ಪ್ರತಿದಿನ ಆಫೀಸ್‌ಗೆ ಹೋಗುವವರಿಗೆ ಫರ್ಫೆಕ್ಟ್.. 83,000 ರೂ.ನಿಂದ ಪ್ರಾರಂಭ.. 69 Km ವರೆಗೆ ಮೈಲೇಜ್.. ಯಾವುದು ಬೆಸ್ಟ್?

ಹೋಂಡಾ ಎಸ್‌ಪಿ 125 (Honda SP 125) ಪ್ರಮುಖ ಬೈಕ್ ಎಂದೇ ಹೆಸರುವಾಸಿಯಾಗಿದೆ. ಇದಕ್ಕೆ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಈ ಮೋಟಾರ್‌ಸೈಕಲ್‌ಗಳು ಒಂದಕ್ಕಿಂತ ಒಂದು ಅದ್ಭುತವಾಗಿವೆ. ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ನಾವಿಲ್ಲಿ.. ಈ ಬೈಕ್‌ಗಳ ಬೆಲೆ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬೆಲೆ (Price):

ಇವೆರೆಡು ಮೋಟಾರ್‌ಸೈಕಲ್‌ಗಳು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿವೆ. ಹೊಸ 'ಹೋಂಡಾ ಎಸ್‌ಪಿ 125' ರೂ.87,878 ರಿಂದ ರೂ.95,465 ದರವನ್ನು ಪಡೆದಿದೆ. ನೂತನ 'ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' ರೂ.83,448 ರಿಂದ ರೂ.87,044 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ದರದ ವಿಚಾರದಲ್ಲಿ 'ಎಸ್‌ಪಿ 125'ಗೆ ಹೋಲಿಸಿದರೆ 'ಸ್ಪ್ಲೆಂಡರ್ ಎಕ್ಸ್‌ಟೆಕ್' ತುಸು ಅಗ್ಗವಾಗಿದೆ.

Honda SP 125 Vs Hero Super Splendor XTEC Which Bike Best Comparison

ವಿನ್ಯಾಸ (Design):

ಈ ಬೈಕ್‌ಗಳು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಮನ ಸೆಳೆಯುವಂತಿವೆ. 'ಹೋಂಡಾ ಎಸ್‌ಪಿ 125' ಎಲ್ಇಡಿ ಹೆಡ್‌ಲ್ಯಾಂಪ್, ಇಂಡಿಕೇಟರ್‌ಗಳು, ಟೈಲ್ ಲ್ಯಾಂಪ್‌ ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ & ಮ್ಯಾಟ್ ಮಾರ್ವೆಲ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಹೆಚ್ಚು ವಿಶಾಲವಾಗಿದೆ. 160 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

'ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' ಎಲ್ಇಡಿ ಹೆಡ್‌ಲ್ಯಾಂಪ್, ಇಂಟಿಗ್ರೇಟೆಡ್ ಡಿಆರ್‌ಎಲ್‌, ಟೈಲ್ ಲ್ಯಾಂಪ್‌ ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಕ್ಯಾಂಡಿ ಬ್ಲೇಜಿಂಗ್, ಮ್ಯಾಟ್ ನೆಕ್ಸಸ್ ಬ್ಲೂ ಮತ್ತು ಮ್ಯಾಟ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 180 ಮಿ.ಮೀ ಗ್ರೌಂಡ್ ಕಿಯರೆನ್ಸ್ ಮತ್ತು 1,267 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Honda SP 125 Vs Hero Super Splendor XTEC Which Bike Best Comparison

ಕಾರ್ಯಕ್ಷಮತೆ (Performance):

ಇವೆರೆಡು ಮೋಟಾರ್‌ಸೈಕಲ್‌ಗಳು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿವೆ. 'ಹೋಂಡಾ ಎಸ್‌ಪಿ' ಬೈಕ್ 123.94 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 60 ರಿಂದ 65 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 100 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 7.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

'ಹೀರೋ ಸೂಪರ್ ಸ್ಪ್ಲೆಂಡರ್' ಮೋಟಾರ್‌ಸೈಕಲ್‌, 124.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 69 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 7.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ವೈಶಿಷ್ಟ್ಯಗಳು (Features):

ಈ ಬೈಕ್‌ಗಳು ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿವೆ. ನೂತನ 'ಹೋಂಡಾ ಎಸ್‌ಪಿ 125' ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನ್ ಮತ್ತು ಸೈಲೆಂಟ್ ಸ್ಟಾರ್ಟರ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ & ಹಿಂಭಾಗ (ರೇರ್) ಟ್ವಿನ್-ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೊಸ 'ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್' ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಎಂಜಿನ್ ಕಿಲ್ ಸ್ವೀಚ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಮತ್ತು ಹಿಂಭಾಗ (ರೇರ್) ಡುಯಲ್-ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Thursday, March 19, 2026, 20:54 [IST]
English summary
Honda sp 125 vs hero super splendor xtec which bike best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+