Honda Activa: ಮಧ್ಯಮ ವರ್ಗದವರಿಗೆ ಪರ್ಫೆಕ್ಟ್ ಸ್ಕೂಟರ್‌ಯಿದು.. ರೂ.75,000.. ಫುಲ್ ಟ್ಯಾಂಕ್‌ನಲ್ಲಿ 250 Km ಮೈಲೇಜ್!

ಹೋಂಡಾ ಆಕ್ಟಿವಾ 110 (Honda Activa 110) ಪ್ರಮುಖ ಸ್ಕೂಟರ್ ಆಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲೂ ಸುಲಭವಾಗಿ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಆಕ್ಟಿವಾ 110' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಸ್ಕೂಟರ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ನೂತನ 'ಹೋಂಡಾ ಆಕ್ಟಿವಾ 110' ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.75,433 ಹಾಗೂ ಗರಿಷ್ಠ ರೂ.89,806 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್ (Standard), ಡಿಎಲ್ಎಕ್ಸ್ (DLX) ಹಾಗೂ ಸ್ಮಾರ್ಟ್ (SMART) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

Honda Activa 110 Scooter Price Variants Design Colours Engine Mileage Features And All Details

ವಿನ್ಯಾಸ & ಬಣ್ಣಗಳು (Design & Colours):

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಮನ ಸೆಳೆಯುತ್ತದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ ಹಾಗೂ ಟೈಲ್ ಲೈಟ್‌ನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಡೀಸೆಂಟ್ ಬ್ಲೂ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಪ್ರೆಷಿಯಸ್ ವೈಟ್, ರೆಬೆಲ್ ರೆಡ್ ಮೆಟಾಲಿಕ್ ಹಾಗೂ ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಸುತ್ತಳತೆ (Dimension):

ಈ ಸ್ಕೂಟರ್ ಹೆಚ್ಚು ವಿಶಾಲ ಗಾತ್ರದಲ್ಲಿದೆ. 1,833 ಮಿ.ಮೀ ಉದ್ದ, 677 ಮಿ.ಮೀ ಅಗಲ ಹಾಗೂ 1,165 ಮಿ.ಮೀ ಎತ್ತರವಿದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1260 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ ಸರಿ ಸುಮಾರು 106 ಕೆಜಿ ತೂಕವಿದೆ.

Honda Activa 110 Scooter Price Variants Design Colours Engine Mileage Features And All Details

ಕಾರ್ಯಕ್ಷಮತೆ (Performance):

ಹೊಸ 'ಆಕ್ಟಿವಾ' ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 109.51-ಸಿಸಿ ಏರ್ ಕೋಲ್ಡ್, ಸಿಂಗಲ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8,000 ಆರ್‌ಪಿಎಂನಲ್ಲಿ 7.9 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,500 ಆರ್‌ಪಿಎಂನಲ್ಲಿ 9.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಮೈಲೇಜ್ (Mileage):

ಇದು ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದ್ದು, ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ 45 ರಿಂದ 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. ಭರ್ತಿಯಾಗಿ ತುಂಬಿಸಿದರೆ, 225 ರಿಂದ 250 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು.

Honda Activa 110 Scooter Price Variants Design Colours Engine Mileage Features And All Details

ವೈಶಿಷ್ಟ್ಯಗಳು (Features):

ಈ ಸ್ಕೂಟರ್ 4.2-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಹೋಂಡಾ ರೋಡ್‌ಸಿಂಕ್ ಫೋನ್ ಅಪ್ಲಿಕೇಶನ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 10 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸೀಟ್ ಎತ್ತರವು 764 ಮಿ.ಮೀ ಇದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System):

ನೂತನ 'ಆಕ್ಟಿವಾ' ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) 3-ಸ್ಟೆಪ್ ಅಡ್ಜಸ್ಟೇಬಲ್ ಸ್ಪ್ರಿಂಗ್-ಲೋಡೆಡ್ ಹೈಡ್ರಾಲಿಕ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. 10-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ.

ಪ್ರತಿಸ್ಪರ್ಧಿ ಸ್ಕೂಟರ್‌ಗಳು (Rival Scooters):

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಟಿವಿಎಸ್ ಜುಪಿಟರ್ 110 (TVS Jupiter 110), ಹೀರೋ ಜೂಮ್ 110 (Hero Xoom 110), ಹೀರೋ ಪ್ಲೆಷರ್ ಪ್ಲಸ್ (Hero Pleasure Plus) ಹಾಗೂ ಟಿವಿಎಸ್ ಸ್ಕೂಟಿ ಜೆಸ್ಟ್ 110 (TVS Scooty Zest 110) ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

Article Published On: Friday, January 16, 2026, 14:18 [IST]
English summary
Honda activa 110 scooter price variants design colours engine mileage features and all details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+