Honda QC1: 90,000 ರೂ.ಗೆ ಸಿಗುತ್ತೆ.. 80 Km ರೇಂಜ್.. ಬಡವರ ಬಂಡಿ ಹೋಂಡಾ ಕ್ಯೂಸಿ1 ಕುರಿತ ಪ್ರಮುಖಾಂಶಗಳು!
ಹೋಂಡಾ ಕ್ಯೂಸಿ1 (Honda QC1) ಪ್ರಮುಖ ಇ-ಸ್ಕೂಟರ್ ಆಗಿದೆ. ದಿನಬಳಕೆಗೆ ಫರ್ಫೆಕ್ಟ್ ಆಯ್ಕೆಯಾಗಿದ್ದು, ಗ್ರಾಮೀಣ ಹಾಗೂ ನಗರ ಸಂಚಾರಕ್ಕೆ ಹೇಳಿ ಮಾಡಿಸಿದ ರೀತಿಯಲ್ಲಿದೆ. ನೀವು ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಕ್ಯೂಸಿ1' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ನೂತನ ಸ್ಕೂಟರ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ (Price):
ನೂತನ 'ಹೋಂಡಾ ಕ್ಯೂಸಿ1' ಎಲೆಕ್ಟ್ರಿಕ್ ಸ್ಕೂಟರ್ ಅಗ್ಗದ ಬೆಲೆಯಲ್ಲಿಯೂ ಲಭ್ಯವಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.90,022 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ರೂ.94,094 ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.10,000 ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ಶೇಕಡ 9% ಬಡ್ಡಿ ದರದಲ್ಲಿ 3 ವರ್ಷದ ಅವಧಿಗೆ ತಿಂಗಳಿಗೆ ರೂ.2,600 ವರೆಗೆ ಇಎಂಐ ಕಟ್ಟಬೇಕು.

ವಿನ್ಯಾಸ & ಬಣ್ಣಗಳು (Design & Colours):
ಇದು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ತುಂಬಾ ಸರಳವಾದ ಹೆಡ್‌ಲೈಟ್, ಇಂಡಿಕೇಟರ್‌ಗಳು ಮತ್ತು ಟೈಲ್ ಲೈಟ್ ಹಾಗೂ ಸಿಂಗಲ್ ಪೀಸ್ ಗ್ರಾಬ್ ಹ್ಯಾಂಡಲ್‌ನ್ನು ಪಡೆದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 12-ಇಂಚಿನ ಅಲಾಯ್ ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ. ಪರ್ಲ್ ಸೆರೆನಿಟಿ ಬ್ಲೂ, ಮ್ಯಾಟ್ ಫಾಗ್ಗಿ ಸಿಲ್ವರ್ ಮೆಟಾಲಿಕ್, ಪರ್ಲ್ ಮಿಸ್ಟಿ ವೈಟ್, ಪರ್ಲ್ ಶಾಲೋ ಬ್ಲೂ ಹಾಗೂ ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಸುತ್ತಳತೆ (Dimensions):
ಈ ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚು ವಿಶಾಲವಾಗಿದೆ. 1,826 ಎಂಎಂ ಉದ್ದ, 701 ಎಂಎಂ ಅಗಲ ಹಾಗೂ 1,129 ಎಂಎಂ ಎತ್ತರವಿದೆ. ಜೊತೆಗೆ 169 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,275 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 89.5 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಹೊಸ 'ಹೋಂಡಾ ಕ್ಯೂಸಿ1' ಇ-ಸ್ಕೂಟರ್ ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 80 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಈ ಸ್ಕೂಟರ್ ಹಬ್-ಮೌಂಟೆಡ್ ಬ್ರಷ್‌ಲೆಸ್ ಡಿಸಿ ಮೋಟಾರ್‌ನ್ನು ಒಳಗೊಂಡಿದ್ದು, 1.8 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 77 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ.
ಇದು 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 9.1 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 330ಡಬ್ಲ್ಯೂ ಆಫ್-ಬೋರ್ಡ್ ಚಾರ್ಜರ್‌ನ್ನು ಉಪಯೋಗಿಸಿದಾಗ ಶೇಕಡ 0 ರಿಂದ 80% ಚಾರ್ಜ್ ಆಗುವುದಕ್ಕೆ ಸರಿ ಸುಮಾರು 4 ಗಂಟೆ 30 ನಿಮಿಷಗಳು ತೆಗೆದುಕೊಳ್ಳುತ್ತದೆ.

ವೈಶಿಷ್ಟ್ಯಗಳು (Features):
ಈ ಎಲೆಕ್ಟ್ರಿಕ್ ಸ್ಕೂಟರ್ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. 5-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ, ಲಗೇಜ್ ಹುಕ್, ಯುಎಸ್‌ಬಿ-ಸಿ ಚಾರ್ಜಿಂಗ್ ಪಾಯಿಂಟ್, ಅನಲಾಗ್ ಕೀಯನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 26 ಲೀಟರ್‌ನಷ್ಟು ಸ್ಟೋರೇಜ್ ಸ್ಪೇಸ್‌ನ್ನು ಹೊಂದಿದೆ. ಸೀಟ್ ಉದ್ದವು 704 ಎಂಎಂ ಇದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):
ಹೊಸ 'ಹೋಂಡಾ ಕ್ಯೂಸಿ1' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) 5-ಸ್ಟೆಪ್ ಅಡ್ಜಸ್ಟಬಲ್ ಹೈಡ್ರಾಲಿಕ್ ಟ್ವಿನ್ ಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಜೊತೆಗೆ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








