Honda: ಇದೇ ಬಜಾಜ್ ಪಲ್ಸರ್‌ಗೆ ಪ್ರತಿಸ್ಪರ್ಧಿ.. ಮಧ್ಯಮ ವರ್ಗದವರಿಗೆ ಪರ್ಫೆಕ್ಟ್, ರೂ.1.14 ಲಕ್ಷ.. 576 ಮೈಲೇಜ್!
ಹೋಂಡಾ ಸಿಬಿ 125 ಹಾರ್ನೆಟ್ (Honda CB 125 Hornet) ಪ್ರಮುಖ ಮೋಟಾರ್‌ಸೈಕಲ್ ಆಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಬಜಾಜ್ ಪಲ್ಸರ್‌ಗೆ ನೇರ ಎದುರಾಳಿಯಾಗಿದ್ದು, ಯುವ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಹಾರ್ನೆಟ್' ಉತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ (Price):
ನೂತನ 'ಹೋಂಡಾ ಸಿಬಿ 125 ಹಾರ್ನೆಟ್' ಬೈಕ್ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ರೂ.1.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬೆಂಗಳೂರಿನಲ್ಲಿ ರೂ.1.44 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ಮಧ್ಯಮ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.

ವಿನ್ಯಾಸ & ಬಣ್ಣಗಳು (Design & Colours):
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಸ್ಟ್ರೀಟ್-ಫೈಟರ್ ಲುಕ್ ಹೊಂದಿದ್ದು, ಟ್ವಿನ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಹೈ-ಮೌಂಟೆಡ್ ಎಲ್ಇಡಿ ಇಂಡಿಕೇಟರ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಸ್ಪೋರ್ಟ್ಸ್ ರೆಡ್ ವಿತ್ ಪರ್ಲ್ ಸೈರನ್ ಬ್ಲೂ ಹಾಗೂ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ವಿತ್ ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimension):
ಈ ಮೋಟಾರ್‌ಸೈಕಲ್ ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 2,015 ಎಂಎಂ ಉದ್ದ, 783 ಎಂಎಂ ಅಗಲ ಹಾಗೂ 1,087 ಎಂಎಂ ಎತ್ತರವಿದೆ. 166 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,330 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 124 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಹೊಸ 'ಹೋಂಡಾ ಸಿಬಿ 125 ಹಾರ್ನೆಟ್' ಬೈಕ್ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 123.94-ಸಿಸಿ, ಸಿಂಗಲ್ -ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 7,500 ಆರ್‌ಪಿಎಂನಲ್ಲಿ 11.1 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6,000 ಆರ್‌ಪಿಎಂನಲ್ಲಿ 11.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮೈಲೇಜ್ (Mileage):
ಇದು ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ 48 65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 12 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಪೂರ್ತಿಯಾಗಿ ತುಂಬಿಸಿದರೆ, 576 ಕಿಲೋಮೀಟರ್‌ವರೆಗೆ ಓಡುತ್ತದೆ.

ವೈಶಿಷ್ಟ್ಯಗಳು (Features):
ಈ ಮೋಟಾರ್‌ಸೈಕಲ್ 4.2-ಇಂಚಿನ ಫುಲ್-ಡಿಜಿಟಲ್ ಕಲರ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನಾವಿಗೇಷನ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 5.4 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಸೀಟ್ ಎತ್ತರವು 796 ಎಂಎಂ ಇದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System):
ನೂತನ 'ಹೋಂಡಾ ಸಿಬಿ 125 ಹಾರ್ನೆಟ್' ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಯುಎಸ್‌ಡಿ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) 5-ಸ್ಟೆಪ್ ಮೊನೊಶಾಕ್ ಸಸ್ಪೆನ್ಷನ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. 17-ಇಂಚಿನ ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ.
ಪ್ರತಿಸ್ಪರ್ಧಿ ಮೋಟಾರ್‌ಸೈಕಲ್‌ಗಳು (Rival Motorcycles):
ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಹೀರೋ ಎಕ್ಸ್‌ಟ್ರೀಮ್ 125ಆರ್ (Hero Xtreme 125R), ಟಿವಿಎಸ್ ರೈಡರ್ 125 (TVS Raider 125) ಹಾಗೂ ಬಜಾಜ್ ಪಲ್ಸರ್ ಎನ್125 (Bajaj Pulsar N125) ಬೈಕ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








