ಸುಜುಕಿ ಆಕ್ಸೆಸ್ 125 ಎಬಿಎಸ್ Vs ಟಿವಿಎಸ್ ಎನ್‌ಟಾರ್ಕ್ 150 ಎಬಿಎಸ್: ಜಬರ್ದಸ್ತ್ ಸೇಫ್ಟಿ ಸ್ಕೂಟರ್‌ಗಳಿವು.. ಯಾವುದು ಬೆಸ್ಟ್?

ನಿನ್ನೆ ಜನಪ್ರಿಯ ಸುಜುಕಿ ಆಕ್ಸೆಸ್ 125 ಎಬಿಎಸ್ (Suzuki access 125 ABS) ಸ್ಕೂಟರ್ ಬಿಡುಗಡೆಗೊಂಡಿದೆ. ಇದಕ್ಕೆ ಟಿವಿಎಸ್ ಎನ್‌ಟಾರ್ಕ್ 150 ಎಬಿಎಸ್ (TVS Ntorq 150 ABS) ನೇರವಾದ ಎದುರಾಳಿಯಾಗಿದೆ. ಈ ಸ್ಕೂಟರ್‌ಗಳು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿವೆ. ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಎಂಬುದು ಸುರಕ್ಷತಾ ವೈಶಿಷ್ಟ್ಯವಾಗಿದ್ದು, ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಲಿದೆ. ಹಠಾತ್ತನೆ ಬ್ರೇಕ್ ಹಾಕಿದಾಗ ವೀಲ್ ಲಾಕ್ ಆಗುವುದನ್ನು ತಪ್ಪಿಸುತ್ತದೆ. ಈ ಮೂಲಕ ಅಪಘಾತವಾಗುವ ಸಾಧ್ಯತೆಯನ್ನು ಕಡಿಮೆಗೊಳಿಸುತ್ತದೆ. ನಾವಿಲ್ಲಿ ಇವೆರೆಡು ಸ್ಕೂಟರ್‌ಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಬೆಲೆ & (Price):

ನೂತನ 'ಸುಜುಕಿ ಆಕ್ಸೆಸ್ 125 ಎಬಿಎಸ್' ರೂ.92,328 ರಿಂದ ರೂ.93,378 ದರವನ್ನು ಪಡೆದಿದೆ. 'ಟಿವಿಎಸ್ ಎನ್‌ಟಾರ್ಕ್ 150 ಎಬಿಎಸ್' ರೂ.1.09 ಲಕ್ಷದಿಂದ ರೂ.1.18 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರದ ವಿಚಾರದಲ್ಲಿ 'ಎನ್‌ಟಾರ್ಕ್ 150'ಗೆ ಹೋಲಿಕೆ ಮಾಡಿದರೆ, 'ಆಕ್ಸೆಸ್ 125' ಸ್ವಲ್ಪ ಮಟ್ಟಿಗೆ ಅಗ್ಗವಾಗಿದೆ.

Suzuki access 125 ABS Vs TVS Ntorq 150 ABS Which Scooter Best Details

ವಿನ್ಯಾಸ (Design):

ಈ ಸ್ಕೂಟರ್‌ಗಳು ಒಂದಕ್ಕಿಂತ ಒಂದು ಅದ್ಭುತವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿವೆ. 'ಸುಜುಕಿ ಆಕ್ಸೆಸ್ ಎಬಿಎಸ್' ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್ ಮತ್ತು ಪರ್ಲ್ ಶೈನಿ ಬೀಜ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 160 ಮಿ.ಮೀ ಗ್ರೌಂಡ್ ಕ್ಲಿಯರೆನ್ ಹಾಗೂ 1,260 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

'ಟಿವಿಎಸ್ ಎನ್‌ಟಾರ್ಕ್ ಎಬಿಎಸ್' ಎಲ್‌ಇಡಿ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟರ್ನ್ ಇಂಡಿಕೇಟರ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಸ್ಟೆಲ್ತ್ ಸಿಲ್ವರ್, ರೇಸಿಂಗ್ ರೆಡ್, ಟರ್ಬೊ ಬ್ಲೂ ಮತ್ತು ನೈಟ್ರೋ ಗ್ರೀನ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 155 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1,285 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Suzuki access 125 ABS Vs TVS Ntorq 150 ABS Which Scooter Best Details

ಕಾರ್ಯಕ್ಷಮತೆ (Performance):

ಇವೆರೆಡು ಸ್ಕೂಟರ್‌ಗಳು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿವೆ. 'ಆಕ್ಸೆಸ್ ಎಬಿಎಸ್' 124-ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 45 ರಿಂದ 64 ಕಿಲೋಮೀಟರ್‌ವರೆಗೆ ಮೈಲೇಜ್‌ ಕೊಡುತ್ತದೆ. 90 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 6.93 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

'ಎನ್‌ಟಾರ್ಕ್ ಎಬಿಎಸ್' 149.7-ಸಿಸಿ ಸಿಂಗಲ್ ಸಿಲಿಂಡರ್, ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 40 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 104 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 6.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ವೈಶಿಷ್ಟ್ಯಗಳು (Features):

ಈ ಸ್ಕೂಟರ್‌ಗಳು ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿವೆ. 'ಸುಜುಕಿ ಆಕ್ಸೆಸ್ 125 ಎಬಿಎಸ್' 4.2-ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನ್ನು ಹೊಂದಿದೆ. 12-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್​ಗಳನ್ನು ತನ್ನದಾಗಿಸಿಕೊಂಡಿದೆ. ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ ಸಿಂಗಲ್-ಚಾನೆಲ್ ಎಬಿಎಸ್ ಹಾಗೂ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

'ಟಿವಿಎಸ್ ಎನ್‌ಟಾರ್ಕ್ 150 ಎಬಿಎಸ್' ಫುಲ್ ಟಿಎಫ್‌ಟಿ ಡಿಸ್‌ಪ್ಲೇ, ಟ್ರಾಕ್ಷನ್ ಕಂಟ್ರೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 12-ಇಂಚಿನ ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಸಿಂಗಲ್-ಚಾನೆಲ್ ಎಬಿಎಸ್ ಹಾಗೂ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Thursday, February 5, 2026, 8:30 [IST]
English summary
Suzuki access 125 abs vs tvs ntorq 150 abs which scooter best details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+