ಹೋಂಡಾ ಆಕ್ಟಿವಾ 125 vs ಟಿವಿಎಸ್ ಜುಪಿಟರ್ 125: ಕಮ್ಮಿ ಬೆಲೆಯ ಸ್ಕೂಟರ್‌ಗಳಿವು.. ಜಬರ್ದಸ್ತ್ ಮೈಲೇಜ್, ಯಾವುದು ಬೆಸ್ಟ್?

ಹೋಂಡಾ ಆಕ್ಟಿವಾ 125 (Honda Activa 125) ಪ್ರಮುಖ ಸ್ಕೂಟರ್ ಆಗಿದೆ. ಅತಿಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟಗೊಳ್ಳುತ್ತಿದ್ದು, ನಂ.1 ಸ್ಥಾನದಲ್ಲಿದೆ. ಇದಕ್ಕೆ ಟಿವಿಎಸ್ ಜುಪಿಟರ್ 125 (TVS Jupiter 125) ನೇರವಾದ ಎದುರಾಳಿಯಾಗಿವೆ. ದಿನಬಳಕೆಗೂ ಹೆಚ್ಚು ಸೂಕ್ತವಾಗಿವೆ. ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿವೆ. ದೀರ್ಘಕಾಲ ಬಾಳಿಕೆಯೂ ಬರುತ್ತವೆ. ನಾವಿಲ್ಲಿ ಇವೆರೆಡು ಸ್ಕೂಟರ್‌ಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಬೆಲೆ (Price):

ನೂತನ ಹೋಂಡಾ ಆಕ್ಟಿವಾ 125 ಹಾಗೂ ಟಿವಿಎಸ್ ಜುಪಿಟರ್ 125ಗಳೆರೆಡು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ಎಲ್ಲ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಬಹುದು. 'ಆಕ್ಟಿವಾ' ರೂ.89,652 ರಿಂದ ರೂ.94,096 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅದೇ ರೀತಿಯಲ್ಲಿ 'ಜುಪಿಟರ್' ರೂ.83,500 ರಿಂದ ರೂ.92,460 ಬೆಲೆಯನ್ನು ಒಳಗೊಂಡಿದೆ.

Honda Activa 125 vs TVS Jupiter 125 Which Scooter Best Details

ವಿನ್ಯಾಸ (Design):

ಈ ಸ್ಕೂಟರ್‌ಗಳು ನೋಡುಗರ ಕಣ್ಮನ ಸೆಳೆಯುವಂತೆ ಒಂದಕ್ಕಿಂತ ಒಂದು ಅದ್ಬುತವಾದ ವಿನ್ಯಾಸವನ್ನು ಹೊಂದಿವೆ. 'ಹೋಂಡಾ ಆಕ್ಟಿವಾ 125' ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಪರ್ಲ್ ಪ್ರೆಷಿಯಸ್ ವೈಟ್, ರೆಬೆಲ್ ರೆಡ್ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ, ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಹಾಗೂ ಪರ್ಲ್ ಡೀಪ್ ಗ್ರೌಂಡ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1260 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

'ಟಿವಿಎಸ್ ಜುಪಿಟರ್ 125' ಕೂಡ ಅತ್ಯಾಧುನಿಕವಾದ ಎಲ್ಇಡಿ ಹೆಡ್‌ಲ್ಯಾಂಪ್ & ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಇಂಡಿಬ್ಲೂ, ಟೈಟಾನಿಯಂ ಗ್ರೇ, ಪ್ರಿಸ್ಟೈನ್ ವೈಟ್, ಡಾನ್ ಆರೆಂಜ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್, ಮ್ಯಾಟ್ ಕಾಪರ್ ಮತ್ತು ಐವರಿ ಬ್ರೌನ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1275 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Honda Activa 125 vs TVS Jupiter 125 Which Scooter Best Details

ಕಾರ್ಯಕ್ಷಮತೆ (Performance):

ಇವೆರೆಡು ಸ್ಕೂಟರ್‌ಗಳು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿವೆ. 'ಹೋಂಡಾ ಆಕ್ಟಿವಾ' 123.92-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8.42 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 47 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 10 ಸೆಕೆಂಡಿನಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

'ಟಿವಿಎಸ್ ಜುಪಿಟರ್' 124.8-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 8.2 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 16.72 ಸೆಕೆಂಡುಗಳಲ್ಲಿ 0 ರಿಂದ 80 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ವೈಶಿಷ್ಟ್ಯಗಳು (Features):

ಈ ಸ್ಕೂಟರ್‌ಗಳು ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ. 'ಹೋಂಡಾ ಆಕ್ಟಿವಾ' 4.2-ಇಂಚಿನ ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್‌ ಮತ್ತು ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

'ಟಿವಿಎಸ್ ಜುಪಿಟರ್' ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ ಮತ್ತು ಎಲೆಕ್ಟ್ರಿಕ್ ಸೈಲಂಟ್ ಸ್ಟಾರ್ಟ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Friday, January 30, 2026, 13:27 [IST]
English summary
Honda activa 125 vs tvs jupiter 125 which scooter best details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+