Honda Activa: ನಂ.1 ಹೋಂಡಾ ಆಕ್ಟಿವಾಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಜನ.. ಪ್ರತಿದಿನ 8,771 ಸ್ಕೂಟರ್‌ಗಳು ಸೇಲ್ಸ್!

ಹೋಂಡಾ ಆಕ್ಟಿವಾ (Honda Activa) ಪ್ರಖ್ಯಾತ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಈ ಸ್ಕೂಟರ್‌ಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) ಒಟ್ಟು 2,71,924 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 1,66,739 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 38.62% ಪ್ರಗತಿಯಾಗಿದೆ.

ಈ 'ಆಕ್ಟಿವಾ' ಮಾರಾಟವು ತಿಂಗಳಿನಿಂದ ತಿಂಗಳಿಗೂ ಉತ್ತಮವಾಗಿದೆ. 2025ರ ಡಿಸೆಂಬರ್‌ನಲ್ಲಿ 1,81,604 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದ್ದು, 33.21% ಬೆಳವಣಿಗೆಯಾಗಿದೆ. ವಿಶೇಷವಾಗಿ ಇದೇ ಜನವರಿಯಲ್ಲಿ ಪ್ರತಿದಿನ 8,771 ಸ್ಕೂಟರ್‌ಗಳು ಮಾರಾಟಗೊಂಡಿವೆ. ದೇಶೀಯವಾಗಿ 'ಹೋಂಡಾ ಆಕ್ಟಿವಾ'ವು ಎರಡು ವಿಧದಲ್ಲೂ ಲಭ್ಯವಿದೆ. ಅವುಗಳೆಂದರೆ, ಆಕ್ಟಿವಾ 125 ಮತ್ತು ಆಕ್ಟಿವಾ 110. ಇವೆರೆಡು ಸ್ಕೂಟರ್‌ಗಳು ನೋಡಲು ತುಂಬಾ ಚೆನ್ನಾಗಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿವೆ.

Honda Activa January 2026 Sales Details

ಹೋಂಡಾ ಆಕ್ಟಿವಾ 125 (Honda Activa 125):

ಇದು ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ರೂ.88,339 ರಿಂದ ರೂ.94,096 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್‌ ಹಾಗೂ 12-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಪರ್ಲ್ ಪ್ರೆಷಿಯಸ್ ವೈಟ್, ರೆಬೆಲ್ ರೆಡ್ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ ಮತ್ತು ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,260 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಈ ಸ್ಕೂಟರ್ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 123.92 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 6,500 ಆರ್‌ಪಿಎಂನಲ್ಲಿ 8.42 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,000 ಆರ್‌ಪಿಎಂನಲ್ಲಿ 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 47 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 10 ಸೆಕೆಂಡಿನಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Honda Activa January 2026 Sales Details

ನೂತನ 'ಆಕ್ಟಿವಾ 125' ಟಿಎಫ್‌ಟಿ ಕನ್ಸೋಲ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮಾನೋಶಾಕ್ ಸಸ್ಪೆನ್ಷನ್ ಸೆಟಪ್‌ಗಳನ್ನು ಒಳಗೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಆಕ್ಟಿವಾ 110 (Honda Activa 110):

ಇದನ್ನು ಸಹ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.75,433 ರಿಂದ ರೂ.89,806 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್‌, ಟೈಲ್ ಲೈಟ್‌ ಹಾಗೂ 12-ಇಂಚಿನ ವೀಲ್‌ಗಳನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಡೀಸೆಂಟ್ ಬ್ಲೂ ಮೆಟಾಲಿಕ್, ಪರ್ಲ್ ಪ್ರೆಷಿಯಸ್ ವೈಟ್ ಮತ್ತು ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1260 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಸ್ಕೂಟರ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 109.51 ಸಿಸಿ ಏರ್ ಕೋಲ್ಡ್, ಸಿಂಗಲ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8,000 ಆರ್‌ಪಿಎಂನಲ್ಲಿ 7.9 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5,500 ಆರ್‌ಪಿಎಂನಲ್ಲಿ 9.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 45 ರಿಂದ 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 10 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ 'ಆಕ್ಟಿವಾ 110' ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್‌ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) 3-ಸ್ಟೆಪ್ ಅಡ್ಜಸ್ಟೇಬಲ್ ಸ್ಪ್ರಿಂಗ್-ಲೋಡೆಡ್ ಹೈಡ್ರಾಲಿಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Friday, February 20, 2026, 11:06 [IST]
English summary
Honda activa january 2026 sales details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+