Honda: ಮಧ್ಯಮ ವರ್ಗದವರ ಸ್ಟೈಲಿಶ್ ಬೈಕ್‌ಯಿದು.. ಬೆಲೆ ಇಷ್ಟೇನಾ, 540 ಕಿಲೋಮೀಟರ್ ಮೈಲೇಜ್!

ಹೋಂಡಾ ಹಾರ್ನೆಟ್ 2.0 (Honda Hornet 2.0) ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್‌ ಆಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಯುವಕರು ಮೆಚ್ಚುವ ರೀತಿಯಲ್ಲಿದೆ. ಅದಕ್ಕೆ ತಕ್ಕಂತೆ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಹಾರ್ನೆಟ್ 2.0' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ (Price):

ನೂತನ 'ಹೋಂಡಾ ಹಾರ್ನೆಟ್ 2.0' ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಾಗುತ್ತದೆ. ರೂ.1.47 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅದೇ ರೀತಿಯಲ್ಲಿ ರೂ.1.92 ಲಕ್ಷ ಆನ್-ರೋಡ್ ಬೆಲೆಯಿದ್ದು, ರೂ.20,000 ಡೌನ್-ಪೇಮೆಂಟ್ ಕಟ್ಟಿ, ಖರೀದಿಸಿದರೆ, ರೂ.1.72 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷದ ಅವಧಿಗೆ ಮಾಸಿಕ ರೂ.5,000 ವರೆಗೆ ಇಎಂಐ ಪಾವತಿಸಬೇಕು.

Honda Hornet 2 0 Bike Price Design Colours Engine Mileage Features And All Details

ವಿನ್ಯಾಸ & ಬಣ್ಣಗಳು (Design & Colours):

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಸಖತ್ ಅಗ್ರೆಸಿವ್ ಲುಕ್‌ನ್ನು ಒಳಗೊಂಡಿದೆ. ಫುಲ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್‌ಗಳು ಹಾಗೂ 'ಎಕ್ಸ್' ಆಕಾರದಲ್ಲಿರುವ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ರೇಡಿಯಂಟ್ ರೆಡ್ ಮೆಟಾಲಿಕ್ ಮತ್ತು ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಸುತ್ತಳತೆ (Dimension):

ಈ ಬೈಕ್ ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 2,034 ಮಿ.ಮೀ ಉದ್ದ, 783 ಮಿ.ಮೀ ಅಗಲ ಹಾಗೂ 1,064 ಮಿ.ಮೀ ಎತ್ತರವಿದೆ. 168 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,356 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 142 ಕೆಜಿ ತೂಕವಿದೆ.

Honda Hornet 2 0 Bike Price Design Colours Engine Mileage Features And All Details

ಕಾರ್ಯಕ್ಷಮತೆ (Performance):

ಹೊಸ ಹೋಂಡಾ ಹಾರ್ನೆಟ್ 2.0 ಮೋಟಾರ್‌ಸೈಕಲ್‌, ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 184.4-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 8,500 ಆರ್‌ಪಿಎಂನಲ್ಲಿ 17.03 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6,000 ಆರ್‌ಪಿಎಂನಲ್ಲಿ 15.9 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಮೈಲೇಜ್ (Mileage):

ಇದು ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ, 40 ರಿಂದ 45 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 12 ಲೀಟರ್‌ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. ಸಂಪೂರ್ಣವಾಗಿ ತುಂಬಿಸಿದರೆ 480 ರಿಂದ 540 ಕಿಲೋಮೀಟರ್‌ವರೆಗೆ ಓಡುತ್ತದೆ.

Honda Hornet 2 0 Bike Price Design Colours Engine Mileage Features And All Details

ವೈಶಿಷ್ಟ್ಯಗಳು (Features):

ಈ ಬೈಕ್ 4.2-ಇಂಚಿನ ಕಲರ್ ಟಿಎಫ್‌ಟಿ ಡಿಸ್‌ಪ್ಲೇ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 130 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 14.44 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸೀಟ್ ಎತ್ತರವು 790 ಮಿ.ಮೀ ಇದೆ.

ಸಸ್ಪೆನ್ಷನ್ ಸೆಟಪ್ & ಬೇಕಿಂಗ್ ಸಿಸ್ಟಮ್ (Suspension Setup & Braking System):

ನೂತನ ಹೋಂಡಾ ಹಾರ್ನೆಟ್ 2.0 ಮೋಟಾರ್‌ಸೈಕಲ್‌ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಯುಎಸ್‌ಡಿ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಅಡ್ಜಸ್ಟೇಬಲ್ ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತಕ್ಕಾಗಿ 17-ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ.

ಪ್ರತಿಸ್ಪರ್ಧಿ ಬೈಕ್‌ಗಳು (Rival Bikes):

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಟಿವಿಎಸ್ ಅಪಾಚೆ ಆರ್‌ಟಿಆರ್ 4ವಿ (TVS Apache RTR 200 4V), ಬಜಾಜ್ ಪಲ್ಸರ್ ಎನ್ಎಸ್200 (Bajaj Pulsar NS200), ಯಮಹಾ ಎಂಟಿ-15 ವಿ2 (Yamaha MT-15 V2) ಹಾಗೂ ಹೀರೋ ಎಕ್ಸ್‌ಟ್ರೀಮ್ 160ಆರ್ 4ವಿ (Hero Xtreme 160R 4V) ಬೈಕ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Wednesday, January 28, 2026, 11:20 [IST]
English summary
Honda hornet 2 0 bike price design colours engine mileage features and all details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+