ಬಡವರಿಗೆ ಪರ್ಫೆಕ್ಟ್ ಬೈಕ್‌ಗಳಿವು.. ಬೆಲೆ ಇಷ್ಟೇನಾ, ರೂ.69,000.. 75 Km ವರೆಗೆ ಮೈಲೇಜ್!
ದಿನಬಳಕೆಗೆ ಮೋಟಾರ್‌ಸೈಕಲ್‌ಗಳು ಬೇಕೇ ಬೇಕು. ಇವುಗಳನ್ನು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ '110 ಸಿಸಿ' ಮೋಟಾರ್‌ಸೈಕಲ್‌ಗಳಾದ ಬಜಾಜ್ ಪ್ಲಾಟಿನಾ 110, ಟಿವಿಎಸ್ ಸ್ಟಾರ್ ಸಿಟಿ ಪ್ಲಸ್, ಟಿವಿಎಸ್ ರೇಡಿಯನ್, ಬಜಾಜ್ ಸಿಟಿ 110ಎಕ್ಸ್ ಹಾಗೂ ಹೋಂಡಾ ಲಿಯೋಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಬಜಾಜ್ ಪ್ಲಾಟಿನಾ 110 (Bajaj Platina 110):
ಇದೊಂದು ಜನಪ್ರಿಯ ಬೈಕ್ ಎಂದೇ ಹೆಸರುವಾಸಿಯಾಗಿದೆ. ರೂ.69,331 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಬೊನಿ ಬ್ಲ್ಯಾಕ್-ಬ್ಲ್ಯೂ, ಎಬೊನಿ ಬ್ಲ್ಯಾಕ್-ರೆಡ್, ಕಾಕ್‌ಟೈಲ್ ವೈನ್ ರೆಡ್-ಆರೆಂಜ್ ಮತ್ತು ಯೆಲ್ಲೋ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,255 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ಪ್ಲಾಟಿನಾ' ಮೋಟಾರ್‌ಸೈಕಲ್, 115-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 70 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ (TVS Star City Plus):
ಈ ಬೈಕ್‌ನ್ನು ಗ್ರಾಹಕರು ಕೂಡ ಮೆಚ್ಚಿಕೊಂಡಿದ್ದಾರೆ. ರೂ.72,200 ದಿಂದ ರೂ.74,900 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಬ್ಲ್ಯಾಕ್ ರೆಡ್, ಬ್ಲ್ಯಾಕ್ ಬ್ಲ್ಯೂ, ಬ್ಲ್ಯೂ ಸಿಲ್ವರ್, ಗ್ರೇ ಬ್ಲ್ಯಾಕ್ ಮತ್ತು ಬ್ಲ್ಯಾಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 172 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,260 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಟಿವಿಎಸ್ ಸ್ಟಾರ್ ಸಿಟಿ ಪ್ಲಸ್' 109.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 75 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಟಿವಿಎಸ್ ರೇಡಿಯನ್ (Tvs Radeon):
ಇದು ಪ್ರಖ್ಯಾತ ಮೋಟಾರ್‌ಸೈಕಲ್ ಆಗಿದೆ. ರೂ.68,100 ರಿಂದ ರೂ.80,300 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 109.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಇದ್ದು, 60 ರಿಂದ 70 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಎಲೆಕ್ಟ್ರಿಕ್ ಸೆಲ್ಫ್-ಸ್ಟಾರ್ಟ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಬಜಾಜ್ ಸಿಟಿ 110ಎಕ್ಸ್ (Bajaj CT 110X):
ಈ ಬೈಕ್ ರೂ.67,885 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 115.45-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 70 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸಿಬಿಎಸ್ (ಕಂಬೈನ್ಡ್ -ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಕೇವಲ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಲಿವೋ (Honda Livo):
ಇದೊಂದು ಪ್ರಮುಖ ಮೋಟಾರ್‌ಸೈಕಲ್ ಆಗಿದೆ. ರೂ.77,492 ರಿಂದ ರೂ.80,059 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 109.51-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 60 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಇಂಟಿಗ್ರೇಟೆಡ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








