ಪೆಟ್ರೋಲ್ ಹಾಕಿಸುವ ಗೋಜಿಲ್ಲ: 265 Km ರೇಂಜ್, ರೂ.1,69,999.. ಹೊಸ ಸಿಂಪಲ್ ಒನ್ ಕುರಿತ ಪ್ರಮುಖಾಂಶಗಳು!
ಸಿಂಪಲ್ ಒನ್ (Simple One) ಪ್ರಮುಖ ಇ-ಸ್ಕೂಟರ್ ಆಗಿ ಹೊರಹೊಮ್ಮಿದೆ. ಇದಕ್ಕೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಸಿಂಪಲ್ ಒನ್' ಉತ್ತಮವಾದ ಆಯ್ಕೆಯಾಗಲಿದೆ. ಬನ್ನಿ.. ಈ ನೂತನ ಸ್ಕೂಟರ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ (Price):
ಹೊಸ 'ಸಿಂಪಲ್ ಒನ್' ಎಲೆಕ್ಟ್ರಿಕ್ ಸ್ಕೂಟರ್ ಸ್ಪರ್ಧಾತ್ಮಕ ದರದಲ್ಲೂ ಲಭ್ಯವಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.1,69,999 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ ಬ್ಯಾಟರಿ ಪ್ಯಾಕ್‌ಗೆ ಅನುಗುಣವಾಗಿ ರೂ.1,73,948 ರಿಂದ ರೂ.1,85,275 ವರೆಗೆ ಆನ್-ರೋಡ್ ದರವನ್ನು ಪಡೆದಿದೆ.

ವಿನ್ಯಾಸ & ಬಣ್ಣಗಳು (Design & Colours):
ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಪ್ರತಿಯೊಬ್ಬರ ಕಣ್ಮನ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಇಂಡಿಕೇಟರ್‌ಗಳು ಹಾಗೂ ಎಲ್ಇಡಿ ಟೈಲ್ ಲೈಟ್‌ನ್ನು ಒಳಗೊಂಡಿದೆ. ಬ್ರೇಜನ್ ಬ್ಲ್ಯಾಕ್, ಗ್ರೇಸ್ ವೈಟ್, ಅಜುರೆ ಬ್ಲೂ, ಸೋನಿಕ್ ರೆಡ್ ಮತ್ತು ಏರೋ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಸುತ್ತಳತೆ (Dimensions):
ಈ ಸ್ಕೂಟರ್ ಸಾಕಷ್ಟು ವಿಶಾಲವಾಗಿದೆ. 1,901 ಮಿ.ಮೀ ಉದ್ದ, 758 ಮಿ.ಮೀ ಅಗಲ ಮತ್ತು 1,187 ಮಿ.ಮೀ ಎತ್ತರವಿದೆ. 172 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,347 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 150 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ನೂತನ 'ಸಿಂಪಲ್ ಒನ್' ಎಲೆಕ್ಟ್ರಿಕ್ ಸ್ಕೂಟರ್ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 4.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 5.0 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 236 ರಿಂದ 265 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಇದು 115 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 2.55 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿರುವ ಬ್ಯಾಟರಿಯು ಫಾಸ್ಟ್ ಚಾರ್ಜರ್‌ನ್ನು ಉಪಯೋಗಿದಾಗ 2 ಗಂಟೆ 15 ನಿಮಿಷಗಳಲ್ಲಿ ಶೇಕಡ 0 ರಿಂದ 80% ಚಾರ್ಜ್ ಆಗಿ ಬಿಡುತ್ತದೆ.

ವೈಶಿಷ್ಟ್ಯಗಳು (Features):
ಹೊಸ 'ಸಿಂಪಲ್ ಒನ್' ಇ-ಸ್ಕೂಟರ್ 7-ಇಂಚಿನ ಟಿಎಫ್‌ಟಿ ಡಿಸ್‌ಪ್ಲೇ, ಯುಎಸ್‌ಬಿ-ಎ ಚಾರ್ಜಿಂಗ್ ಪೋರ್ಟ್ ಹಾಗೂ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇಕೋ ಎಕ್ಸ್, ಇಕೋ, ರೈಡ್, ಏರ್, ಸೋನಿಕ್ ಹಾಗೂ ಸೋನಿಕ್ ಎಕ್ಸ್ ಎಂಬ ಅತ್ಯಾಕರ್ಷಕವಾದ ರೈಡಿಂಗ್ ಮೋಡ್‌ಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 36 ಲೀಟರ್‌ನಷ್ಟು ಬೂಟ್ ಸ್ಟೋರೇಜ್‌ನ್ನು ಹೊಂದಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):
ಈ ಎಲೆಕ್ಟ್ರಿಕ್ ಸ್ಕೂಟರ್ ಸವಾರರ ರಕ್ಷಣೆಗೂ ಹೆಸರುವಾಸಿಯಾಗಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) & ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 12-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.
ಪ್ರತಿಸ್ಪರ್ಧಿ ಸ್ಕೂಟರ್‌ಗಳು (Rival Scooters):
'ಸಿಂಪಲ್ ಒನ್' ಇ-ಸ್ಕೂಟರ್‌ಗೆ ಸಾಲು - ಸಾಲು ಎದುರಾಳಿಗಳಿವೆ. ಓಲಾ ಎಸ್1 ಪ್ರೊ (Ola S1 Pro), ಎಥರ್ 450ಎಕ್ಸ್ (Ather 450X), ಟಿವಿಎಸ್ ಐಕ್ಯೂಬ್ (TVS iQube) ಹಾಗೂ ಬಜಾಜ್ ಚೇತಕ್ (Bajaj Chetak) ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








