Honda: ಬಡವರ ಬೈಕ್‌ಗೆ ಮನಸೋತ ಜನ.. ಹೀರೋ ಸ್ಪ್ಲೆಂಡರ್‌ಗೆ ನಂ.1 ಪ್ರತಿಸ್ಪರ್ಧಿಯಿದು!

ಹೋಂಡಾ ಶೈನ್ (Honda Shine) ಜನಪ್ರಿಯ ಮೋಟಾರ್‌ಸೈಕಲ್‌ ಎಂದೇ ಖ್ಯಾತಿ ಗಳಿಸಿದೆ. ದಿನದಿಂದ ದಿನಕ್ಕೆ ಡಿಮ್ಯಾಂಡ್ ಹೆಚ್ಚಾಗುತ್ತಲೇ ಇದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್-2025) ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 1,41,602 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 1,00,841 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ವಿಶ್ಲೇಷಣೆ ಮಾಡಿದಾಗ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 40.42% ಬೆಳವಣಿಗೆಯಾಗಿದೆ.

ಡಿಸೆಂಬರ್‌ನಲ್ಲಿ 'ಹೋಂಡಾ ಶೈನ್' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಈ ಬೈಕ್ ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ಹೀಗಾಗಿ 'ಶೈನ್' ಮಾರಾಟ ಸಂಖ್ಯೆಯೂ ಹೆಚ್ಚಳಗೊಂಡಿದೆ ಎನ್ನಲಾಗಿದೆ.

Honda Shine December 2025 Sales Details

ಹೊಚ್ಚ ಹೊಸ 'ಹೋಂಡಾ ಶೈನ್' 3 ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅವುಗಳೆಂದರೆ ಸ್ಟ್ಯಾಂಡರ್ಡ್ ಶೈನ್ 100, ಶೈನ್ 100 ಡಿಎಕ್ಸ್ ಮತ್ತು ಶೈನ್ 125 ಎಂದು. ಈ ಮೂರು ಮೋಟಾರ್‌ಸೈಕಲ್‌ಗಳು ನೋಡುಗರ ಕಣ್ಣು ಕುಕ್ಕುವಂತಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿವೆ. ಕೈಗೆಟಕುವ ಬೆಲೆಯಲ್ಲಿಯೂ ದೊರೆಯುತ್ತವೆ.

ಹೋಂಡಾ ಶೈನ್ 100 (Honda Shine 100):

ಇದನ್ನು ಖರೀದಿದಾರರು ಮೆಚ್ಚಿಕೊಂಡಿದ್ದಾರೆ. ರೂ.65,561 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಆರೆಂಜ್ ವಿತ್ ಬ್ಲ್ಯಾಕ್, ಗ್ರೀನ್ ವಿತ್ ಬ್ಲ್ಯಾಕ್, ಗ್ರೇ ವಿತ್ ಬ್ಲ್ಯಾಕ್ ಮತ್ತು ಬ್ಲ್ಯೂ ವಿತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 168 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,245 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Honda Shine December 2025 Sales Details

ನೂತನ 'ಹೋಂಡಾ ಶೈನ್ 100' ಬೈಕ್, 98.98-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 65 ಕಿಲೋಮೀಟರ್‌ವರೆಗೂ ಮೈಲೇಜ್‌ನ್ನು ಕೊಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೆನ್ಸರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX):

ಈ ಬೈಕ್‌ನ್ನು ಯುವ ಗ್ರಾಹಕರಿಗಾಗಿಯೇ ಸಿದ್ದಪಡಿಸಲಾಗಿದೆ. ರೂ.70,505 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್ ಹಾಗೂ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 168 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,245 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Honda Shine December 2025 Sales Details

ಹೊಸ 'ಶೈನ್ 100 ಡಿಎಕ್ಸ್' ಮೋಟಾರ್‌ಸೈಕಲ್‌, 98.98-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 65 ಕಿಲೋಮೀಟರ್‌ವರೆಗೂ ಮೈಲೇಜ್‌ನ್ನು ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಸೈಲೆಂಟ್ ಎಲೆಕ್ಟ್ರಿಕ್ ಸ್ಟಾರ್ಟರ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಶೈನ್ 125 (Honda Shine 125):

ಇದು ಪ್ರಮುಖ ಬೈಕ್ ಆಗಿದೆ. ರೂ.80,542 ರಿಂದ ರೂ.84,902 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ರೆಬೆಲ್ ರೆಡ್ ಮೆಟಾಲಿಕ್, ಡೀಸೆಂಟ್ ಬ್ಲೂ ಮೆಟಾಲಿಕ್, ಜೀನಿ ಗ್ರೇ ಮೆಟಾಲಿಕ್ ಮತ್ತು ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Honda Shine December 2025 Sales Details

ನೂತನ 'ಶೈನ್ 125' ಮೋಟಾರ್‌ಸೈಕಲ್‌, 123.94-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 50 ರಿಂದ 60 ಕಿಲೋಮೀಟರ್‌ವರೆಗೂ ಮೈಲೇಜ್‌ನ್ನು ಕೊಡುತ್ತದೆ. 102 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

More from DriveSpark

Article Published On: Saturday, January 24, 2026, 11:27 [IST]
English summary
Honda shine december 2025 sales details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+