Hero: ಪವರ್ ತೋರಿಸಿದ ಹೀರೋ.. ಈ ಬೈಕ್‌ಗೆ ಮನಸೋತ ಗ್ರಾಹಕರು.. ರೂ.82,000 ದಿಂದ ಶುರು!

ಹೀರೋ ಗ್ಲಾಮರ್ (Hero Glamour), ಅಗ್ಗದ ಬೆಲೆಗೆ ಲಭ್ಯವಿರುವ ಪ್ರೀಮಿಯಂ ಮೋಟಾರ್‌ಸೈಕಲ್‌ ಆಗಿದೆ. ಈ ಬೈಕ್‌ಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್ - 2025) 'ಗ್ಲಾಮರ್' ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 17,166 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 6,022 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 185.05% ಪ್ರಗತಿಯಾಗಿದೆ.

ಡಿಸೆಂಬರ್‌ನಲ್ಲಿ 'ಹೀರೋ ಗ್ಲಾಮರ್' ಮಾರಾಟ ಸಂಖ್ಯೆ ಅಧಿಕಗೊಳ್ಳಲು ಹಲವು ಕಾರಣಗಳಿವೆ. ಇದು ಸಾಕಷ್ಟು ಅತ್ಯಾಧುನಿಕವಾಗಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿವೆ. ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ದೀರ್ಘಕಾಲ ಬಾಳಿಕೆಯೂ ಬರುತ್ತದೆ. ಹೀಗಾಗಿ, ಮಾರಾಟವು ಹೆಚ್ಚಳಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ. ಈ ಮೋಟಾರ್‌ಸೈಕಲ್‌ ಸ್ಟ್ಯಾಂಡರ್ಡ್ ಗ್ಲಾಮರ್ ಹಾಗೂ ಗ್ಲಾಮರ್ ಎಕ್ಸ್ 125 ಎಂಬ ಎರಡು ರೂಪದಲ್ಲೂ ಲಭ್ಯವಿದೆ.

Hero Glamour 17 166 Bike Sold In 2025 December

ಸ್ಟ್ಯಾಂಡರ್ಡ್ ಹೀರೋ ಗ್ಲಾಮರ್:

ಇದು ರೂ.82,398 ರಿಂದ ರೂ.86,085 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಬ್ಲ್ಯಾಕ್ ಮೆಟಾಲಿಕ್ ಸಿಲ್ವರ್, ಕ್ಯಾಂಡಿ ಬ್ಲೇಜಿಂಗ್ ರೆಡ್, ಬ್ಲ್ಯಾಕ್ ಸ್ಪೋರ್ಟ್ಸ್ ರೆಡ್ ಮತ್ತು ಟೆಕ್ನೋ ಬ್ಲೂ ಮೆಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,267 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಬೈಕ್ 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 10 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 7.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Hero Glamour 17 166 Bike Sold In 2025 December

ನೂತನ 'ಹೀರೋ ಗ್ಲಾಮರ್' ಡಿಜಿಟಲ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಮತ್ತು ಹಿಂಭಾಗ (ರೇರ್) 5-ಸ್ಟೆಪ್ ಡುಯಲ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಗ್ಲಾಮರ್ ಎಕ್ಸ್ 125:

ಇದೊಂದು ಪ್ರಖ್ಯಾತ ಮಾಡೆಲ್ ಆಗಿದೆ. ರೂ.82,967 ರಿಂದ ರೂ.92,186 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ನೆಕ್ಸಸ್ ಬ್ಲೂ, ಮ್ಯಾಟ್ ಮೆಟಾಲಿಕ್ ಸಿಲ್ವರ್, ಬ್ಲ್ಯಾಕ್ ಟೀಲ್ ಬ್ಲೂ ಮತ್ತು ಬ್ಲ್ಯಾಕ್ ಪರ್ಲ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,267 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಮೋಟಾರ್‌ಸೈಕಲ್‌ 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 10 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. 105 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 5.7 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ 'ಹೀರೋ ಗ್ಲಾಮರ್ ಎಕ್ಸ್ 125' ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಟರ್ನ್-ಬೈ-ಟರ್ನ್ ನಾವಿಗೇಷನ್, ಬ್ಲೂಟೂತ್ ಕನೆಕ್ಟಿವಿಟಿ, ಐಡಲ್-ಸ್ಟಾರ್ಟ್-ಸ್ಟಾಪ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ ಸಿಸ್ಟಮ್ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಮುಂದೆ (ಫ್ರಂಟ್) ಟೆಲಿಸ್ಕೋಪಿಕ್ ಮತ್ತು ಹಿಂದೆ (ರೇರ್) 5-ಸ್ಟೆಪ್ ಹೈಡ್ರಾಲಿಕ್ ಶಾಕ್-ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

More from DriveSpark

Article Published On: Friday, January 30, 2026, 18:00 [IST]
English summary
Hero glamour 17166 bike sold in 2025 december
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+