ಅಗ್ಗದ ಬೆಲೆಯ ಸ್ಕೂಟರ್‌ಗಳಿವು.. ಬಡವರು ತೆಗೆದುಕೊಳ್ಳಬಹುದು.. 50 Km ಮೈಲೇಜ್.. ಯಾವುದು ಬೆಸ್ಟ್?
ಹೋಂಡಾ ಆಕ್ಟಿವಾ 110 (Honda Activa 110) ಜನಮೆಚ್ಚಿದ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಇದಕ್ಕೆ ಹೀರೋ ಜೂಮ್ 110 (Hero Xoom 110) ಪ್ರಬಲ ಪ್ರತಿಸ್ಪರ್ಧಿಯಾಗಿದೆ. ಈ ಸ್ಕೂಟರ್‌ಗಳು ತುಂಬಾ ಚೆನ್ನಾಗಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ನಾವಿಲ್ಲಿ ಇವೆರೆಡು ಸ್ಕೂಟರ್‌ಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಬೆಲೆ (Price):
ಹೊಚ್ಚ ಹೊಸ ಹೋಂಡಾ ಆಕ್ಟಿವಾ 110 ಹಾಗೂ ಹೀರೋ ಜೂಮ್ 110 ಸ್ಕೂಟರ್‌ಗಳೆರೆಡು ಕೈಗೆಟುಕುವ ದರದಲ್ಲೂ ಗ್ರಾಹಕರ ಖರೀದಿಗೆ ಲಭ್ಯವಿವೆ. 'ಆಕ್ಟಿವಾ' ರೂ.75,433 ರಿಂದ ರೂ.89,806 ಬೆಲೆಯನ್ನು ಒಳಗೊಂಡಿದೆ. ಅದೇ ರೀತಿಯಲ್ಲಿ 'ಜೂಮ್' ರೂ.76,251 ರಿಂದ ರೂ.81,920 (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ವಿನ್ಯಾಸ (Design):
ಇವೆರೆಡು ಸ್ಕೂಟರ್‌ಗಳು ಒಂದಕ್ಕಿಂತ ಒಂದು ಅದ್ಭುತವಾದ ವಿನ್ಯಾಸವನ್ನು ಒಳಗೊಂಡಿದೆ. 'ಆಕ್ಟಿವಾ' ಸ್ಕೂಟರ್ ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲೈಟ್ & ಟೈಲ್ ಲೈಟ್‌ನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಮತ್ತು ಪರ್ಲ್ ಪ್ರೆಷಿಯಸ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1260 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
'ಜೂಮ್' ಸ್ಕೂಟರ್ ನೋಡುಗರ ಕಣ್ಣು ಕುಕ್ಕುವಂತಿರುವ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಪರ್ಲ್ ಸಿಲ್ವರ್ ವೈಟ್, ಸ್ಪೋರ್ಟ್ಸ್ ರೆಡ್, ಮ್ಯಾಟ್ ಅಬ್ರಾಕ್ಸ್ ಆರೆಂಜ್ ಮತ್ತು ಮ್ಯಾಟ್ ಶ್ಯಾಡೋ ಗ್ರೇಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 155 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,300 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance):
ಈ ಸ್ಕೂಟರ್‌ಗಳು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 'ಹೋಂಡಾ ಆಕ್ಟಿವಾ' 109.51-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 7.9 ಪಿಎಸ್ ಅಶ್ವ ಶಕ್ತಿ ಮತ್ತು 9.05 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 45 ರಿಂದ 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 10 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
'ಹೀರೋ ಜೂಮ್' 110.9-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 8.05 ಪಿಎಸ್ ಅಶ್ವ ಶಕ್ತಿ ಹಾಗೂ 8.7 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 53 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 87 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 9.35 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ವೈಶಿಷ್ಟ್ಯಗಳು (Features):
ಇವೆರೆಡು ಸ್ಕೂಟರ್‌ಗಳು ನಾನಾ ಬಗೆಯ ವಿಶೇಷತೆಗಳಿಗೂ ಸಾಕ್ಷಿಯಾಗಿವೆ. 'ಹೋಂಡಾ ಆಕ್ಟಿವಾ 110' ಸ್ಕೂಟರ್ 4.2-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್, ಹೋಂಡಾ ರೋಡ್‌ಸಿಂಕ್ ಫೋನ್ ಆಪ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಮತ್ತು ಹಿಂಭಾಗ (ರೇರ್) 3-ಸ್ಟೆಪ್ ಅಡ್ಜಸ್ಟೇಬಲ್ ಹೈಡ್ರಾಲಿಕ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಹಾಗೆಯೇ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
'ಹೀರೋ ಜೂಮ್' 110' ಸ್ಕೂಟರ್ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಫೋನ್ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಮತ್ತು ಹಿಂಭಾಗ (ರೇರ್) ಸಿಂಗಲ್ ಸ್ಪ್ರಿಂಗ್-ಲೋಡೆಡ್ ಹೈಡ್ರಾಲಿಕ್ ಡ್ಯಾಂಪರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








