Revolt: ಮೊದಲೇ ಅಗ್ಗ.. ಇದೀಗ ರೂ.25,000 ವರೆಗೆ ಡಿಸ್ಕೌಂಟ್.. ಪೆಟ್ರೋಲ್‌ಗೆ ಗುಡ್‌ಬೈ ಹೇಳಿ!

ಭಾರತದ ನಂಬರ್ 1 ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿ ರಿವೋಲ್ಟ್ ಮೋಟಾರ್ಸ್ (Revolt Motors) ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಹಲವು ಇ-ಬೈಕ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ಗಳ ಮಾರಾಟವನ್ನು ಹೆಚ್ಚಿಸಲು ಕಂಪನಿಯು ಮುಂದಾಗಿದ್ದು, ಅತಿದೊಡ್ಡ ಹಣಕಾಸಿನ ಪ್ರಯೋಜನಗಳನ್ನು ಘೋಷಣೆ ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ರಿವೋಲ್ಟ್ ಮೋಟಾರ್ಸ್, ವಿವಿಧ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ಗಳ ಖರೀದಿ ಮೇಲೆ ಒಟ್ಟು ರೂ.25,000 ವರೆಗಿನ ಸೀಮಿತ ಅವಧಿಯ ಕೊಡುಗೆಗಳನ್ನು ನೀಡುತ್ತಿದೆ. ಇದು ಮಾರ್ಚ್ 31 ರವರೆಗೆ ಮಾನ್ಯವಾಗಿರಲಿದೆ. ಈ ಆಫರ್‌ನಲ್ಲಿ ಉಚಿತ ವಿಮೆ (ಫ್ರೀ ಇನ್ಶೂರೆನ್ಸ್) ಹಾಗೂ ರೂ.4,999 ಮೌಲ್ಯದ ವಿಸ್ತೃತ ವಾರಂಟಿಯು ಲಭ್ಯವಿದೆ. ಜೊತೆಗೆ ರೂ.8,000 ವರೆಗೆ ಗ್ರಾಹಕರ ರಿಯಾಯಿತಿ (ಕನ್ಸೂಮರ್ ಡಿಸ್ಕೌಂಟ್) ಮತ್ತು ಪಿಎಂ ಇ-ಡ್ರೈವ್ ಸ್ಕೀಮ್‌ನಡಿ ರೂ.5,000 ಮೊತ್ತದ ಪ್ರಯೋಜನವು ಕೂಡ ಸೇರಿದೆ.

Revolt Motors Special Offer On RV1 RV1 Plus RV BlazeX RV400 BRZ And RV400 E-Bikes Know Details

ರಿವೋಲ್ಟ್ ಮಾರಾಟಗೊಳಿಸುವ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ಗಳು ಯಾವುವು:

ರಿವೋಲ್ಟ್ ಆರ್‌ವಿ1: ಇದೊಂದು ಎಂಟ್ರಿ ಲೆವೆಲ್ ಮಾಡೆಲ್ ಆಗಿದೆ. ಕಡಿಮೆ ಬೆಲೆಯಲ್ಲಿಯೂ ಲಭ್ಯವಿದ್ದು, ಎಲ್ಲ ವರ್ಗದ ಜನರಿಗೆ ಸುಲಭವಾಗಿ ಕೈಗೆಟುಕುತ್ತದೆ. ರೂ.99,999 ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಬ್ಲ್ಯಾಕ್ ಮಿಡ್‌ನೈಟ್ ಬ್ಲೂ, ಬ್ಲ್ಯಾಕ್ ನಿಯಾನ್ ಗ್ರೀನ್, ಟೈಟಾನ್ ರೆಡ್ ಸಿಲ್ವರ್ ಹಾಗೂ ಕಾಸ್ಮಿಕ್ ಬ್ಲ್ಯಾಕ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಹೆಚ್ಚು ವಿಶಾಲವಾಗಿದ್ದು, 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 1,350 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ರಿವೋಲ್ಟ್ ಆರ್‌ವಿ1' ಇ-ಬೈಕ್ 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 100 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 70 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 6-ಇಂಚಿನ ಎಲ್‌ಸಿಡಿ ಡಿಜಿಟಲ್ ಡಿಸ್‌ಪ್ಲೇ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Revolt Motors Special Offer On RV1 RV1 Plus RV BlazeX RV400 BRZ And RV400 E-Bikes Know Details

ರಿವೋಲ್ಟ್ ಆರ್‌ವಿ1 ಪ್ಲಸ್: ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ ರೂ.1,09,990 ಬೆಲೆಯನ್ನು ಹೊಂದಿದೆ. 3.24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 160 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 70 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 6-ಇಂಚಿನ ಎಲ್‌ಸಿಡಿ ಡಿಜಿಟಲ್ ಕ್ಲಸ್ಟರ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ರಿವೋಲ್ಟ್ ಆರ್‌ವಿ ಬ್ಲೇಜ್‌ಎಕ್ಸ್: ಇದು ರೂ.1,24,990 ದರವನ್ನು ಪಡೆದಿದೆ. 3.24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ತನ್ನದಾಗಿಸಿಕೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 150 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 6-ಇಂಚಿನ ಎಲ್‌ಸಿಡಿ ಕನ್ಸೋಲ್, ಜಿಪಿಎಸ್ ಟ್ರ್ಯಾಕಿಂಗ್ ಮತ್ತು ಜಿಯೋ-ಫೆನ್ಸಿಂಗ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Revolt Motors Special Offer On RV1 RV1 Plus RV BlazeX RV400 BRZ And RV400 E-Bikes Know Details

ರಿವೋಲ್ಟ್ ಆರ್‌ವಿ400 ಬಿಆರ್‌ಝಡ್: ಈ ಎಲೆಕ್ಟ್ರಿಕ್ ಬೈಕ್ ರೂ.142,950 ಬೆಲೆಯನ್ನು ಒಳಗೊಂಡಿದೆ. 3.24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 80 ರಿಂದ 150 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ರಿವೋಲ್ಟ್ ಆರ್‌ವಿ400: ಇದೊಂದು ಟಾಪ್ ಎಂಡ್ ಮಾಡೆಲ್ ಆಗಿದೆ. ರೂ.1,49,950 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 3.24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 150 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಡಿಜಿಟಲ್ ಎಲ್‌ಸಿಡಿ ಕನ್ಸೋಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Friday, March 13, 2026, 15:59 [IST]
English summary
Revolt motors special offers on rv1 rv1 plus rv blazex rv400 brz and rv400 e bikes know details
Read more on revolt india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+