ತುಂಬಾ ಚೆನ್ನಾಗಿವೆ.. ಅಗ್ಗದ ಬೈಕ್‌ಗಳಿವು.. 65 ಕಿ.ಮೀ ವರೆಗೆ ಮೈಲೇಜ್.. ಯಾವುದು ಬೆಸ್ಟ್?

ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್ (Honda Shine 125 Limited Edition) ಪ್ರಖ್ಯಾತ ಬೈಕ್ ಆಗಿದೆ. ಇದಕ್ಕೆ ಹೀರೋ ಗ್ಲಾಮರ್ ಎಕ್ಸ್ 125 (Hero Glamour X 125) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಇವೆರೆಡು ಮೋಟಾರ್‌ಸೈಕಲ್‌ಗಳು ಒಂದಕ್ಕಿಂತ ಒಂದು ಅದ್ಬುತವಾಗಿವೆ. ಜೊತೆಗೆ ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿವೆ. ನಾವಿಲ್ಲಿ ಈ ಬೈಕ್‌ಗಳ ಬೆಲೆ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬೆಲೆ (Price):

ಇವೆರೆಡು ಮೋಟಾರ್‌ಸೈಕಲ್‌ಗಳು ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುತ್ತವೆ. 'ಶೈನ್ 125 ಲಿಮಿಟೆಡ್ ಎಡಿಷನ್' ರೂ.86,211 ದರವನ್ನು ಪಡೆದಿದೆ. ಅದೇ ರೀತಿಯಲ್ಲಿ 'ಗ್ಲಾಮರ್ ಎಕ್ಸ್ 125' ರೂ.82,967 ರಿಂದ ರೂ.92,186 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರದ ವಿಚಾರದಲ್ಲಿ ಅಷ್ಟಾಗಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ.

Honda Shine 125 Limited Edition vs Hero Glamour X 125 Which Bike Best Comparison

ವಿನ್ಯಾಸ (Design):

ಈ ಬೈಕ್‌ಗಳು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿವೆ. ನೂತನ 'ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್' ಹ್ಯಾಲೊಜೆನ್ ಹೆಡ್‌ಲ್ಯಾಂಪ್‌, ಟೈಲ್ ಲ್ಯಾಂಪ್‌, ಸೈಡ್ ಕವರ್‌ಗಳು ಮತ್ತು ಎಕ್ಸಾಸ್ಟ್ ಮಫ್ಲರ್ ಕವರ್‌ನ್ನು ಒಳಗೊಂಡಿದೆ. ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಹೆಚ್ಚು ವಿಶಾಲವಾಗಿದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,285 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಹೀರೋ ಗ್ಲಾಮರ್ ಎಕ್ಸ್ 125' ಎಲ್ಇಡಿ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಪೊಸಿಷನ್ ಲೈಟ್‌ಗಳು & ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಮೆಟಾಲಿಕ್ ನೆಕ್ಸಸ್ ಬ್ಲೂ, ಮ್ಯಾಟ್ ಮೆಟಾಲಿಕ್ ಸಿಲ್ವರ್ ಮತ್ತು ಬ್ಲ್ಯಾಕ್ ಪರ್ಲ್ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,267 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Honda Shine 125 Limited Edition vs Hero Glamour X 125 Which Bike Best Comparison

ಕಾರ್ಯಕ್ಷಮತೆ (Permanence):

ಇವೆರೆಡು ಮೋಟಾರ್‌ಸೈಕಲ್‌ಗಳು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿವೆ. 'ಶೈನ್ 125 ಲಿಮಿಟೆಡ್ ಎಡಿಷನ್' 123.94-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 50 ರಿಂದ 60 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 102 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 7.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

'ಗ್ಲಾಮರ್ ಎಕ್ಸ್ 125' ಬೈಕ್ 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 65 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 105 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 5.7 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ವೈಶಿಷ್ಟ್ಯಗಳು (Features):

ಈ ಮೋಟಾರ್‌ಸೈಕಲ್‌ಗಳು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿವೆ. ಹೊಸ 'ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್' ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ & ಹಿಂಭಾಗ (ರೇರ್) ಡುಯಲ್ ಸ್ಪ್ರಿಂಗ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ನೂತನ 'ಹೀರೋ ಗ್ಲಾಮರ್ ಎಕ್ಸ್ 125' ಬೈಕ್ ಅಡ್ವಾನ್ಸ್ಡ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಟರ್ನ್-ಬೈ-ಟರ್ನ್ ನಾವಿಗೇಷನ್, ಬ್ಲೂಟೂತ್ ಕನೆಕ್ಟಿವಿಟಿ, ಐಡಲ್-ಸ್ಟಾರ್ಟ್-ಸ್ಟಾಪ್ ಸಿಸ್ಟಮ್ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ & ಹಿಂಭಾಗ (ರೇರ್) 5-ಸ್ಟೆಪ್ ಹೈಡ್ರಾಲಿಕ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Sunday, March 8, 2026, 17:33 [IST]
English summary
Honda shine 125 limited edition vs hero glamour x 125 which bike best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+