Hero: ಪೆಟ್ರೋಲ್ ಬೇಕಿಲ್ಲ.. 165 Km ರೇಂಜ್.. ಕಡಿಮೆ ಬೆಲೆಯ ಹೀರೋ ಇ-ಸ್ಕೂಟರ್ ಕುರಿತ ಪ್ರಮುಖಾಂಶಗಳು!

ಹೀರೋ ವಿಡಾ ವಿ2 (Hero Vida V2) ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಎಂದೇ ಖ್ಯಾತಿ ಗಳಿಸಿದ್ದು, ಗ್ರಾಹಕರು ಸಹ ಮನಸೊತ್ತಿದ್ದಾರೆ. ಅದಕ್ಕೆ ತಕ್ಕಂತೆ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ನೀವು ದಿನಬಳಕೆಗಾಗಿ ಹೊಚ್ಚ ಹೊಸ ಇ-ಸ್ಕೂಟರ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ವಿಡಾ ವಿ2' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ನೂತನ 'ಹೀರೋ ವಿಡಾ ವಿ2' ಅಗ್ಗದ ದರದಲ್ಲೂ ಲಭ್ಯವಿದೆ. ಕನಿಷ್ಠ ರೂ.1.04 ಲಕ್ಷ ಮತ್ತು ಗರಿಷ್ಠ ರೂ.1.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಮನೆಗೆ ತರಬಹುದು. ವಿಡಾ ವಿ2 ಪ್ಲಸ್ (Vida V2 Plus) ಮತ್ತು ವಿಡಾ ವಿ2 ಪ್ರೊ (VIDA V2 Pro) ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

Hero Vida V2 Price Design Colours Range Features And All Details

ವಿನ್ಯಾಸ & ಬಣ್ಣಗಳು (Design & Colours):

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಟೈಲ್ ಲ್ಯಾಂಪ್ ಹಾಗೂ ಟೂ ಪೀಸ್ ಸೀಟ್‌ನ್ನು ಹೊಂದಿದೆ. ಮ್ಯಾಟ್ ಅಬ್ರಾಕ್ಸ್ ಆರೆಂಜ್, ಗ್ಲಾಸಿ ಸ್ಪೋರ್ಟ್ಸ್ ರೆಡ್, ಮ್ಯಾಟ್ ಸಯಾನ್, ಗ್ಲಾಸಿ ಬ್ಲ್ಯಾಕ್ ಮತ್ತು ಮ್ಯಾಟ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಸುತ್ತಳತೆ (Dimensions):

ಈ ಸ್ಕೂಟರ್ ಹೆಚ್ಚು ವಿಶಾಲವಾಗಿದೆ. 1,861 ಮಿ.ಮೀ ಉದ್ದ, 777 ಮಿ.ಮೀ ಅಗಲ ಹಾಗೂ 1,164 ಮಿ.ಮೀ ಎತ್ತರವಿದೆ. 155 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,301 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 125 ಕೆಜಿ ತೂಕವಿದೆ.

Hero Vida V2 Price Design Colours Range Features And All Details

ಕಾರ್ಯಕ್ಷಮತೆ (Performance):

ನೂತನ 'ಹೀರೋ ವಿಡಾ ವಿ2' ಸ್ಕೂಟರ್ ಶಕ್ತಿಶಾಲಿಯಾದ ಎರಡು ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 'ವಿಡಾ ವಿ2 ಪ್ಲಸ್' ರೂಪಾಂತರವು 3.44 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 143 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 3.4 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಮತ್ತೊಂದು 'ವಿಡಾ ವಿ2 ಪ್ರೊ' ರೂಪಾಂತರವು 3.94 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 165 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 2.9 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ವೈಶಿಷ್ಟ್ಯಗಳು (Features):

ಈ ಎಲೆಕ್ಟ್ರಿಕ್ ಸ್ಕೂಟರ್ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ರೀ-ಜೆನ್ ಬ್ರೇಕಿಂಗ್, ಕ್ರೂಸ್ ಕಂಟ್ರೋಲ್‌ ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಇದರಲ್ಲಿರುವ ಬ್ಯಾಟರಿಯು ಫಾಸ್ಟ್ ಚಾರ್ಜಿಂಗ್ ಬಳಕೆಯಲ್ಲಿ 60 ರಿಂದ 65 ನಿಮಿಷಗಳಲ್ಲಿ 0 ರಿಂದ 80% ಚಾರ್ಜ್ ಆಗಿ ಬಿಡುತ್ತದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 26 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಸಸ್ಪೆನ್ಷನ್ ಸೆಟಪ್‌ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):

ಹೊಸ 'ಹೀರೋ ವಿಡಾ ವಿ2' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್‌ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಹಾಗೆಯೇ ಡಿಸ್ಕ್ ಹಾಗೂ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

More from DriveSpark

Article Published On: Tuesday, March 10, 2026, 11:08 [IST]
English summary
Hero vida v2 price design colours range features and all details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+