Honda: ಬಡವರ ಬೈಕ್‌ಯಿದು.. ಹೀರೋ ಸ್ಪ್ಲೆಂಡರ್ ಎದುರಾಳಿಗೆ ಫುಲ್ ಡಿಮ್ಯಾಂಡ್.. ಭಾರೀ ಸಂಖ್ಯೆಯಲ್ಲಿ ಸೇಲ್ಸ್!
ಹೋಂಡಾ ಶೈನ್ 125 (Honda Shine 125) ಜನಮೆಚ್ಚಿದ ಬೈಕ್ ಎಂದೇ ಹೆಸರುವಾಸಿಯಾಗಿದೆ. ಈ ಮೋಟಾರ್‌ಸೈಕಲ್‌ಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು ( ಜನವರಿ - 2026) ಉತ್ತಮ ಸಂಖ್ಯೆಯೇ ಮಾರಾಟಗೊಂಡಿದೆ. ಒಟ್ಟು 1,35,076 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 1,51,439 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಸ್ವಲ್ಪ ಮಟ್ಟಿಗೆ ಅಂದರೆ ಶೇಕಡ -10% ಕುಸಿತವಾಗಿದೆ.
'ಹೋಂಡಾ ಶೈನ್ 125' ವಿಶೇಷತೆಗಳೇನು:
ಈ ಬೈಕ್‌ನ್ನು ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಕನಿಷ್ಠ ರೂ.80,852 ಹಾಗೂ ಗರಿಷ್ಠ 85,211 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಡ್ರಮ್ (Drum) ಹಾಗೂ ಡಿಸ್ಕ್ (Disc) ಎಂಬ 2 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

ಇದು ನೋಡುಗರ ಕಣ್ಮನ ಸೆಳೆಯುವಂತಹ ವಿನ್ಯಾಸವನ್ನು ಒಳಗೊಂಡಿದೆ. ಹ್ಯಾಲೊಜೆನ್ ಬಲ್ಬ್ ಹೆಡ್‌ಲ್ಯಾಂಪ್, ಇಂಡಿಕೇಟರ್‌ಗಳು ಮತ್ತು ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ರೆಬೆಲ್ ರೆಡ್ ಮೆಟಾಲಿಕ್, ಜೀನಿ ಗ್ರೇ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ ಹಾಗೂ ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಹೆಚ್ಚು ವಿಶಾಲವಾಗಿದೆ. 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,285 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ಶೈನ್ 125' ಮೋಟಾರ್‌ಸೈಕಲ್, 123.94-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 10.63 ಪಿಎಸ್ ಅಶ್ವ ಶಕ್ತಿ ಮತ್ತು 11 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಸರಿ ಸುಮಾರು 65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 10.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

ಈ ಬೈಕ್ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್, ಸೈಲೆಂಟ್ ಸ್ಟಾರ್ಟ್ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. 102 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 7 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಡುಯಲ್-ರೇರ್ ಸ್ಪ್ರಿಂಗ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಸಿಬಿಎಸ್ (ಕಾಂಬಿ ಬ್ರೇಕಿಂಗ್ ಸಿಸ್ಟಮ್) ಮತ್ತು ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 18-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ.

ಈಚೆಗೆ ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್ (Honda Shine 125 Limited Edition) ಬಿಡುಗಡೆ:
ಈ ಹೊಸ ಮೋಟಾರ್‌ಸೈಕಲ್ ರೂ.86,211 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಸ್ಟ್ಯಾಂಡರ್ಡ್ 'ಶೈನ್ 125'ಗೆ ಹೋಲಿಕೆ ಮಾಡಿದರೆ, ವಿನ್ಯಾಸದಲ್ಲಿ ಹಲವು ಬದಲಾವಣೆಗಳನ್ನು ಪಡೆದುಕೊಂಡಿದೆ. ಮುಂಭಾಗ (ಫ್ರಂಟ್) ವೈಸರ್, ಸೈಡ್ ಕವರ್‌ಗಳು ಹಾಗೂ ಎಕ್ಸಾಸ್ಟ್ ಮಫ್ಲರ್ ಕವರ್‌ನ್ನು ಒಳಗೊಂಡಿದೆ. ಪರ್ಲ್ ಸೈರನ್ ಬ್ಲೂ ಬಣ್ಣದೊಂದಿಗೂ ಸಿಗುತ್ತದೆ. ಇದರೊಂದಿಗೆ ಹ್ಯಾಲೊಜೆನ್ ಹೆಡ್‌ಲ್ಯಾಂಪ್, ಇಂಡಿಕೇಟರ್‌ಗಳು ಮತ್ತು ಟೈಲ್ ಲ್ಯಾಂಪ್‌ನ್ನು ಪಡೆದಿದೆ.
ನೂತನ 'ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್' 123.94-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಕನ್ಸೋಲ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್ ಆಫ್ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








