ಆಫೀಸ್‌ಗೆ ಹೋಗುವವರಿಗೆ ಬೆಸ್ಟ್ ಬೈಕ್‌ಗಳಿವು: 65 Km ಮೈಲೇಜ್.. ಬೆಲೆಯೂ ಅಗ್ಗ.. ಯಾವುದು ಬೆಸ್ಟ್?

ಹೋಂಡಾ ಎಸ್‌ಪಿ 125 (Honda SP 125) ಜನಮೆಚ್ಚಿದ ಮೋಟಾರ್‌ಸೈಕಲ್‌ ಎಂದೇ ಮನೆ ಮಾತಾಗಿದೆ. ಇದಕ್ಕೆ ಹೀರೋ ಗ್ಲಾಮರ್ (Hero Glamour) ಪ್ರಬಲವಾದ ಪ್ರತಿಸ್ಪರ್ಧಿಯಾಗಲಿದೆ. ಈ ಬೈಕ್‌ಗಳು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಹೊಸತನಗಳಿಗೂ ಸಾಕ್ಷಿಯಾಗಿವೆ. ನಾವಿಲ್ಲಿ ಇವೆರೆಡು ಮೋಟಾರ್‌ಸೈಕಲ್‌ಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಬೆಲೆ (Price):

ಈ ಬೈಕ್‌ಗಳು ಅಗ್ಗದ ದರದಲ್ಲೂ ಲಭ್ಯವಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. 'ಹೋಂಡಾ ಎಸ್‌ಪಿ 125' ರೂ.87,653 ರಿಂದ ರೂ.92,571 ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ 'ಹೀರೋ ಗ್ಲಾಮರ್' ರೂ.82,398 ರಿಂದ ರೂ.86,085 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬೆಲೆಯ ವಿಚಾರದಲ್ಲಿ 'ಎಸ್‌ಪಿ 125'ಗೆ ಹೋಲಿಕೆ ಮಾಡಿದರೆ, 'ಗ್ಲಾಮರ್' ಸ್ವಲ್ಪ ಮಟ್ಟಿಗೆ ಅಗ್ಗವಾಗಿದೆ.

Honda SP 125 vs Hero Glamour Which Bike Best Comparison

ವಿನ್ಯಾಸ & ಬಣ್ಣಗಳು (Design & Colours):

ಇವೆರೆಡು ಮೋಟಾರ್‌ಸೈಕಲ್‌ಗಳು ಒಂದಕ್ಕಿಂತ ಒಂದು ಅದ್ಭುತವಾದ ವಿನ್ಯಾಸವನ್ನು ಹೊಂದಿವೆ. 'ಹೋಂಡಾ ಎಸ್‌ಪಿ 125' ಉತ್ತಮವಾದ ಶಾರ್ಪ್ ಎಲ್ಇಡಿ ಹೆಡ್‌ಲ್ಯಾಂಪ್, ಇಂಡಿಕೇಟರ್‌ಗಳು ಮತ್ತು ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ & ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 160 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 117 ಕೆಜಿ ತೂಕವಿದೆ.

'ಹೀರೋ ಗ್ಲಾಮರ್' ಕೂಡ ತುಂಬಾ ಚೆನ್ನಾಗಿದೆ. ಅತ್ಯಾಕರ್ಷಕವಾದ ಎಲ್ಇಡಿ ಹೆಡ್‌ಲ್ಯಾಂಪ್, ಇಂಡಿಕೇಟರ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಬ್ಲ್ಯಾಕ್ ಮೆಟಾಲಿಕ್ ಸಿಲ್ವರ್, ಬ್ಲ್ಯಾಕ್ ಸ್ಪೋರ್ಟ್ಸ್ ರೆಡ್ ಹಾಗೂ ಟೆಕ್ನೋ ಬ್ಲೂ ಮೆಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,267 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 121.3 ಕೆಜಿ ತೂಕವಿದೆ.

Honda SP 125 vs Hero Glamour Which Bike Best Comparison

ಕಾರ್ಯಕ್ಷಮತೆ (Performance):

ಈ ಬೈಕ್‌ಗಳು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿವೆ. ಹೊಸ 'ಹೋಂಡಾ ಎಸ್‌ಪಿ 125' ಮೋಟಾರ್‌ಸೈಕಲ್‌, 123.94 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 100 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 7.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ 'ಹೀರೋ ಗ್ಲಾಮರ್' ಬೈಕ್ 124.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 7.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ವೈಶಿಷ್ಟ್ಯಗಳು (Features):

ಇವೆರೆಡು ಮೋಟಾರ್‌ಸೈಕಲ್‌ಗಳು ಹತ್ತಾರು ಅತ್ಯಾಧುನಿಕವಾದ ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಬಹುಮುಖ್ಯವಾಗಿ 'ಹೋಂಡಾ ಎಸ್‌ಪಿ 125' ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ & ಸೈಲೆಂಟ್ ಸ್ಟಾರ್ಟರ್‌ನ್ನು ಪಡೆದಿದೆ. ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. 18-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ.

'ಹೀರೋ ಗ್ಲಾಮರ್' ಡಿಜಿಟಲ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗೂ ಹೆಸರುವಾಸಿಯಾಗಿಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. 18-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.

More from DriveSpark

Article Published On: Monday, February 16, 2026, 16:12 [IST]
English summary
Honda sp 125 vs hero glamour which bike best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+