Hero: ಕಮ್ಮಿ ಬೆಲೆಯ ಹೀರೋ ಇ-ಸ್ಕೂಟರ್‌ಗೆ ಜೈಕಾರ ಹಾಕಿದ ಜನ.. ಫುಲ್ ಡಿಮ್ಯಾಂಡ್.. ಭಾರೀ ಸಂಖ್ಯೆಯಲ್ಲಿ ಸೇಲ್ಸ್!
ಹೀರೋ ವಿಡಾ (Hero Vida) ಜನಮೆಚ್ಚಿದ ಎಲೆಕ್ಟ್ರಿಕ್ ಸ್ಕೂಟರ್ ಎಂದೇ ಮನೆ ಮಾತಾಗಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಸಹ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 13,830 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 6,669 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟವು ವರ್ಷದಿಂದ ವರ್ಷಕ್ಕೆ ಶೇಕಡ 107% ಪ್ರಗತಿಯಾಗಿದೆ.
ನೂತನ 'ಹೀರೋ ವಿಡಾ' ಇ-ಸ್ಕೂಟರ್ ಮಾರಾಟ ಸಂಖ್ಯೆಯು ಈ ಪರಿಪ್ರಮಾಣದಲ್ಲಿ ಅಧಿಕಗೊಳ್ಳಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಅಗ್ಗದ ಬೆಲೆಯಲ್ಲಿಯೂ ಸಿಗುತ್ತದೆ. ಜೊತೆಗೆ ನೋಡಲು ತುಂಬಾ ಚೆನ್ನಾಗಿದೆ. ಹೀಗಾಗಿ, ಉತ್ತಮವಾಗಿ ಮಾರಾಟಗೊಳ್ಳುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದೇ 'ವಿಡಾ' ಎರಡು ವಿಧದಲ್ಲೂ ಲಭ್ಯವಿದೆ. ಅವುಗಳೆಂದರೆ, ವಿಡಾ ವಿ2 ಹಾಗೂ ವಿಡಾ ವಿಎಕ್ಸ್2 ಎಂದು.

ಹೀರೋ ವಿಡಾ ವಿ2 (Hero Vida V2) ವಿಶೇಷತೆಗಳೇನು:
ಇದು ರೂ.1.04 ಲಕ್ಷದಿಂದ ರೂ.1.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ವಿಡಾ ವಿ2 ಪ್ಲಸ್ ಹಾಗೂ ವಿಡಾ ವಿ2 ಪ್ರೊ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಮ್ಯಾಟ್ ಸಯಾನ್, ಮ್ಯಾಟ್ ಅಬ್ರಾಕ್ಸ್ ಆರೆಂಜ್, ಗ್ಲಾಸಿ ಸ್ಪೋರ್ಟ್ಸ್ ರೆಡ್, ಗ್ಲಾಸಿ ಬ್ಲ್ಯಾಕ್ ಹಾಗೂ ಮ್ಯಾಟ್ ವೈಟ್ ಎಂಬ ಬಣ್ಣದೊಂದಿಗೆ ಸಿಗುತ್ತದೆ. ಹೆಚ್ಚು ವಿಶಾಲವಾಗಿದ್ದು, 155 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1,301 ಮೀ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
'ವಿಡಾ ವಿ2 ಪ್ಲಸ್' ರೂಪಾಂತರವು 3.44 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 143 ಕಿ.ಮೀ ವರೆಗೆ ರೇಂಜ್ ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಅದೇ ರೀತಿಯಲ್ಲಿ 'ವಿಡಾ ವಿ2 ಪ್ರೊ' ರೂಪಾಂತರವು 3.94 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದ್ದು, ಭರ್ತಿ ಚಾರ್ಜ್‌ನಲ್ಲಿ 165 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 90 ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

ಈ 'ವಿಡಾ ವಿ2' ಎಲೆಕ್ಟ್ರಿಕ್ ಸ್ಕೂಟರ್ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ರೀ-ಜೆನ್ ಬ್ರೇಕಿಂಗ್, ಕೀಲೆಸ್ ಎಂಟ್ರಿ ಹಾಗೂ ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೀರೋ ವಿಡಾ ವಿಎಕ್ಸ್2 (Hero Vida Vx2) ಹೇಗಿದೆ:
ಇದು ರೂ.73,850 ರಿಂದ ರೂ.94,800 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಬಾಸ್ (ಬ್ಯಾಟರಿ-ಆಸ್-ಎ-ಸರ್ವಿಸ್) ಯೋಜನೆಯಡಿಯೂ ಖರೀದಿಗೆ ಲಭ್ಯವಿದೆ. ಆ ಮಾಡೆಲ್ ರೂ.44,990 ಆರಂಭಿಕ ಬೆಲೆಯನ್ನು ಹೊಂದಿದೆ. ಪ್ರತಿ ಕಿಲೋಮೀಟರ್ ಓಡಾಟಕ್ಕೆ ನಿಗದಿತ ಶುಲ್ಕವನ್ನು ಪಾವತಿಸಬೇಕು. ವಿಡಾ ವಿಎಕ್ಸ್2 ಗೋ ಹಾಗೂ ವಿಡಾ ವಿಎಕ್ಸ್2 ಪ್ಲಸ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

'ವಿಡಾ ವಿಎಕ್ಸ್2 ಗೋ' ರೂಪಾಂತರ, 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ಗಳನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 92 ರಿಂದ 142 ಕಿ.ಮೀ ವರೆಗೆ ರೇಂಜ್ ನೀಡುತ್ತದೆ. 'ವಿಎಕ್ಸ್2 ಪ್ಲಸ್' ರೂಪಾಂತರ, 3.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 142 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.
ಈ ಸ್ಕೂಟರ್ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಬ್ಲೂ, ರೆಡ್ ಯೆಲ್ಲೋ ಹಾಗೂ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಜಿಪಿಎಸ್ ಟ್ರ್ಯಾಕಿಂಗ್, ರಿಮೋಟ್ ಇಮೊಬಿಲೈಸೇಶನ್ ಮತ್ತು ಕ್ಲೌಡ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








