ಆಫೀಸ್‌ಗೆ ಹೋಗುವವರಿಗೆ ಪರ್ಫೆಕ್ಟ್ ಚಾಯ್ಸ್.. 70 Km ಮೈಲೇಜ್.. ಬರೀ ರೂ.65,000 ದಿಂದ ಶುರು.. ಯಾವುದು ಬೆಸ್ಟ್?

ಹೋಂಡಾ ಶೈನ್ 100 (Honda Shine 100) ಜನಮೆಚ್ಚಿದ ಮೋಟಾರ್‌ಸೈಕಲ್‌ ಎಂದೇ ಮನೆ ಮಾತಾಗಿದೆ. ಇದಕ್ಕೆ ಟಿವಿಎಸ್ ರೇಡಿಯನ್ (Tvs Radeon) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಈ ಬೈಕ್‌ಗಳು ದಿನಬಳಕೆಗೆ ಹೆಚ್ಚು ಸೂಕ್ತವಾಗಿದ್ದು, ಆಫೀಸ್‌ಗೆ ಹೋಗುವವರಿಗೆ ಪರ್ಫೆಕ್ಟ್ ಚಾಯ್ಸ್ ಆಗಿವೆ. ನಾವಿಲ್ಲಿ ಇವುಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬೆಲೆ (Price):

ಇವೆರೆಡು ಬೈಕ್‌ಗಳು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಲಭ್ಯವಿವೆ. ಹೊಸ 'ಶೈನ್ 100' ರೂ.65,243 ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ ನೂತನ 'ರೇಡಿಯನ್' ಕನಿಷ್ಠ ರೂ.68,000 ಹಾಗೂ ಗರಿಷ್ಠ ರೂ. 80,600 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬೆಲೆಯ ವಿಚಾರದಲ್ಲಿ'ಶೈನ್ 100' ತುಸು ಅಗ್ಗವಾಗಿದೆ.

Honda Shine 100 vs Tvs Radeon Which Bike Best Comparison

ವಿನ್ಯಾಸ (design):

ಈ ಮೋಟಾರ್‌ಸೈಕಲ್‌ಗಳು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿವೆ. ಆದರೂ ನೋಡಲು ಸರಳವಾಗಿವೆ. 'ಹೋಂಡಾ ಶೈನ್ 100' ಉತ್ತಮವಾದ ಹೆಡ್‌ಲ್ಯಾಂಪ್ & ಟೈಲ್ ಲೈಟ್‌ನ್ನು ಒಳಗೊಂಡಿದೆ. ಆರೆಂಜ್ ವಿತ್ ಬ್ಲ್ಯಾಕ್, ಗ್ರೀನ್ ವಿತ್ ಬ್ಲ್ಯಾಕ್, ಗ್ರೇ ವಿತ್ ಬ್ಲ್ಯಾಕ್ ಮತ್ತು ಬ್ಲ್ಯೂ ವಿತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಹೆಚ್ಚು ವಿಶಾಲವಾಗಿದ್ದು, 168 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,245 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

'ಟಿವಿಎಸ್ ರೇಡಿಯನ್' ಸಹ ಅತ್ಯಾಕರ್ಷಕವಾದ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು & ಟೈಲ್ ಲ್ಯಾಂಪ್‌ನ್ನು ತನ್ನದಾಗಿಸಿಕೊಂಡಿದೆ. ಸ್ಟಾರ್‌ಲೈಟ್ ಬ್ಲ್ಯೂ, ಮೆಟಲ್ ಬ್ಲ್ಯಾಕ್, ರಾಯಲ್ ಪರ್ಪಲ್, ಟೈಟಾನಿಯಂ ಗ್ರೇ ಮತ್ತು ಆಲ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1265 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Honda Shine 100 vs Tvs Radeon Which Bike Best Comparison

ಕಾರ್ಯಕ್ಷಮತೆ (Permanence):

ಇವೆರೆಡು ಬೈಕ್‌ಗಳು ಬೆಲೆಗೆ ತಕ್ಕಂತೆ ಅತ್ಯುತ್ತಮವಾದ ಪವರ್‌ಟ್ರೇನ್‌ನ್ನು ಹೊಂದಿವೆ. ನೂತನ 'ಶೈನ್' 98.98 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 65 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 7.82 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ 'ರೇಡಿಯನ್' 109.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 60 ರಿಂದ 70 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 7.53 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ವೈಶಿಷ್ಟ್ಯಗಳು (Features):

ಈ ಮೋಟಾರ್‌ಸೈಕಲ್‌ಗಳು ಹಲವು ವೈಶಿಷ್ಟ್ಯಗಳನ್ನು ಪಡೆದಿವೆ. 'ಹೋಂಡಾ ಶೈನ್ 100' ಟ್ವಿನ್ ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೆನ್ಸರ್ ಮತ್ತು ಸಿಂಗಲ್-ಪೀಸ್ ಸೀಟ್‌ನ್ನು ಹೊಂದಿದೆ. ಸೀಟ್ ಎತ್ತರವು 786 ಎಂಎಂ ಇದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಡುಯಲ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ತನ್ನದಾಗಿಸಿಕೊಂಡಿದೆ. ಹಾಗೆಯೇ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

'ಟಿವಿಎಸ್ ರೇಡಿಯನ್' ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಎಲೆಕ್ಟ್ರಿಕ್ ಸೆಲ್ಫ್ ಸ್ಟಾರ್ಟ್, ಸೈಡ್ ಸ್ಟ್ಯಾಂಡ್ ಇಂಡಿಕೇಟರ್ ಹಾಗೂ ಸರ್ವಿಸ್ ಡ್ಯೂ ಇಂಡಿಕೇಟರ್‌ಗಳಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) 5 ಸ್ಟೆಪ್ ಪ್ರಿ-ಲೋಡ್ ಅಡ್ಜಸ್ಟೇಬಲ್ ಟ್ವಿನ್-ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Tuesday, March 10, 2026, 18:13 [IST]
English summary
Honda shine 100 vs tvs radeon which bike best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+