Honda Activa: ಇದೇ ನಂ.1 ಹೋಂಡಾ ಆಕ್ಟಿವಾದ ಪವರ್.. ಬೆಚ್ಚಿಬಿದ್ದ ಎದುರಾಳಿಗಳು.. 50 ಲಕ್ಷ ಸ್ಕೂಟರ್‌ಗಳು ಸೇಲ್ಸ್!
ಹೋಂಡಾ ಆಕ್ಟಿವಾ (Honda Activa) ನಂಬರ್ 1 ಪ್ರಯಾಣಿಕ ಸ್ಕೂಟರ್ ಆಗಿ ಹೊರಹೊಮ್ಮಿದೆ. ದೇಶಾದ್ಯಂತ ವಿಪರೀತವಾದ ಬೇಡಿಕೆಯನ್ನು ಹೊಂದಿದೆ. ಗ್ರಾಹಕರು ಸಹ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆ ಪ್ರತಿ ತಿಂಗಳು ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಳ್ಳುತ್ತಿದೆ. ಸದ್ಯ, ಮಹಾರಾಷ್ಟ್ರದಲ್ಲಿ ಇದೇ 'ಆಕ್ಟಿವಾ' ಮಾರಾಟದಲ್ಲಿ ದೊಡ್ಡ ಇತಿಹಾಸವೊಂದನ್ನು ಬರೆಯಲಾಗಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ (Honda Motorcycle & Scooter India), ಒಟ್ಟು 50 ಲಕ್ಷ ಯುನಿಟ್ 'ಆಕ್ಟಿವಾ' ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. ಈ ಐತಿಹಾಸಿಕ ಮೈಲಿಗಲ್ಲು ಸಾಧಿಸಲು ಭರ್ತಿ 25 ವರ್ಷಗಳನ್ನು ತೆಗೆದುಕೊಂಡಿದೆ.

ಮಹಾರಾಷ್ಟ್ರದ ಪ್ರಮುಖ ನಗರಗಳಾದ ಪುಣೆ, ಮುಂಬೈ, ಥಾಣೆ, ನಾಗಪುರ ಹಾಗೂ ನವಿ ಮುಂಬೈಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ನೂತನ 'ಹೋಂಡಾ ಆಕ್ಟಿವಾ'ವನ್ನು ಕೊಂಡುಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ 700ಕ್ಕೂ ಹೆಚ್ಚು ಶೋರೂಂ ಮತ್ತು ಸರ್ವಿಸ್ ಟಚ್‌ಪಾಯಿಂಟ್‌ಗಳು 'ಆಕ್ಟಿವಾ' ಪ್ರಗತಿಗೆ ಬೆನ್ನೆಲುಬಾಗಿ ನಿಂತಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೋಂಡಾ ಕಂಪನಿಯ ಮಾರಾಟ & ಮಾರುಕಟ್ಟೆ ವಿಭಾಗದ ನಿರ್ದೇಶಕರಾದ ಮುಟ್ಸುವೊ ಉಸುಯಿ ಅವರು, 'ಮಹಾರಾಷ್ಟ್ರದಲ್ಲಿ ಆಕ್ಟಿವಾ ಮಾರಾಟವು 5 ಲಕ್ಷ ಯುನಿಟ್ ದಾಟಿರುವುದು ಗ್ರಾಹಕರು ಬ್ರ್ಯಾಂಡ್ ಮೇಲೆ ಇಟ್ಟಿರುವ ಗಟ್ಟಿ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ಜೊತೆಗೆ ಸವಾರರ ನಿರೀಕ್ಷೆಗಳನ್ನು ಪೂರೈಸುವುದಕ್ಕೆ ನಮ್ಮ ಗಮನ ಕೇಂದ್ರೀಕರಿಸಿದ್ದೇವೆ' ಎಂದು ಹೇಳಿದ್ದಾರೆ.

ದೇಶೀಯ ಮಾರುಕಟ್ಟೆಯಲ್ಲಿ 'ಹೋಂಡಾ ಆಕ್ಟಿವಾ' ಸ್ಕೂಟರ್ 2 ರೂಪದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಅವುಗಳೆಂದರೆ ಆಕ್ಟಿವಾ 110 ಹಾಗೂ ಆಕ್ಟಿವಾ 125 ಎಂದು. ಇವುಗಳು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಹೊಸತನಗಳಿಗೂ ಸಾಕ್ಷಿಯಾಗಿವೆ. ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತವೆ.
ಹೋಂಡಾ ಆಕ್ಟಿವಾ 125 (Honda Activa 125):
ಇದು ರೂ.88,339 ರಿಂದ ರೂ.94,096 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123.92 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 8.42 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 47 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಈ ಸ್ಕೂಟರ್ ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಪ್ರೆಷಿಯಸ್ ವೈಟ್, ರೆಬೆಲ್ ರೆಡ್ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ ಹಾಗೂ ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಟಿಎಫ್‌ಟಿ ಕನ್ಸೋಲ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಆಕ್ಟಿವಾ 110 (Honda Activa 110):
ನೂತನ 'ಆಕ್ಟಿವಾ 110' ರೂ.75,433 ರಿಂದ ರೂ.89,806 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 7.9 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 9.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.
ಇದು ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಡೀಸೆಂಟ್ ಬ್ಲೂ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ, ಬ್ಲ್ಯಾಕ್, ಪರ್ಲ್ ಪ್ರೆಷಿಯಸ್ ವೈಟ್, ರೆಬೆಲ್ ರೆಡ್ ಮೆಟಾಲಿಕ್ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಟೈಪ್-ಸಿ ಪೋರ್ಟ್ & ಬ್ಲೂಟೂತ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








