ಬಡವರಿಗೆ ಫರ್ಫೆಕ್ಟ್.. 5 ಜನಪ್ರಿಯ ಸ್ಕೂಟರ್‌ಗಳಿವು.. 68.75 ಕಿ.ಮೀ ವರೆಗೆ ಮೈಲೇಜ್.. ಬೆಲೆಯೂ ಅಗ್ಗ!
ದಿನನಿತ್ಯದ ಬಳಕೆಗೆ ಸ್ಕೂಟರ್‌ಗಳು ಬೇಕೇ ಬೇಕು. ಇವುಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ನೀವು ಉತ್ತಮ ಇಂಧನ ದಕ್ಷತೆಗೆ ಹೆಸರಾಗಿರುವ ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದ್ರೆ ಸುಜುಕಿ ಆಕ್ಸೆಸ್ 125, ಟಿವಿಎಸ್ ಜುಪಿಟರ್ 110, ಹೋಂಡಾ ಆಕ್ಟಿವಾ 110, ಯಮಹಾ ಫ್ಯಾಸಿನೋ 125 ಎಫ್ಐ ಹೈಬ್ರಿಡ್ ಹಾಗೂ ಹೀರೋ ಡೆಸ್ಟಿನಿ 125ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ.. ಈ ಸ್ಕೂಟರ್‌ಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಸುಜುಕಿ ಆಕ್ಸೆಸ್ 125 (Suzuki Access 125):
ಇದು ಜನಪ್ರಿಯ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಮಹಿಳೆ ಹಾಗೂ ಪುರುಷರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.87,849 ರಿಂದ ರೂ.1.01 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್ ಮತ್ತು ಸಾಲಿಡ್ ಐಸ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 160 ಎಂಎಂ ಗ್ರೌಂಡ್ ಕ್ಲಿಯರೆನ್ ಹಾಗೂ 1,260 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಆಕ್ಸೆಸ್' 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 45 ರಿಂದ 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 4.2-ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಟಿವಿಎಸ್ ಜುಪಿಟರ್ 110 (TVS Jupiter 110):
ಇದೊಂದು ಪ್ರಖ್ಯಾತ ಸ್ಕೂಟರ್ ಆಗಿದೆ. ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.76.150 ರಿಂದ ರೂ.88,350 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಟೈಟಾನಿಯಂ ಗ್ರೇ ಮ್ಯಾಟ್, ಡಾನ್ ಬ್ಲೂ ಮ್ಯಾಟ್, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್, ಲೂನಾರ್ ವೈಟ್ ಗ್ಲಾಸ್, ಮೆಟಿಯರ್ ರೆಡ್ ಗ್ಲಾಸ್ ಮತ್ತು ಸ್ಟಾರ್‌ಲೈಟ್ ಬ್ಲೂ ಗ್ಲಾಸ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,275 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಜುಪಿಟರ್' 113 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಪುಲ್-ಡಿಜಿಟಲ್ ಕಲರ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಹೋಂಡಾ ಆಕ್ಟಿವಾ 110 (Honda Activa 110):
ಈ ಸ್ಕೂಟರ್‌ನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ರೂ.75,433 ರಿಂದ ರೂ.89,806 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 4.2-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ & ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಯಮಹಾ ಫ್ಯಾಸಿನೋ 125 (Yamaha Fascino 125 FI Hybrid):
ಇದು ಪ್ರಖ್ಯಾತ ಸ್ಕೂಟರ್ ಆಗಿದೆ. ರೂ.74,910 ರಿಂದ ರೂ.95,200 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 125 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 68.75 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೀರೋ ಡೆಸ್ಟಿನಿ 125 (Hero Destini 125):
ಹೊಸ 'ಡೆಸ್ಟಿನಿ'ಯನ್ನು ಜನಮೆಚ್ಚಿದ್ದಾರೆ. ರೂ.75,838 ರಿಂದ ರೂ.84,919 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 59 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಡಿಜಿಟಲ್ ಡಿಸ್‌ಪ್ಲೇ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








