161 Km ರೇಂಜ್.. 1.49 ಲಕ್ಷ ರೂ.. ಕರ್ನಾಟಕದ ಈ ಗಜ ಗಾತ್ರದ ಇ-ಸ್ಕೂಟರ್ ಕುರಿತ ಪ್ರಮುಖಾಂಶಗಳು!
ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಪ್ರೈವೆಟ್ ಲಿಮಿಟೆಡ್ (River Mobility Private Limited), ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯವಾಗಿ ಇಂಡೀ (Indie) ಇ-ಸ್ಕೂಟರ್‌ನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಗ್ರಾಹಕರು ಸಹ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ನೀವು ದಿನಬಳಕೆಗಾಗಿ ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ರಿವರ್ ಇಂಡೀ' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ನೂತನ ಇ-ಸ್ಕೂಟರ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ (Price):
ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ ಸಿದ್ದಗೊಳ್ಳುವ ಹೊಸ ರಿವರ್ ಇಂಡೀ (River Indie) ಎಲೆಕ್ಟ್ರಿಕ್ ಸ್ಕೂಟರ್, ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ರೂ.1.49 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಮನೆಗೆ ತರಬಹುದು. ಅದೇ ರೀತಿಯಲ್ಲಿ ರೂ.1.58 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ.

ವಿನ್ಯಾಸ & ಬಣ್ಣಗಳು (Design & Colours):
ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಮನ ಸೆಳೆಯುವಂತಿದ್ದು, ಎಲೆಕ್ಟ್ರಿಕ್ ಸ್ಕೂಟರ್‌ಗಳ ಎಸ್‌ಯುವಿ ಎಂದೇ ಕರೆಯಲಾಗಿದೆ. ಟ್ವಿನ್-ಬೀಮ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಹಾಗೂ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಫ್ರಂಟ್ ಮೌಂಟೆಡ್ ಫುಟ್ ಪೆಗ್‌ಗಳನ್ನು ಹೊಂದಿದೆ. ಮಾನ್ಸೂನ್ ಬ್ಲೂ, ಸಮ್ಮರ್ ರೆಡ್, ಸ್ಪ್ರಿಂಗ್ ಯೆಲ್ಲೋ, ವಿಂಟರ್ ವೈಟ್ ಹಾಗೂ ಸ್ಟಾರ್ಮ್ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಸುತ್ತಳತೆ (Dimensions):
ಈ ಸ್ಕೂಟರ್ ಸಾಕಷ್ಟು ವಿಶಾಲವಾಗಿದೆ. 1,996 ಎಂಎಂ ಉದ್ದ, 765 ಎಂಎಂ ಅಗಲ ಹಾಗೂ 1130 ಎಂಎಂ ಎತ್ತರವಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,365 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 143 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ನೂತನ 'ರಿವರ್ ಇಂಡೀ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 161 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿರುವ ಪಿಎಂಎಸ್ಎಂ ಎಲೆಕ್ಟ್ರಿಕ್ ಮೋಟಾರ್, 6.7 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 26 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.
ಈ ಸ್ಕೂಟರ್ 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 3.7 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸ್ಟ್ಯಾಂಡರ್ಡ್ 750 ಡಬ್ಲ್ಯೂ ಚಾರ್ಜರ್ ಬಳಕೆಯಲ್ಲಿ 'ರಿವರ್ ಇಂಡೀ ಬ್ಯಾಟರಿಯು ಶೇಕಡ 0 ರಿಂದ 80% ಚಾರ್ಜ್ ಆಗುವುದಕ್ಕೆ ಭರ್ತಿ 5 ಗಂಟೆ ತೆಗೆದುಕೊಳ್ಳುತ್ತದೆ.

ವೈಶಿಷ್ಟ್ಯಗಳು (Features):
ಇದು ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇಕೋ, ರೈಡ್ & ರಶ್ ಎಂಬ 3 ಅತ್ಯಾಧುನಿಕವಾದ 3 ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 14-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):
ಹೊಸ 'ರಿವರ್ ಇಂಡೀ' ಇ-ಸ್ಕೂಟರ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ ಟ್ವಿನ್ ಹೈಡ್ರಾಲಿಕ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಜೊತೆಗೆ ಸಿಬಿಎಸ್ (ಕಂಬೈನ್ಡ್ - ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








