Honda Activa: ಪವರ್ ತೋರಿಸಿದ ಹೋಂಡಾ ಆಕ್ಟಿವಾ.. ಫುಲ್ ಡಿಮ್ಯಾಂಡ್, ಮುಗಿಬಿದ್ದ ಗ್ರಾಹಕರು!

ಹೋಂಡಾ ಆಕ್ಟಿವಾ (Honda Activa) ಜನಪ್ರಿಯ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಇದಕ್ಕೆ ಮನಸೋಲದವರೇ ಇಲ್ಲ. ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್ - 2025) ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಒಟ್ಟು 1,81,604 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 1,20,981 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 50.11% ಪ್ರಗತಿಯಾಗಿದೆ.

ಡಿಸೆಂಬರ್‌ನಲ್ಲಿ 'ಹೋಂಡಾ ಆಕ್ಟಿವಾ' ಮಾರಾಟ ಸಂಖ್ಯೆ ಏರಿಕೆಯಾಗಲು ಹಲವು ಕಾರಣಗಳಿವೆ. ಈ ಸ್ಕೂಟರ್ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. ಜೊತೆಗೆ ದೀರ್ಘ ಕಾಲ ಬಾಳಿಕೆ ಬರುತ್ತದೆ. ಪುರುಷ ಹಾಗೂ ಮಹಿಳೆಯರು ಸುಲಭವಾಗಿ ಉಪಯೋಗಿಸಬಹುದು. ಹೀಗಾಗಿ, 'ಆಕ್ಟಿವಾ' ಮಾರಾಟವು ಅಧಿಕಗೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Honda Activa December 2025 Sales Report

ನೂತನ 'ಹೋಂಡಾ ಆಕ್ಟಿವಾ' ಸ್ಕೂಟರ್ 2 ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಅವುಗಳೆಂದರೆ, ಆಕ್ಟಿವಾ 110 ಹಾಗೂ ಆಕ್ಟಿವಾ 125 ಎಂದು. ಇವೆರೆಡು ಸ್ಕೂಟರ್‌ಗಳು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಹೊಸತನಗಳಿಗೂ ಸಾಕ್ಷಿಯಾಗಿವೆ. ಹಾಗೆಯೇ ಅತಿ ಕಡಿಮೆ ಬೆಲೆಯಲ್ಲಿಯೂ ದೊರೆಯುತ್ತವೆ.

ಹೋಂಡಾ ಆಕ್ಟಿವಾ 110 (Honda Activa 110):

ಇದನ್ನು ಎಲ್ಲ ವರ್ಗದ ಜನರು ಮೆಚ್ಚಿಕೊಂಡಿದ್ದಾರೆ. ರೂ.75,433 ರಿಂದ ರೂ.89,806 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಡೀಸೆಂಟ್ ಬ್ಲೂ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಪ್ರೆಷಿಯಸ್ ವೈಟ್ ಮತ್ತು ರೆಬೆಲ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1260 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Honda Activa December 2025 Sales Report

ನೂತನ 'ಆಕ್ಟಿವಾ 110' ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 109.51-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 45 ರಿಂದ 50 ಕಿಲೋಮೀಟರ್‌ವರೆಗೂ ಮೈಲೇಜ್ ಕೊಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 10 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಸ್ಕೂಟರ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) 3-ಸ್ಟೆಪ್ ಅಡ್ಜಸ್ಟೇಬಲ್ ಹೈಡ್ರಾಲಿಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Honda Activa December 2025 Sales Report

ಹೋಂಡಾ ಆಕ್ಟಿವಾ 125 (Honda Activa 125):

ಇದು ಸಹ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ರೂ.89,652 ರಿಂದ ರೂ.94,096 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ, ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಮತ್ತು ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 1260 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಆಕ್ಟಿವಾ 125' ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 123.92-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 47 ಕಿಲೋಮೀಟರ್‌ವರೆಗೂ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 11.2 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಸ್ಕೂಟರ್ ಟಿಎಫ್‌ಟಿ ಕನ್ಸೋಲ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗೂ ಹೆಸರುವಾಸಿಯಾಗಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಸ್ಪ್ರಿಂಗ್-ಲೋಡೆಡ್ ಹೈಡ್ರಾಲಿಕ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Friday, January 23, 2026, 15:41 [IST]
English summary
Honda activa december 2025 sales report
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+