ಸಿಂಗಲ್-ಚಾರ್ಜ್‌ನಲ್ಲಿ 190 Km ರೇಂಜ್.. 1,49,999 ರೂ.ಗೆ ಮನೆಗೆ ತರಬಹುದು.. Simple OneS ಕುರಿತ ಪ್ರಮುಖಾಂಶಗಳು!

ಸಿಂಪಲ್ ಒನ್ಎಸ್ (Simple OneS) ಪ್ರಮುಖ ಇ-ಸ್ಕೂಟರ್ ಆಗಿ ಹೊರಹೊಮ್ಮಿದೆ. ಮಧ್ಯಮ ವರ್ಗದ ಜನರಿಗೆ ಹೇಳಿ ಮಾಡಿಸಿದ ರೀತಿಯಲ್ಲಿದ್ದು, ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ನೀವು ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಸಿಂಪಲ್ ಒನ್ಎಸ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ನೂತನ ಸ್ಕೂಟರ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ (Price):

ಹೊಸ 'ಸಿಂಪಲ್ ಒನ್ಎಸ್' ಎಲೆಕ್ಟ್ರಿಕ್ ಸ್ಕೂಟರ್ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ರೂ.1,49,999 (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಸಾಮಾನ್ಯ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಬಹುದು. ಆಸಕ್ತ ಖರೀದಿದಾರರು ರೂ.1,947 ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಆರ್ಡರ್ ಬುಕ್ಕಿಂಗ್ ಮಾಡಬಹುದು.

Simple OneS Price Design Colours Range Features And All Details

ವಿನ್ಯಾಸ & ಬಣ್ಣಗಳು (Design & Colours):

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ನೋಡುಗರ ಕಣ್ಣು ಕುಕ್ಕುವಂತಿದೆ. ಶಾರ್ಪ್ ಬಾಡಿ ಪ್ಯಾನೆಲ್‌ಗಳನ್ನು ಹೊಂದಿದೆ. ಅಂಗುಲರ್ ಹೆಡ್‌ಲೈಟ್, ಸ್ಲೋಪಿಂಗ್ ಸೀಟ್ ಮತ್ತು ಟೈಲ್ ಲೈಟ್‌ನ್ನು ಪಡೆದಿದೆ. ಬ್ರೇಜನ್ ಬ್ಲ್ಯಾಕ್, ಅಜುರೆ ಬ್ಲೂ ಹಾಗೂ ಗ್ರೇಸ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಸುತ್ತಳತೆ (Dimensions):

ಈ ಎಲೆಕ್ಟ್ರಿಕ್ ಸ್ಕೂಟರ್ ಸಾಕಷ್ಟು ವಿಶಾಲವಾಗಿದೆ. 1,907 ಎಂಎಂ ಉದ್ದ, 758 ಎಂಎಂ ಅಗಲ ಹಾಗೂ 1,170 ಎಂಎಂ ಎತ್ತರವಿದೆ. 172 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,347 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 118 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):

ನೂತನ 'ಸಿಂಪಲ್ ಒನ್ಎಸ್' ಇ-ಸ್ಕೂಟರ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 3.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 190 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಈ ಸ್ಕೂಟರ್‌ನಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್, 6.4 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 52 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಇದು 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 3 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 750ಡಬ್ಲ್ಯೂ ಹೋಮ್ ಚಾರ್ಜರ್ ಬಳಕೆಯಲ್ಲಿ 4 ಗಂಟೆಯಲ್ಲಿ ಶೇಕಡ 0 ರಿಂದ 80% ಚಾರ್ಜ್ ಆಗಿ ಬಿಡುತ್ತದೆ. ಇಕೋ (Eco), ರೈಡ್ (Ride), ಡ್ಯಾಶ್ (Dash) & ಸೋನಿಕ್ (Sonic) ರೈಡಿಂಗ್ ಮೋಡ್‌ಗಳನ್ನು ಹೊಂದಿದೆ.

ವೈಶಿಷ್ಟ್ಯಗಳು (Features):

ಈ ಎಲೆಕ್ಟ್ರಿಕ್ ಸ್ಕೂಟರ್ 7-ಇಂಚಿನ ಟಚ್‌ಸ್ಕ್ರೀನ್ ಟಿಎಫ್‌ಟಿ ಡಿಸ್‌ಪ್ಲೇ, ಫೈಂಡ್ ಮೈ ವೆಹಿಕಲ್, ರಾಪಿಡ್ ಬ್ರೇಕಿಂಗ್ ಸಿಸ್ಟಮ್‌, ವೈ-ಫೈ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಪಾರ್ಕ್ ಅಸಿಸ್ಟ್ ಫಂಕ್ಷನ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. 35 ಲೀಟರ್‌ನಷ್ಟು ಅಂಡರ್ ಸೀಟ್ ಸ್ಟೋರೇಜ್‌ನ್ನು ಪಡೆದಿದೆ. ಸೀಟ್ ಎತ್ತರವು 770 ಎಂಎಂ ಇದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):

ಹೊಸ 'ಸಿಂಪಲ್ ಒನ್ಎಸ್' ಇ-ಸ್ಕೂಟರ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) & ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು ಸಾಧ್ಯವಾಗುವಂತೆ 12-ಇಂಚಿನ ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Friday, March 20, 2026, 15:53 [IST]
English summary
Simple ones price design colours range features and all details
Read more on simple energy india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+