ಸದ್ದಿಲ್ಲದೇ ಬಿಡುಗಡೆಗೊಂಡ ಸುಜುಕಿ ಆಕ್ಸೆಸ್ ಇ-ಸ್ಕೂಟರ್‌ಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಗ್ರಾಹಕರು.. 95 Km ಮೈಲೇಜ್!
ಇದೇ ಜನವರಿ 9 ರಂದು ಹೊಚ್ಚ ಹೊಸ ಸುಜುಕಿ ಇ ಆಕ್ಸೆಸ್ (Suzuki e Access) ಎಲೆಕ್ಟ್ರಿಕ್ ಸ್ಕೂಟರ್‌ನ್ನು ಬಿಡುಗಡೆಗೊಳಿಸಲಾಯಿತು. ಇದು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಸದ್ದಿಲ್ಲದೇ ಈ ಸ್ಕೂಟರ್‌ನ ವಿತರಣೆಯನ್ನು ಶುರು ಮಾಡಲಾಗಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಜನವರಿ - 2026) ಸರಿ ಸುಮಾರು 201 ಯುನಿಟ್ 'ಸುಜುಕಿ ಇ ಆಕ್ಸೆಸ್' ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ. ಇದೇ ಅವಧಿಯಲ್ಲಿ ಕಂಪನಿಯು 703 ಯುನಿಟ್‌ಗಳನ್ನು ಶೋರೂಂಗೆ ತಲುಪಿಸಿದೆ. ಒಟ್ಟು 877 ಯುನಿಟ್‌ಗಳನ್ನು ತಯಾರಿಸಲಾಗಿದೆ.

'ಸುಜುಕಿ ಇ ಆಕ್ಸೆಸ್' ವಿಶೇಷತೆಗಳೇನು:
ಇದು ರೂ.1.88 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.2 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಈ ಸ್ಕೂಟರ್‌ಗೆ ಬಜಾಜ್ ಚೇತಕ್, ಎಥರ್ ರಿಜ್ಟಾ ಮತ್ತು ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಪ್ರಬಲವಾದ ಎದುರಾಳಿಯಾಗಿವೆ.
ನೂತನ 'ಸುಜುಕಿ ಇ ಆಕ್ಸೆಸ್' ಎಲೆಕ್ಟ್ರಿಕ್ ಸ್ಕೂಟರ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಚೆನ್ನಾಗಿರುವ ಎಲ್‌ಇಡಿ ಹೆಡ್‌ಲೈಟ್, ಎಲ್‌ಇಡಿ ಇಂಡಿಕೇಟರ್‌ಗಳು ಹಾಗೂ ಟೈಲ್‌ಲೈಟ್‌ಗಳನ್ನು ಪಡೆದಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಜೇಡ್ ಗ್ರೀನ್ ಹಾಗೂ ಪರ್ಲ್ ಗ್ರೇಸ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಸ್ಕೂಟರ್ ಬಹಳಷ್ಟು ವಿಶಾಲವಾಗಿದೆ. 1,860 ಎಂಎಂ ಉದ್ದ, 715 ಎಂಎಂ ಅಗಲ ಮತ್ತು 1,135 ಎಂಎಂ ಎತ್ತರವಿದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,305 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 122 ಕೆಜಿ ತೂಕವಿದೆ.
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 3.07 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 95 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಈ ಸ್ಕೂಟರ್‌ನಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 4.1 ಕೆಡಬ್ಲ್ಯೂ ಅಶ್ವ ಶಕ್ತಿ ಹಾಗೂ 15 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಹೊಸ 'ಇ ಆಕ್ಸೆಸ್' 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಇದರಲ್ಲಿರುವ ಬ್ಯಾಟರಿ ಪ್ಯಾಕ್ ಡಿಸಿ ಫಾಸ್ಟ್ ಚಾರ್ಜರ್ ಉಪಯೋಗ ಮಾಡಿದಾಗ, 2 ಗಂಟೆ 12 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಆಗಿ ಬಿಡುತ್ತದೆ. ಇಕೋ, ರೈಡ್ ಎ & ರೈಡ್ ಬಿ ಎಂಬ ಎರಡು ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. 4.2-ಇಂಚಿನ ಟಿಎಫ್‌ಟಿ ಡಿಸ್‌ಪ್ಲೇ, ರಿಮೋಟ್ ಸ್ಟಾರ್ಟ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಸುಜುಕಿ ರೈಡ್ ಕನೆಕ್ಟ್ ಆಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಈ ಸ್ಕೂಟರ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಕಾಯಿಲ್-ಸ್ಪ್ರಿಂಗ್ ಆಯಿಲ್ ಡ್ಯಾಂಪ್ಡ್ ಮತ್ತು ಹಿಂಭಾಗ (ರೇರ್) ಸ್ವಿಂಗರ್ಮ್ ಟೈಪ್ ಕಾಯಿಲ್-ಸ್ಪ್ರಿಂಗ್ ಆಯಿಲ್ ಡ್ಯಾಂಪ್ಡ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 12-ಡುಯಲ್ ಟೋನ್ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ತನ್ನದಾಗಿಸಿಕೊಂಡಿದೆ.
ಒಟ್ಟಾರೆಯಾಗಿ, ಈ ಜನವರಿಯಲ್ಲಿ 'ಸುಜುಕಿ ಇ ಆಕ್ಸೆಸ್' ಎಲೆಕ್ಟ್ರಿಕ್ ಸ್ಕೂಟರ್ ಒಳ್ಳೆಯ ಸಂಖ್ಯೆಯೇ ಮಾರಾಟಗೊಂಡಿದೆ. ಇದೇ ಫೆಬ್ರವರಿಯಲ್ಲಿಯೂ ಅತ್ಯಧಿಕ ಸಂಖ್ಯೆಯಲ್ಲಿ ಬಿಕರಿಯಾಗುವ ನಿರೀಕ್ಷೆಯಿದ್ದು, ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications








