ಬಡವರಿಗೆ ಪರ್ಫೆಕ್ಟ್ ಚಾಯ್ಸ್.. 77,678 ರೂಪಾಯಿ.. ಫುಲ್ ಟ್ಯಾಂಕ್ ಮಾಡಿಸಿದ್ರೆ 715 Km ಮೈಲೇಜ್!
ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ (Hero Splendor Plus Xtec) ಜನಮೆಚ್ಚಿದ ಮೋಟಾರ್‌ಸೈಕಲ್ ಎಂದೇ ಹೆಸರುವಾಸಿಯಾಗಿದೆ. ಇದು ದಿನಬಳಕೆಗೂ ಹೆಚ್ಚು ಸೂಕ್ತವಾಗಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ನೂತನ 'ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್' ಅಗ್ಗದ ಬೆಲೆಯಲ್ಲಿಯೂ ಲಭ್ಯವಿದೆ. ಕನಿಷ್ಠ ರೂ.77,678 ಹಾಗೂ ಗರಿಷ್ಠ ರೂ.80,721 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಡ್ರಮ್ ಬ್ರೇಕ್ (Drum Brake) ಹಾಗೂ ಡಿಸ್ಕ್ ಬ್ರೇಕ್ (Disc Brake) ಎಂಬ 2 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಇಂಡಿಕೇಟರ್‌ಗಳು ಹಾಗೂ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಫ್ಯುಯೆಲ್ ಟ್ಯಾಂಕ್ ಮೇಲ್ಭಾಗ 3ಡಿ 'ಹೀರೋ' ಲೋಗೋವನ್ನು ಒಳಗೊಂಡಿದೆ. ಗ್ಲಾಸ್ ಬ್ಲ್ಯಾಕ್, ಮ್ಯಾಟ್ ರೆಡ್, ಗ್ಲಾಸ್ ರೆಡ್, ಬ್ಲ್ಯಾಕ್ ಟೊರ್ನಾಡೊ ಗ್ರೇ ಹಾಗೂ ಬ್ಲ್ಯಾಕ್ ಸ್ಪಾರ್ಕಿಂಗ್ ಬ್ಲೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಸುತ್ತಳತೆ (Dimension):
ಈ ಬೈಕ್ ಹೆಚ್ಚು ವಿಶಾಲವಾಗಿದೆ. 2,000 ಎಂಎಂ ಉದ್ದ, 720 ಎಂಎಂ ಅಗಲ ಮತ್ತು 1052 ಎಂಎಂ ಎತ್ತರವಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1236 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 113 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಹೊಸ 'ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್' ಬೈಕ್ ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 97.2-ಸಿಸಿ ಏರ್-ಕೋಲ್ಡ್, 4-ಸ್ಟ್ರೋಕ್, ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 8,000 ಆರ್‌ಪಿಎಂನಲ್ಲಿ 8.02 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6,000 ಆರ್‌ಪಿಎಂನಲ್ಲಿ 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮೈಲೇಜ್ (Mileage):
ಇದು ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ, 73 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 12 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಒಮ್ಮೆ ಪೂರ್ತಿಯಾಗಿ ತುಂಬಿಸಿದರೆ, 715 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.

ವೈಶಿಷ್ಟ್ಯಗಳು (Features):
ಈ ಮೋಟಾರ್‌ಸೈಕಲ್ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 87 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 8.51 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸೀಟ್ ಎತ್ತರವು 785 ಎಂಎಂ ಇದೆ.
ಸಸ್ಪೆನ್ಷನ್ ಸೆಟಪ್ & ಬೇಕಿಂಗ್ ಸಿಸ್ಟಮ್ (Suspension Setup & Braking System):
ನೂತನ 'ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್' ಮೋಟಾರ್‌ಸೈಕಲ್, ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) 5-ಸ್ಟೆಪ್ ಅಡ್ಜಸ್ಟಬಲ್ ಹೈಡ್ರಾಲಿಕ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. 18-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.
ಪ್ರತಿಸ್ಪರ್ಧಿ ಬೈಕ್‌ಗಳು (Rival Bikes):
ಇದಕ್ಕೆ ಹಲವು ಎದುರಾಳಿಗಳಿವೆ. ಟಿವಿಎಸ್ ರೇಡಿಯನ್ (TVS Radeon), ಹೋಂಡಾ ಶೈನ್ 100 (Honda Shine 100), ಬಜಾಜ್ ಪ್ಲಾಟಿನಾ 100 (Bajaj Platina 100) ಮತ್ತು ಟಿವಿಎಸ್ ಸ್ಪೋರ್ಟ್ (TVS Sport) ಮೋಟಾರ್‌ಸೈಕಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








