ತುಂಬಾ ಚೆನ್ನಾಗಿದ್ರು ಈ ಎರಡು ಸ್ಕೂಟರ್‌ಗಳನ್ನು ಕೇಳೋರಿಲ್ಲ.. ಶೋರೂಂಗೆ ಜನ ಬರುತ್ತಿಲ್ಲ!

ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), 2025ರ ಜನವರಿಯಲ್ಲಿ ಹೊಚ್ಚ ಹೊಸ ಆಕ್ಟಿವಾ ಇ (Activa e) ಮತ್ತು ಕ್ಯೂಸಿ1(QC1) ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿತ್ತು. ಇವು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೆ ಸಾಕ್ಷಿಯಾಗಿವೆ. ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತವೆ. ಆದರೂ ದೇಶೀಯ ಖರೀದಿದಾರರನ್ನು ಸೆಳೆಯಲು ವಿಫಲವಾಗಿವೆ. ಮಾರಾಟ ಸಂಖ್ಯೆಯೂ ತೀವ್ರತರದಲ್ಲಿ ಕುಸಿತವಾಗಿದೆ.

2025ರ ಫೆಬ್ರವರಿಯಿಂದ 2026ರ ಜನವರಿವರೆಗೆ ಬರೀ 3,723 ಯುನಿಟ್ ಹೋಂಡಾ ಆಕ್ಟಿವಾ ಇ ಹಾಗೂ ಕ್ಯೂಸಿ1 ಇ-ಸ್ಕೂಟರ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. ಇದೇ ಅವಧಿಯಲ್ಲಿ ಕಂಪನಿಯಿಂದ ಡೀಲರ್‌ಶಿಪ್‌ಗಳಿಗೆ 5,445 ಯುನಿಟ್‌ಗಳನ್ನು ತಲುಪಿಸಲಾಗಿದೆ. 2025ರ ಜುಲೈ ತಿಂಗಳಲ್ಲೇ ಈ ಸ್ಕೂಟರ್‌ಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿತ್ತು. ಒಟ್ಟು 11,168 ಯುನಿಟ್‌ಗಳನ್ನು ತಯಾರಿಸಲಾಗಿದೆ.

Honda Activa E And QC1 3 723 Scooters Delivered In 2025 February To 2026 January Details

ಹೋಂಡಾ ಆಕ್ಟಿವಾ ಇ & ಕ್ಯೂಸಿ1 ಇ-ಸ್ಕೂಟರ್‌ಗಳ ಮಾರಾಟ ಸಂಖ್ಯೆ ಇಳಿಕೆಯಾಗಲು ಕಾರಣಗಳಿವು:

'ಆಕ್ಟಿವಾ ಇ' ಸ್ವೇಪ್ಏಬಲ್ ಅಂದರೆ ಬದಲಿಸಬಹುದಾದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಹೀಗಾಗಿ, ಬೆಂಗಳೂರು, ನವದೆಹಲಿ ಹಾಗೂ ಮುಂಬೈನಂತಹ ನಗರಗಳಲ್ಲಿ ಮಾತ್ರ ಖರೀದಿಗೆ ಸಿಗುತ್ತದೆ. 'ಕ್ಯೂಸಿ1' ಎಲ್ಲ ಗ್ರಾಹಕರಿಗೂ ಹೊಂದಾಣಿಕೆಯಾಗಬಲ್ಲದು. ಆದರೂ, ಬೇರೆ ಕಂಪನಿಗಳ ಎಲೆಕ್ಟ್ರಿಕ್ ಸ್ಕೂಟರ್‌ಗಳಂತೆ ವೈಶಿಷ್ಟ್ಯವನ್ನು ಪಡೆದುಕೊಂಡಿಲ್ಲ. ಹೀಗಾಗಿ, ಮಾರಾಟವು ಕುಸಿತವಾಗುತ್ತಿದೆ ಎನ್ನಲಾಗಿದೆ.

'ಹೋಂಡಾ ಆಕ್ಟಿವಾ ಇ' ವಿಶೇಷತೆಗಳೇನು:

ಈ ಎಲೆಕ್ಟ್ರಿಕ್ ಸ್ಕೂಟರ್ ಕನಿಷ್ಠ ರೂ.1.18 ಲಕ್ಷ ಹಾಗೂ ಗರಿಷ್ಠ ರೂ.1.52 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಸೆರಿನಿಟಿ ಬ್ಲೂ, ಪರ್ಲ್ ಶ್ಯಾಲೋ ಬ್ಲೂ, ಮ್ಯಾಟ್ ಫಾಗ್ಗಿ ಸಿಲ್ವರ್ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಹಾಗೂ ಪರ್ಲ್ ಮಿಸ್ಟಿ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 171 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,310 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Honda Activa E And QC1 3 723 Scooters Delivered In 2025 February To 2026 January Details

ಇದು 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ 2 ಬ್ಯಾಟರಿ ಪ್ಯಾಕ್‌ಗಳನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 102 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 7.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ 'ಆಕ್ಟಿವಾ ಇ' ಸ್ಕೂಟರ್ ಇಕಾನ್, ಸ್ಟ್ಯಾಂಡರ್ಡ್ ಹಾಗೂ ಸ್ಪೋರ್ಟ್ ಎಂಬ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಹಾಗೂ ಹೆಚ್-ಸ್ಮಾರ್ಟ್ ಕೀಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸರಿ ಸುಮಾರು 118 ಕೆಜಿ ತೂಕವಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

'ಹೋಂಡಾ ಕ್ಯೂಸಿ1' ಹೇಗಿದೆ:

ಈ ಸ್ಕೂಟರ್ ಸಹ ಅಗ್ಗದ ಬೆಲೆಯಲ್ಲಿಯೇ ಲಭ್ಯವಿದೆ. ರೂ.90,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಮಿಸ್ಟಿ ವೈಟ್, ಪರ್ಲ್ ಸೆರೆನಿಟಿ ಬ್ಲೂ, ಪರ್ಲ್ ಶಾಲೋ ಬ್ಲೂ ಹಾಗೂ ಮ್ಯಾಟ್ ಫಾಗ್ಗಿ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 169 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,275 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಇದು 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 80 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 9.1 ಸೆಕೆಂಡುಗಳಲ್ಲಿ 0-40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಎಲ್‌ಸಿಡಿ ಡಿಸ್‌ಪ್ಲೇ ಹಾಗೂ ಯುಎಸ್‌ಬಿ-ಸಿ ಚಾರ್ಜಿಂಗ್ ಪಾಯಿಂಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Tuesday, February 17, 2026, 8:30 [IST]
English summary
Honda activa e and qc1 3723 scooters delivered in 2025 february to 2026 january details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+