ಆಕ್ಟಿವಾ & ಜುಪಿಟರ್ ಪ್ರತಿಸ್ಪರ್ಧಿಯಿದು: ತಾಕತ್ತು ಪ್ರದರ್ಶಿಸಿದ ಸುಜುಕಿ ಸ್ಕೂಟರ್.. 81,000 ರೂಪಾಯಿ.. 64 Km ಮೈಲೇಜ್!

ಸುಜುಕಿ ಆಕ್ಸೆಸ್ 125 (Suzuki Access 125) ಜನಮೆಚ್ಚಿದ ಸ್ಕೂಟರ್ ಎಂದೇ ಮನೆ ಮಾತಾಗಿದೆ. ಇದಕ್ಕೆ ಹೋಂಡಾ ಆಕ್ಟಿವಾ ಹಾಗೂ ಟಿವಿಎಸ್ ಜುಪಿಟರ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ. ಆದರೂ ಈ ಸ್ಕೂಟರ್‌ಗೆ ದೊಡ್ಡ ಮಟ್ಟದಲ್ಲಿ ಬೇಡಿಕೆಯಿದೆ. ಕಳೆದ ತಿಂಗಳು (ಡಿಸೆಂಬರ್-2025) ಸಹ 'ಆಕ್ಸೆಸ್ 125' ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. 69,622 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 52,180 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 33.43% ಪ್ರಗತಿಯಾಗಿದೆ.

ನೂತನ 'ಸುಜುಕಿ ಆಕ್ಸೆಸ್' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಇದು ದಿನಬಳಕೆಗೆ ಪರ್ಫೆಕ್ಟ್ ಆಗಿದೆ. ಮಹಿಳೆ ಹಾಗೂ ಪುರುಷರು ಸುಲಭವಾಗಿ ಬಳಕೆ ಮಾಡಬಹುದು. ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ಹೀಗಾಗಿ 'ಆಕ್ಸೆಸ್' ಮಾರಾಟ ಸಂಖ್ಯೆ ಹೆಚ್ಚಳಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

Suzuki Access 125 December 2025 Sales Report

ಈ ಸ್ಕೂಟರ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುತ್ತದೆ. ಕನಿಷ್ಠ ರೂ.81,009 ಹಾಗೂ ಗರಿಷ್ಠ ರೂ.97,202 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್ ಎಡಿಷನ್, ಸ್ಪೆಷಲ್ ಎಡಿಷನ್ ಡಿಸ್ಕ್ ಬ್ರೇಕ್, ರೈಡ್ ಕನೆಕ್ಟ್ ಎಡಿಷನ್ ಮತ್ತು ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಶೈನಿ ಬೀಜ್ ಹಾಗೂ ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. ಹೆಚ್ಚು ವಿಶಾಲ ಗಾತ್ರದಲ್ಲಿದ್ದು, 160 ಎಂಎಂ ಗ್ರೌಂಡ್ ಕ್ಲಿಯರೆನ್ & 1,260 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Suzuki Access 125 December 2025 Sales Report

ಹೊಸ 'ಸುಜುಕಿ ಆಕ್ಸೆಸ್' ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 124-ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 6,500 ಆರ್‌ಪಿಎಂನಲ್ಲಿ 8.3 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5,000 ಆರ್‌ಪಿಎಂನಲ್ಲಿ 10.2 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 45 ರಿಂದ 64 ಕಿಲೋಮೀಟರ್‌ವರೆಗೂ ಮೈಲೇಜ್‌ನ್ನು ನೀಡುತ್ತದೆ.

ಈ ಸ್ಕೂಟರ್ ಪುಟ್ಟದಾದ 4.2-ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. 90 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 6.93 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಬರೋಬ್ಬರಿ 106 ಕೆಜಿ ತೂಕವಿದೆ.

Suzuki Access 125 December 2025 Sales Report

ಇದು ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ ಮುಂದೆ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂದೆ (ರೇರ್) ಸಿಂಗಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 12-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್​ಗಳನ್ನು ಹೊಂದಿದೆ.

ಸುಜುಕಿ ಇ ಆಕ್ಸೆಸ್ (Suzuki e Access) ಕೂಡ ಖರೀದಿಗೆ ಲಭ್ಯ:

ಈ ಎಲೆಕ್ಟ್ರಿಕ್ ಸ್ಕೂಟರ್‌ ರೂ.1.88 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲಾರ್ ಬ್ಲೂ ಮತ್ತು ಮೆಟಾಲಿಕ್ ಮ್ಯಾಟ್ ಫೈಬ್ರೊಯಿನ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 3.07 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 95 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Tuesday, January 27, 2026, 18:00 [IST]
English summary
Suzuki access 125 december 2025 sales report
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+