Suzuki Access: 92,000 ರೂಪಾಯಿ.. 50 Km ಮೈಲೇಜ್.. ಹೊಸ ಸುಜುಕಿ ಆಕ್ಸೆಸ್ ABS ಕುರಿತ ಪ್ರಮುಖಾಂಶಗಳಿವು!
ಇತ್ತೀಚೆಗೆ ನೂತನ ಸುಜುಕಿ ಆಕ್ಸೆಸ್ 125 ಎಬಿಎಸ್ (Suzuki Access 125 ABS) ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ನೋಡಲು ತುಂಬಾ ಚೆನ್ನಾಗಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿದೆ. ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಆಯ್ಕೆ ಹೊಂದಿರುವ ಕಾರಣ, ಸ್ಕೂಟರ್‌ನ್ನು ಓಡಿಸುವಾಗ ಹಠಾತ್ತನೇ ಬ್ರೇಕ್ ಹಾಕಿದಾಗ, ವೀಲ್-ಲಾಕ್ ಆಗುವುದನ್ನು ತಪ್ಪಿಸುತ್ತದೆ. ಅಪಘಾತವಾಗುವ ಸಂಭವನೀಯತೆಯನ್ನು ಕಡಿಮೆಗೊಳಿಸುತ್ತದೆ. ನೀವು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ಆಕ್ಸೆಸ್ 125 ಎಬಿಎಸ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಸ್ಕೂಟರ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಾದ ಪ್ರಮುಖಾಂಶಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಹೊಸ 'ಸುಜುಕಿ ಆಕ್ಸೆಸ್ 125 ಎಬಿಎಸ್' ಅಗ್ಗದ ದರದಲ್ಲೂ ಲಭ್ಯವಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.92,000 ರಿಂದ ರೂ.93,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ರೈಡ್ ಕನೆಕ್ಟ್ ಎಬಿಎಸ್ ಎಡಿಷನ್ & ರೈಡ್ ಕನೆಕ್ಟ್ ಟಿಎಫ್‌ಟಿ ಎಬಿಎಸ್ ಎಡಿಷನ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ಇದು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು & ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. 12-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್ಗಳನ್ನು ಪಡೆದಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್, ಸಾಲಿಡ್ ಐಸ್ ಗ್ರೀನ್ ಹಾಗೂ ಪರ್ಲ್ ಶೈನಿ ಬೀಜ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಸುತ್ತಳತೆ (Dimension):
ಈ ಸ್ಕೂಟರ್ ತುಂಬಾ ವಿಶಾಲವಾಗಿದೆ. 1,835 ಎಂಎಂ ಉದ್ದ, 690 ಎಂಎಂ ಅಗಲ ಹಾಗೂ 1,155 ಎಂಎಂ ಎತ್ತರವಿದೆ. 160 ಎಂಎಂ ಗ್ರೌಂಡ್ ಕ್ಲಿಯರೆನ್ ಹಾಗೂ 1,260 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 106 ಕೆಜಿ ತೂಕವಿದೆ. ಸೀಟ್ ಎತ್ತರವು 773 ಎಂಎಂ ಇದೆ.
ಕಾರ್ಯಕ್ಷಮತೆ (Performance):
ನೂತನ 'ಸುಜುಕಿ ಆಕ್ಸೆಸ್ 125 ಎಬಿಎಸ್' ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 124 ಸಿಸಿ ಸಿಂಗಲ್ - ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8.43 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.2 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.
ಮೈಲೇಜ್ (Mileage):
ಇದು ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. 1 ಲೀಟರ್ ಹಾಕಿಸಿದರೆ 45 ರಿಂದ 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5-ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಒಮ್ಮೆ ಪೂರ್ತಿಯಾಗಿ ತುಂಬಿಸಿದರೆ, 225 ರಿಂದ 250 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.
ವೈಶಿಷ್ಟ್ಯಗಳು (Features):
ಈ ಸ್ಕೂಟರ್ 4.2-ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಹಾಗೂ ಸ್ಮಾರ್ಟ್‌ಫೋನ್‌ಗಳನ್ನು ಸುಲಭವಾಗಿ ಚಾರ್ಜ್ ಮಾಡಲು ಸಾಧ್ಯವಾಗುವಂತೆ ಇಂಟಿಗ್ರೇಟೆಡ್ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 90 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 6.93 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):
ಹೊಸ 'ಸುಜುಕಿ ಆಕ್ಸೆಸ್ 125 ಎಬಿಎಸ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಸಿಂಗಲ್-ಚಾನೆಲ್ ಎಬಿಎಸ್‌ನೊಂದಿಗೆ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಹಾಗೂ ಹಿಂಭಾಗ (ರೇರ್) ಸಿಂಗಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಇದರೊಂದಿಗೆ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಪ್ರತಿಸ್ಪರ್ಧಿ ಸ್ಕೂಟರ್‌ಗಳು (Rival Scooters):
ಇದಕ್ಕೆ ಸಾಲು - ಸಾಲು ಪ್ರತಿಸ್ಪರ್ಧಿಗಳಿವೆ. ಹೀರೋ ಜೂಮ್ 160 (Hero Xoom 160), ಟಿವಿಎಸ್ ಎನ್‌ಟಾರ್ಕ್ 150 (TVS Ntorq 150) ಹಾಗೂ ಯಮಹಾ ಏರೋಕ್ಸ್ 155 (Yamaha Aerox 155) ಮಾಡೆಲ್‌ಗಳು ನೇರವಾದ ಎದುರಾಳಿಯಾಗಿವೆ.


Click it and Unblock the Notifications








