ಫುಲ್ ಟ್ಯಾಂಕ್ ಮಾಡಿಸಿದ್ರೆ 600 Km ಮೈಲೇಜ್.. 1.13 ಲಕ್ಷ ರೂಪಾಯಿ.. ಈ ಜನಪ್ರಿಯ ಬೈಕ್‌ನ್ನು ಎಲ್ಲರು ತೆಗೆದುಕೊಳ್ಳಬಹುದು!

ಹೋಂಡಾ ಎಸ್‌ಪಿ 160 (Honda SP 160) ಜಗಮೆಚ್ಚಿದ ಬೈಕ್ ಆಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಪ್ರೀಮಿಯಂ ಲುಕ್‌ನ್ನು ಹೊಂದಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಮನೆತರಲು ಪ್ಲಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಎಸ್‌ಪಿ 160' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಬೈಕ್‌ನ ಬೆಲೆ ಎಷ್ಟು.. ಹೇಗೆ ಕಾರ್ಯನಿರ್ವಹಿಸುತ್ತದೆ ಹಾಗೂ ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರವನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ನೂತನ 'ಹೋಂಡಾ ಎಸ್‌ಪಿ 160' ಮೋಟಾರ್‌ಸೈಕಲ್‌ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.1.13 ಲಕ್ಷ ಹಾಗೂ ಗರಿಷ್ಠ ರೂ.1.19 ಲಕ್ಷ (ಎಕ್ಸ್-ಶೋರೂಂ - ಕರ್ನಾಟಕ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಡ್ರಮ್ (Drum) ಹಾಗೂ ಡಿಸ್ಕ್ (Disc) ಬ್ರೇಕ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

Honda SP 160 Bike Price Design Colors Engine Mileage Features And All Details

ವಿನ್ಯಾಸ & ಬಣ್ಣಗಳು (Design & Colors):

ಇದು ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಶಾರ್ಪ್ ಎಲ್ಇಡಿ ಹೆಡ್‌ಲ್ಯಾಂಪ್, ಮಸ್ಕ್ಯುಲರ್ ಫ್ಯುಯೆಲ್ ಟ್ಯಾಂಕ್, ಸಿಗ್ನೇಚರ್ ಎಲ್ಇಡಿ ಟೈಲ್ ಲ್ಯಾಂಪ್ ಮತ್ತು ಪ್ರೀಮಿಯಂ ಕ್ರೋಮ್ ಮಫ್ಲರ್‌ನ್ನು ಒಳಗೊಂಡಿದೆ. ರೇಡಿಯಂಟ್ ರೆಡ್ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ ಹಾಗೂ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಸುತ್ತಳತೆ (Dimension):

ಈ ಬೈಕ್ ಸಾಕಷ್ಟು ವಿಶಾಲವಾಗಿದೆ. 2,061 ಎಂಎಂ ಉದ್ದ, 786 ಎಂಎಂ ಮತ್ತು 1,100 ಎಂಎಂ ಎತ್ತರವಿದೆ. ಹಾಗೆಯೇ 177 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,347 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 138 ಕೆಜಿ ತೂಕವಿದೆ.

Honda SP 160 Bike Price Design Colors Engine Mileage Features And All Details

ಕಾರ್ಯಕ್ಷಮತೆ (Performance):

ಹೊಸ 'ಹೋಂಡಾ ಎಸ್‌ಪಿ 160' ಮೋಟಾರ್‌ಸೈಕಲ್‌, ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 162.71-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 7,500 ಆರ್‌ಪಿಎಂನಲ್ಲಿ 13 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5,500 ಆರ್‌ಪಿಎಂನಲ್ಲಿ 14.58 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಮೈಲೇಜ್ (Mileage):

ಇದು ಸ್ವಲ್ಪ ಮಟ್ಟಿಗೆ ದುಬಾರಿಯಾಗಿದ್ದರೂ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 12 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. ಒಮ್ಮೆ ಟ್ಯಾಂಕ್‍ನ್ನು ಪೂರ್ತಿಯಾಗಿ ತುಂಬಿಸಿದರೆ 600 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು.

Honda SP 160 Bike Price Design Colors Engine Mileage Features And All Details

ವೈಶಿಷ್ಟ್ಯಗಳು (Features):

ಈ ಬೈಕ್ 4.2-ಇಂಚಿನ ಟಿಎಫ್‌ಟಿ ಸ್ಕ್ರೀನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಹೋಂಡಾ ರೋಡ್‌ಸಿಂಕ್ ಅಪ್ಲಿಕೇಶನ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸೀಟ್ ಎತ್ತರವು 796 ಎಂಎಂ ಇದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 17-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System):

'ಹೋಂಡಾ ಎಸ್‌ಪಿ 160' ಮೋಟಾರ್‌ಸೈಕಲ್‌, ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಪ್ರತಿಸ್ಪರ್ಧಿ ಮೋಟಾರ್‌ಸೈಕಲ್‌ಗಳು (Rival Motorcycles):

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಟಿವಿಎಸ್ ಅಪಾಚೆ ಆರ್‌ಟಿಆರ್ 160 4ವಿ (TVS Apache RTR 160 4V), ಬಜಾಜ್ ಪಲ್ಸರ್ ಎನ್ 160 (Bajaj Pulsar N160) ಹಾಗೂ ಹೀರೋ ಎಕ್ಸ್‌ಟ್ರೀಮ್ 160ಆರ್ (Hero Xtreme 160R) ಬೈಕ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Friday, January 2, 2026, 15:57 [IST]
English summary
Honda sp 160 bike price design colors engine mileage features and all details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+