದೆ.

Best 5 Popular Bikes In India Platina 110 Passion Plus Radeon HF Deluxe And Shine 100 DX

ನೂತನ 'ಪ್ಲಾಟಿನಾ' 115 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 70 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) & ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೀರೋ ಪ್ಯಾಶನ್ ಪ್ಲಸ್ (Hero Passion Plus):

ಈ ಬೈಕ್‌ನ್ನು ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ರೂ.76,941 ರಿಂದ ರೂ.78,324 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಬ್ಲ್ಯಾಕ್ ಹೆವಿ ಗ್ರೇ, ಬ್ಲ್ಯಾಕ್ ಗ್ರೇ ಸ್ಟ್ರೈಪ್, ಸ್ಪೋರ್ಟ್ ರೆಡ್ ಹಾಗೂ ಬ್ಲ್ಯಾಕ್ ನೆಕ್ಸಸ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 168 ಎಂಎಂ ಗ್ರೌಂಡ್ ಕ್ಲಿಯರೆನ್ ಮತ್ತು 1235 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Best 5 Popular Bikes In India Platina 110 Passion Plus Radeon HF Deluxe And Shine 100 DX

ಹೊಸ 'ಪ್ಯಾಶನ್ ಪ್ಲಸ್' 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 60 ರಿಂದ 70 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಡಿಜಿಟಲ್ ಅನಲಾಗ್ ಕ್ಲಸ್ಟರ್ ಹಾಗೂ ಮೊಬೈಲ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಟಿವಿಎಸ್ ರೇಡಿಯನ್ (Tvs Radeon):

ಇದು ಜನಪ್ರಿಯ ಮೋಟಾರ್‌ಸೈಕಲ್‌ ಆಗಿದೆ. ರೂ.68,000 ರಿಂದ ರೂ.80,600 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 60 ರಿಂದ 70 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

Best 5 Popular Bikes In India Platina 110 Passion Plus Radeon HF Deluxe And Shine 100 DX

ಹೀರೋ ಹೆಚ್ಎಫ್ ಡಿಲಕ್ಸ್ (Hero HF Deluxe):

ಈ ಬೈಕ್‌ನ್ನು ಶ್ರೀಸಾಮಾನ್ಯರು ಮೆಚ್ಚಿಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ರೂ.60,631 ರಿಂದ ರೂ.69,234 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 97 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 60 ರಿಂದ 75 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Best 5 Popular Bikes In India Platina 110 Passion Plus Radeon HF Deluxe And Shine 100 DX

ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX):

ಇದೊಂದು ನಂಬಿಕಾರ್ಹ ಮೋಟಾರ್‌ಸೈಕಲ್‌ ಆಗಿ ಹೊರಹೊಮ್ಮಿದ್ದು, ಯುವ ಗ್ರಾಹಕರಿಗಾಗಿಯೇ ಸಿದ್ದಪಡಿಸಲಾಗಿದೆ. ರೂ.71,746 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಸೈಲೆಂಟ್ ಎಲೆಕ್ಟ್ರಿಕ್ ಸ್ಟಾರ್ಟರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) ಮತ್ತು ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

Article Published On: Friday, February 13, 2026, 13:31 [IST]
English summary
Best 5 popular bikes in india platina 110 passion plus radeon hf deluxe and shine 100 dx
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+