ಮೊದಲೇ ಬೆಲೆ ಕಮ್ಮಿ.. 150 Km ರೇಂಜ್.. 1.20 ಲಕ್ಷ ರೂ.ಗೆ ಸಿಗುತ್ತೆ.. ಈ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಕುರಿತ ಪ್ರಮುಖಾಂಶಗಳು!
ರಿವೋಲ್ಟ್ ಆರ್‌ವಿ ಬ್ಲೇಜ್‌ಎಕ್ಸ್ (Revolt RV BlazeX) ಪ್ರಮುಖ ಇ-ಮೋಟಾರ್‌ಸೈಕಲ್ ಆಗಿದೆ. ಇದು ದಿನಬಳಕೆಗೆ ಹೆಚ್ಚು ಸೂಕ್ತವಾಗಿದ್ದು, ನಗರ ಪ್ರದೇಶದ ಚಾಲನೆಗೂ ಹೇಳಿ ಮಾಡಿಸಿದ ರೀತಿಯಲ್ಲಿದೆ. ಗ್ರಾಹಕರು ಸಹ ಮೆಚ್ಚಿದ್ದಾರೆ. ನೀವು ಹೊಚ್ಚ ಹೊಸ ಎಲೆಕ್ಟ್ರಿಕ್ ಬೈಕ್‌ವೊಂದನ್ನು ಖರೀದಿಸಲು ಆಲೋಚಿದ್ದೀರಾ.. ಹಾಗಾದರೆ ಇದೇ 'ಆರ್‌ವಿ ಬ್ಲೇಜ್‌ಎಕ್ಸ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ (Price):
ನೂತನ 'ರಿವೋಲ್ಟ್ ಆರ್‌ವಿ ಬ್ಲೇಜ್‌ಎಕ್ಸ್' ಕೈಗೆಟುಕುವ ದರದಲ್ಲೂ ಲಭ್ಯವಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್ ಪ್ರಕಾರ, ರೂ.1,19,990 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದ್ದು, ಮಧ್ಯಮ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ಅದೇ ರೀತಿಯಲ್ಲಿ ರೂ.124,990 ಆನ್-ರೋಡ್ ದರವನ್ನು ಪಡೆದಿದೆ. ರೂ.10,000 ಡೌನ್-ಪೇಮೆಂಟ್ ಪಾವತಿಸಿ ಖರೀದಿಸಿದರೆ, ರೂ.1,14,990 ಸಾಲವಿರುತ್ತದೆ. 3 ವರ್ಷದ ಅವಧಿಗೆ ತಿಂಗಳಿಗೆ ರೂ.4,081 ಇಎಂಐ ಕಟ್ಟಬೇಕು.

ವಿನ್ಯಾಸ & ಬಣ್ಣಗಳು (Design & Colours):
ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ರೌಂಡ್-ಎಲ್ಇಡಿ ಹೆಡ್‌ಲೈಟ್, ಇಂಟಿಗ್ರೇಟೆಡ್ ಡಿಆರ್‌ಎಲ್‌ಗಳು, ಟೈಲ್‌ಲೈಟ್‌ಗಳು ಮತ್ತು ಲಾಂಗ್ ಸೀಟ್‌ನ್ನು ಹೊಂದಿದೆ. ಎಕ್ಲಿಪ್ಸ್ ರೆಡ್ ಬ್ಲ್ಯಾಕ್ ಹಾಗೂ ಸ್ಟರ್ಲಿಂಗ್ ಸಿಲ್ವರ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಸುತ್ತಳತೆ (Dimensions):
ಈ ಸ್ಕೂಟರ್ ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 2,045 ಎಂಎಂ ಉದ್ದ, 710 ಎಂಎಂ ಅಗಲ ಹಾಗೂ 1,065 ಎಂಎಂ ಎತ್ತರವಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,350 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 113 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಹೊಸ 'ರಿವೋಲ್ಟ್ ಆರ್‌ವಿ ಬ್ಲೇಜ್‌ಎಕ್ಸ್' ಇ-ಬೈಕ್ ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 3.24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 150 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನಲ್ಲಿರುವ ಮೋಟಾರ್, 4 ಕೆಡಬ್ಲ್ಯೂ ಪೀಕ್ ಪವರ್ ಉತ್ಪಾದಿಸುತ್ತದೆ.
ಇದು 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 3.2 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಈ ಎಲೆಕ್ಟ್ರಿಕ್ ಬೈಕ್‌ನಲ್ಲಿರುವ ಬ್ಯಾಟರಿಯು ಫಾಸ್ಟ್ ಚಾರ್ಜಿಂಗ್ ಬಳಕೆಯಲ್ಲಿ 80 ನಿಮಿಷಗಳಲ್ಲಿ 0 ರಿಂದ 80 ಚಾರ್ಜ್ ಆಗುತ್ತದೆ. ಹೋಂ ಚಾರ್ಜರ್‌ನ್ನು ಉಪಯೋಗಿದಾಗ ಸಂಪೂರ್ಣವಾಗಿ ಚಾರ್ಜ್ ಆಗುವುದಕ್ಕೆ 3 ಗಂಟೆ 30 ನಿಮಿಷಗಳು ಸಾಕಾಗುತ್ತದೆ.

ವೈಶಿಷ್ಟ್ಯಗಳು (Features):
ನೂತನ 'ರಿವೋಲ್ಟ್ ಆರ್‌ವಿ ಬ್ಲೇಜ್‌ಎಕ್ಸ್' ಇ-ಬೈಕ್ 6-ಇಂಚಿನ ಎಲ್‌ಸಿಡಿ ಸ್ಕ್ರೀನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಹಾಗೂ ಓಟಿಎ ಅಪ್‌ಡೇಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು ದೊಡ್ಡದಾದ 17-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ. ಸೀಟ್ ಎತ್ತರವು 790 ಎಂಎಂ ಇದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):
ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಬಲ್ಲದು. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ಗಳನ್ನು ಪಡೆದಿದೆ. ಜೊತೆಗೆ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಪ್ರತಿಸ್ಪರ್ಧಿ ಬೈಕ್‌ಗಳು (Rival Bikes):
ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಓಲಾ ರೋಡ್‌ಸ್ಟರ್ ಎಕ್ಸ್ (Ola Roadster X), ಒಬೆನ್ ರೋರ್ ಇಝಡ್ (Oben Rorr EZ) ಹಾಗೂ ಪ್ಯೂರ್ ಇಕೋಡ್ರೈಫ್ಟ್ (Pure EcoDryft) ಮಾಡೆಲ್‌ಗಳು ಪ್ರಬಲವಾದ ಎದುರಾಳಿಯಾಗಿವೆ.


Click it and Unblock the Notifications








