Hero: ಈ ಜನಪ್ರಿಯ ಹೀರೋ ಬೈಕ್‌ಗೆ ಮನಸೋತ ಜನ.. 83,448 ರೂಪಾಯಿ.. ಫುಲ್ ಟ್ಯಾಂಕ್‌ನಲ್ಲಿ 828 Km ಮೈಲೇಜ್!

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC) ಪ್ರಖ್ಯಾತ ಬೈಕ್ ಎಂದೇ ಹೆಸರುವಾಸಿಯಾಗಿದೆ. ಈ ಮೋಟಾರ್‌ಸೈಕಲ್‌ಗೆ ಉತ್ತಮವಾದ ಬೇಡಿಕೆಯಿದೆ. ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) ಸ್ಪರ್ಧಾತ್ಮಕ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 13,217 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 14,116 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಸ್ವಲ್ಪ ಮಟ್ಟಿಗೆ ಅಂದರೆ, ಶೇಕಡ -6% ಮಾತ್ರ ಕುಸಿತವಾಗಿದೆ.

ನೂತನ 'ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' ಸಖತ್ ಸ್ಟೈಲಿಶ್ ಬೈಕ್ ಆಗಿದ್ದು, ಕಡಿಮೆ ಬೆಲೆಗೂ ಸಿಗುತ್ತದೆ. ರೂ.83,448 ರಿಂದ ರೂ.87,044 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಡ್ರಮ್ ಬ್ರೇಕ್ (Drum Brake) ಹಾಗೂ ಡಿಸ್ಕ್ ಬ್ರೇಕ್ (Disk Brake) ಎಂಬ ಎರಡು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Hero Super Splendor XTEC January 2026 Sales Report

ಈ ಮೋಟಾರ್‌ಸೈಕಲ್‌ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ ಮತ್ತು ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಕ್ಯಾಂಡಿ ಬ್ಲೇಜಿಂಗ್, ಮ್ಯಾಟ್ ನೆಕ್ಸಸ್ ಬ್ಲೂ, ಮ್ಯಾಟ್ ಗ್ರೇ ಮತ್ತು ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಇದು ಸಾಕಷ್ಟು ವಿಶಾಲವಾಗಿದೆ. 2,042 ಮಿ.ಮೀ ಉದ್ದ, 729 ಮಿ.ಮೀ ಅಗಲ ಹಾಗೂ 1,092 ಮಿ.ಮೀ ಎತ್ತರವಿದೆ. 180 ಮಿ.ಮೀ ಗ್ರೌಂಡ್ ಕಿಯರೆನ್ಸ್ ಮತ್ತು 1,267 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 123 ಕೆಜಿ ತೂಕವಿದೆ.

ಹೊಸ 'ಹೀರೋ ಸೂಪರ್ ಸ್ಪ್ಲೆಂಡರ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 124.7 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 10.72 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.6 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 7.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಬೈಕ್ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ 69 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 12 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. ಒಮ್ಮೆ ಪೂರ್ತಿಯಾಗಿ ತುಂಬಿಸಿದರೆ 828 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು.

ಇದು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಸೈಡ್ ಸ್ಟಾಂಡ್ ಎಂಜಿನ್ ಕಟ್ ಆಫ್, ಎಂಜಿನ್ ಕಿಲ್ ಸ್ವೀಚ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 18-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ.

ನೂತನ 'ಸೂಪರ್ ಸ್ಪ್ಲೆಂಡರ್' ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಡುಯಲ್-ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. 240 ಮಿ.ಮೀ ಡಿಸ್ಕ್ ಮತ್ತು 130 ಮಿ.ಮೀ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಈ ಮೋಟಾರ್‌ಸೈಕಲ್‌ಗೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಟಿವಿಎಸ್ ರೈಡರ್ 125 (TVS Raider 125), ಹೋಂಡಾ ಶೈನ್ 125 (Honda Shine 125), ಹೋಂಡಾ ಎಸ್‌ಪಿ 125 (Honda SP 125) ಹಾಗೂ ಬಜಾಜ್ ಪಲ್ಸರ್ 125 (Bajaj Pulsar 125) ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Saturday, February 28, 2026, 8:49 [IST]
English summary
Hero super splendor xtec january 2026 sales report
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+