Suzuki: ಸದ್ದಿಲ್ಲದೇ ಹೊಸ ಸುಜುಕಿ ಆಕ್ಸೆಸ್ ಇ-ಸ್ಕೂಟರ್ ಬಿಡುಗಡೆ.. ನಂ.1 ಆಗುತ್ತಾ.. ಬೆಲೆ ಎಷ್ಟು, ವಿಶೇಷತೆಗಳೇನು?
ಬಹುನಿರೀಕ್ಷಿತ ಸುಜುಕಿ ಇ ಆಕ್ಸೆಸ್ (Suzuki e Access) ಎಲೆಕ್ಟ್ರಿಕ್ ಸ್ಕೂಟರ್ ಶುಕ್ರವಾರ ಬಿಡುಗಡೆಗೊಂಡಿದೆ. ಇದರ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದರು. ಈ ಸ್ಕೂಟರ್ ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಹೊಸತಗಳಿಗೂ ಸಾಕ್ಷಿಯಾಗಿದೆ. ಬನ್ನಿ, ಹೊಚ್ಚ ಹೊಸ 'ಇ ಆಕ್ಸೆಸ್'ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ನೂತನ 'ಸುಜುಕಿ ಇ ಆಕ್ಸೆಸ್' ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ರೂ.1.88 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಕಂಪನಿಯು ಬುಕ್ಕಿಂಗ್‌ನ್ನು ತೆರೆದಿದೆ. ಆಸಕ್ತ ಗ್ರಾಹಕರು ಸಮೀಪದ ಡೀಲರ್‌ಶಿಪ್ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ನೀಡಿ, ಆರ್ಡರ್ ಮಾಡಬಹುದು.

ಹೊಸ 'ಸುಜುಕಿ ಇ ಆಕ್ಸೆಸ್' ಸ್ಕೂಟರ್‌ನ್ನು ದೇಶಾದ್ಯಂತ ಎಲ್ಲ 1,200 ಶೋರೂಂಗಳಲ್ಲಿ ಮಾರಾಟಗೊಳಿಸಲು ಕಂಪನಿಯು ನಿರ್ಧರಿಸಿದೆ. ವಿಶೇಷವಾಗಿ ಈ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ 240ಕ್ಕೂ ಹೆಚ್ಚು ಸ್ಥಳಗಳಲ್ಲಿ ಡಿಸಿ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಿದೆ.
ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್‌ಇಡಿ ಹೆಡ್‌ಲೈಟ್, ಎಲ್‌ಇಡಿ ಇಂಡಿಕೇಟರ್‌ಗಳು, ಟೈಲ್‌ಲೈಟ್, ಡುಯಲ್-ಟೋನ್ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. ನವೀನವಾದ ಮೆಟಾಲಿಕ್ ಮ್ಯಾಟ್ ಸ್ಟೆಲ್ಲಾರ್ ಬ್ಲೂ ಮತ್ತು ಮೆಟಾಲಿಕ್ ಮ್ಯಾಟ್ ಫೈಬ್ರೊಯಿನ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚು ವಿಶಾಲವಾಗಿದೆ. 1,860 ಮಿ.ಮೀ ಉದ್ದ, 715 ಮಿ.ಮೀ ಅಗಲ ಹಾಗೂ 1,135 ಮಿ.ಮೀ ಎತ್ತರವಿದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,305 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 122 ಕೆಜಿ ತೂಕವಿದೆ.
ನೂತನ 'ಸುಜುಕಿ ಇ ಆಕ್ಸೆಸ್' ಸ್ಕೂಟರ್ ಬೆಲೆಗೆ ತಕ್ಕಂತೆ ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 3.07 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 95 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 4.1 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 15 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಇದು 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಈ ಸ್ಕೂಟರ್‌ನಲ್ಲಿರುವ ಬ್ಯಾಟರಿ ಪ್ಯಾಕ್ ಪೋರ್ಟಬಲ್ ಚಾರ್ಜರ್ ಬಳಕೆಯಲ್ಲಿ ಶೇಕಡ 0 ರಿಂದ 100% ಚಾರ್ಜ್ ಆಗಲು 6 ಗಂಟೆ 20 ನಿಮಿಷ ತೆಗೆದುಕೊಳ್ಳುತ್ತದೆ. ಅದೇ ರೀತಿಯಲ್ಲಿ ಡಿಸಿ ಫಾಸ್ಟ್ ಚಾರ್ಜರ್ ಉಪಯೋಗ ಮಾಡಿದಾಗ 2 ಗಂಟೆ 12 ನಿಮಿಷಗಳು ಸಾಕಾಗುತ್ತದೆ.
ಈ ಸ್ಕೂಟರ್ ದೊಡ್ಡ ಗಾತ್ರದ 4.2 ಇಂಚಿನ ಟಿಎಫ್‌ಟಿ ಡಿಸ್‌ಪ್ಲೇ, ರಿಮೋಟ್ ಸ್ಟಾರ್ಟ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ & ಸುಜುಕಿ ರೈಡ್ ಕನೆಕ್ಟ್ ಆಪ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಇಕೋ, ರೈಡ್ ಎ ಹಾಗೂ ರೈಡ್ ಬಿ ಎಂಬ ಎರಡು ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.
ಹೊಸ 'ಸುಜುಕಿ ಇ ಆಕ್ಸೆಸ್' ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಕಾಯಿಲ್-ಸ್ಪ್ರಿಂಗ್ ಆಯಿಲ್ ಡ್ಯಾಂಪ್ಡ್ ಹಾಗೂ ಹಿಂಭಾಗ (ರೇರ್) ಸ್ವಿಂಗರ್ಮ್ ಟೈಪ್ ಕಾಯಿಲ್-ಸ್ಪ್ರಿಂಗ್ ಆಯಿಲ್ ಡ್ಯಾಂಪ್ಡ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಬಜಾಜ್ ಚೇತಕ್ (Bajaj Chetak), ಎಥರ್ ರಿಜ್ಟಾ (Ather Rizta) ಹಾಗೂ ಟಿವಿಎಸ್ ಐಕ್ಯೂಬ್ (TVS iQube) ಎಲೆಕ್ಟ್ರಿಕ್ ಸ್ಕೂಟರ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








