Hero: ಬಡವರ ಪ್ರೀಮಿಯಂ ಬೈಕ್‌ಯಿದು.. 82,967 ರೂಪಾಯಿ.. ಫುಲ್ ಟ್ಯಾಂಕ್ ಮಾಡಿಸಿದ್ರೆ 650 Km ಮೈಲೇಜ್!

ಹೀರೋ ಗ್ಲಾಮರ್ ಎಕ್ಸ್ 125 (Hero Glamour X 125) ಜನಪ್ರಿಯ ಮೋಟಾರ್‌ಸೈಕಲ್‌ ಎಂದೇ ಹೆಸರುವಾಸಿಯಾಗಿದೆ. ದಿನಬಳಕೆಗೂ ಹೆಚ್ಚು ಸೂಕ್ತವಾಗಿದೆ. ವಿಶೇಷವಾಗಿ ಯುವ ಗ್ರಾಹಕರಿಗಾಗಿ ಸಿದ್ದಪಡಿಸಲಾಗಿದೆ. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಇದೇ 'ಗ್ಲಾಮರ್ ಎಕ್ಸ್ 125' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ನೂತನ 'ಹೀರೋ ಗ್ಲಾಮರ್ ಎಕ್ಸ್ 125' ಬೈಕ್ ಕೈಗೆಟುಕುವ ದರದಲ್ಲೂ ಲಭ್ಯವಿದೆ. ಕನಿಷ್ಠ ರೂ.82,967 ಹಾಗೂ ಗರಿಷ್ಠ ರೂ.92,186 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಲ್ಲ ವರ್ಗದವರು ಸುಲಭವಾಗಿ ಕೊಂಡುಕೊಳ್ಳಬಹುದು. ಡ್ರಮ್ ಬ್ರೇಕ್ (Drum Brake) ಮತ್ತು ಡಿಸ್ಕ್ ಬ್ರೇಕ್ (Disk Brake) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Hero Glamour X 125 Bike Price Design Colours Engine Mileage Features And All Details

ವಿನ್ಯಾಸ & ಬಣ್ಣಗಳು (Design & Colours):

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಮನ ಸೆಳೆಯುತ್ತದೆ. 'ಹೆಚ್' ಆಕಾರಕ್ಕೆ ಹೋಲಿಕೆಯಾಗುವ ಫುಲ್ ಎಲ್ಇಡಿ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಪೊಸಿಷನ್ ಲೈಟ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಮೆಟಾಲಿಕ್ ನೆಕ್ಸಸ್ ಬ್ಲೂ, ಮ್ಯಾಟ್ ಮೆಟಾಲಿಕ್ ಸಿಲ್ವರ್, ಕ್ಯಾಂಡಿ ಬ್ಲೇಜಿಂಗ್ ರೆಡ್, ಬ್ಲ್ಯಾಕ್ ಟೀಲ್ ಬ್ಲೂ ಹಾಗೂ ಬ್ಲ್ಯಾಕ್ ಪರ್ಲ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಸುತ್ತಳತೆ (Dimension):

ಈ ಮೋಟಾರ್‌ಸೈಕಲ್‌ ಹೆಚ್ಚು ವಿಶಾಲವಾಗಿದೆ. 2,045 ಮಿ.ಮೀ ಉದ್ದ, 796 ಮಿ.ಮೀ ಅಗಲ ಮತ್ತು 1,126 ಮಿ.ಮೀ ಎತ್ತರವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,267 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 127 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):

ಹೊಸ 'ಹೀರೋ ಗ್ಲಾಮರ್ ಎಕ್ಸ್ 125' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 124.7-ಸಿಸಿ ಏರ್-ಕೋಲ್ಡ್, 4-ಸ್ಟ್ರೋಕ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8,250 ಆರ್‌ಪಿಎಂನಲ್ಲಿ 11.4 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6,500 ಆರ್‌ಪಿಎಂನಲ್ಲಿ 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಮೈಲೇಜ್ (Mileage):

ಇದು ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. ನಿರ್ವಹಣಾ ವೆಚ್ಚವು ಅಗ್ಗವಾಗಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ 65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಒಮ್ಮೆ ಪೂರ್ತಿಯಾಗಿ ತುಂಬಿಸಿದರೆ 650 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.

ವೈಶಿಷ್ಟ್ಯಗಳು (Features):

ಈ ಬೈಕ್ ಅಡ್ವಾನ್ಸ್ಡ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಟರ್ನ್-ಬೈ-ಟರ್ನ್ ನಾವಿಗೇಷನ್, ಬ್ಲೂಟೂತ್ ಕನೆಕ್ಟಿವಿಟಿ, ಐಡಲ್-ಸ್ಟಾರ್ಟ್-ಸ್ಟಾಪ್ ಸಿಸ್ಟಮ್ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 105 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 5.7 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸೀಟ್ ಎತ್ತರವು 790 ಮಿ.ಮೀ ಇದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):

ನೂತನ 'ಹೀರೋ ಗ್ಲಾಮರ್ ಎಕ್ಸ್ 125' ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) 5-ಸ್ಟೆಪ್ ಹೈಡ್ರಾಲಿಕ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 18-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.

ಪ್ರತಿಸ್ಪರ್ಧಿ ಸ್ಕೂಟರ್‌ಗಳು (Rival Bikes):

ಇದಕ್ಕೆ ಸಾಲು - ಸಾಲು ಪ್ರತಿಸ್ಪರ್ಧಿಗಳಿವೆ. ಟಿವಿಎಸ್ ರೈಡರ್ 125 (TVS Raider 125), ಹೋಂಡಾ ಎಸ್‌ಪಿ 125 (Honda SP 125), ಬಜಾಜ್ ಪಲ್ಸರ್ 125 (Bajaj Pulsar 125) ಹಾಗೂ ಹೀರೋ ಎಕ್ಸ್‌ಟ್ರೀಮ್ 125ಆರ್ (Hero Xtreme 125R) ಮೋಟಾರ್‌ಸೈಕಲ್‌ಗಳು ಪ್ರಬಲವಾದ ಎದುರಾಳಿಯಾಗಿವೆ.

More from DriveSpark

Article Published On: Thursday, January 22, 2026, 18:00 [IST]
English summary
Hero glamour x 125 bike price design colours engine mileage features and all details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+