ಇವೇ 5 ಪವರ್‌ಫುಲ್‌ 150 ಸಿಸಿ ಸ್ಕೂಟರ್‌ಗಳು.. ಸಾಮಾನ್ಯ ಜನರು ಖರೀದಿಸಬಹುದು, 48 Km ವರೆಗೆ ಮೈಲೇಜ್.. ಬೆಲೆ ಇಷ್ಟೇನಾ?

ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಸ್ಕೂಟರ್‌ಗಳಿಗೆ ವಿಪರೀತ ಬೇಡಿಕೆಯಿದೆ. ಇವು ದಿನಬಳಕೆಗೆ ಹೆಚ್ಚು ಸೂಕ್ತವಾಗಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 150 ಸಿಸಿ ವಿಭಾಗದ ಟಿವಿಎಸ್ ಎನ್‌ಟಾರ್ಕ್, ಹೀರೋ ಜೂಮ್, ಯಮಹಾ ಏರೋಕ್ಸ್, ಏಪ್ರಿಲಿಯಾ ಎಸ್ಎಕ್ಸ್ಆರ್ ಹಾಗೂ ಏಪ್ರಿಲಿಯಾ ಎಸ್‌ಆರ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಈ ನೂತನ ಸ್ಕೂಟರ್‌ಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಿವಿಎಸ್ ಎನ್‌ಟಾರ್ಕ್ 150 (TVS Ntorq 150):

ಇದು ಜಗಮೆಚ್ಚಿದ ಸ್ಕೂಟರ್ ಎಂದೇ ಮನೆ ಮಾತಾಗಿದೆ. ರೂ.1.09 ಲಕ್ಷದಿಂದ ರೂ.1.18 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಸ್ಟೆಲ್ತ್ ಸಿಲ್ವರ್, ರೇಸಿಂಗ್ ರೆಡ್, ಟರ್ಬೊ ಬ್ಲೂ ಮತ್ತು ನೈಟ್ರೋ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 155 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 115 ಕೆಜಿ ತೂಕವಿದೆ.

Best Five 150 cc Scooters In India TVS Ntorq Hero Xoom Yamaha Aerox Aprilia SXR And Aprilia SR

ನೂತನ 'ಎನ್‌ಟಾರ್ಕ್' 149.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 40 ಕಿಲೋಮೀಟರ್‌ವರೆಗೆ ಮೈಲೇಜ್ ಹೊಂದಿದೆ. ಫುಲ್-ಟಿಎಫ್‌ಟಿ ಡಿಸ್‌ಪ್ಲೇ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 104 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೀರೋ ಜೂಮ್ 160 (Hero Xoom 160):

ಈ ಸ್ಕೂಟರ್‌ನ್ನು ಖರೀದಿದಾರರು ಮೆಚ್ಚಿಕೊಂಡಿದ್ದಾರೆ. ರೂ.1.36 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಮ್ಯಾಟ್ ರೇನ್‌ಫಾರೆಸ್ಟ್ ಗ್ರೇ, ಸಮ್ಮಿಟ್ ವೈಟ್, ಕ್ಯಾನ್ಯನ್ ರೆಡ್ ಹಾಗೂ ಮ್ಯಾಟ್ ವಾಲ್ಕ್ಯಾನಿಕ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 155 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1348 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 142 ಕೆಜಿ ತೂಕವಿದೆ.

Best Five 150 cc Scooters In India TVS Ntorq Hero Xoom Yamaha Aerox Aprilia SXR And Aprilia SR

ಹೊಸ 'ಜೂಮ್' 156-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 40 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಸ್ಮಾರ್ಟ್-ಕೀ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಯಮಹಾ ಏರೋಕ್ಸ್ 155 (Yamaha Aerox 155):

ಇದೊಂದು ಪ್ರಮುಖ ಸ್ಕೂಟರ್ ಆಗಿದೆ. ರೂ.1.42 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 155-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 48.62 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 111 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳಿವೆ. ಸವಾರರ ರಕ್ಷಣೆಗಾಗಿ ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Best Five 150 cc Scooters In India TVS Ntorq Hero Xoom Yamaha Aerox Aprilia SXR And Aprilia SR

ಏಪ್ರಿಲಿಯಾ ಎಸ್ಎಕ್ಸ್ಆರ್ (Aprilia SXR 160):

ಈ ಸ್ಕೂಟರ್ ರೂ.1.31 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 160-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 35 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 93 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಏಪ್ರಿಲಿಯಾ ಎಸ್ಆರ್ 160 (Aprilia SR 160):

ಇದು ಪ್ರಖ್ಯಾತ ಸ್ಕೂಟರ್ ಆಗಿದೆ. ರೂ.1.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.160-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 35 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಫುಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Tuesday, February 10, 2026, 8:30 [IST]
English summary
Best five 150 cc scooters in india tvs ntorq hero xoom yamaha aerox aprilia sxr and aprilia sr
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+