ಬೆಂಗಳೂರಿಗೂ ಸೈ.. ಹುಬ್ಬಳ್ಳಿಗೂ ಜೈ.. 100 Km ಮೈಲೇಜ್.. ಬೆಲೆ ಇಷ್ಟೇನಾ.. ಆಫೀಸ್‌ಗೆ ಹೋಗುವವರಿಗೆ ಬೆಸ್ಟ್ ಬೈಕ್‌ಗಳಿವು!

ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಮಂಗಳೂರು ಹಾಗೂ ಬೆಳಗಾವಿಯಂತಹ ನಗರಗಳಲ್ಲಿ ಆಫೀಸ್‌ ಕೆಲಸಕ್ಕೆ ಹೋಗುವವರಿಗೆ ಬೈಕ್‌ಗಳು ತೀರಾ ಅನಿವಾರ್ಯವಾಗಿವೆ. ನೀವು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಬಜಾಜ್ ಫ್ರೀಡಂ 125, ಹೋಂಡಾ ಶೈನ್ 125 ಹಾಗೂ ಹೋಂಡಾ ಎಸ್‌ಪಿ 125ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಈ ಬೈಕ್‌ಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಬಜಾಜ್ ಫ್ರೀಡಂ 125 (Bajaj Freedom 125):

ಇದು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದ್ದು, ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ರೂ.89,997 ಹಾಗೂ ಗರಿಷ್ಠ ರೂ.1.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ರೇಸಿಂಗ್ ರೆಡ್, ಸೈಬರ್ ವೈಟ್, ಎಬೊನಿ ಬ್ಯ್ಲಾಕ್, ಪ್ಯೂಟರ್ ಗ್ರೇ ಮತ್ತು ಕೆರಿಬಿಯನ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,340 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

Top 3 Best 125 CC Bikes Bajaj Freedom Honda Shine And Honda SP

ನೂತನ 'ಫ್ರೀಡಂ' 124.58 ಸಿಸಿ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ಮೋಡ್‌ನಲ್ಲಿ 130 ಕಿಲೋಮೀಟರ್ ಮತ್ತು ಸಿಎನ್‌ಜಿ ಮೋಡ್‌ನಲ್ಲಿ 200 ಕಿಲೋಮೀಟರ್ ಮೈಲೇಜ್ ಕೊಡುತ್ತದೆ. ಸರಿ ಸುಮಾರು 330 ಕಿಲೋಮೀಟರ್‌ವರೆಗೆ ಓಡಬಲ್ಲದು. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 7.85 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಬೈಕ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಡಿಸ್‌ಪ್ಲೇ, ಮೊಬೈಲ್ ಚಾರ್ಜಿಂಗ್ ಪೋರ್ಟ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

Top 3 Best 125 CC Bikes Bajaj Freedom Honda Shine And Honda SP

ಹೋಂಡಾ ಶೈನ್ 125 (Honda Shine 125):

ಇದೊಂದು ಜನಮೆಚ್ಚಿದ ಮೋಟಾರ್‌ಸೈಕಲ್‌ ಎಂದೇ ಹೆಸರುವಾಸಿಯಾಗಿದೆ. ರೂ.80,852 ರಿಂದ 85,211 ದರವನ್ನು ಹೊಂದಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಡೀಸೆಂಟ್ ಬ್ಲೂ ಮೆಟಾಲಿಕ್ & ಜೀನಿ ಗ್ರೇ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,285 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಶೈನ್' 123.94 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 50 ರಿಂದ 60 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 102 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 7 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Top 3 Best 125 CC Bikes Bajaj Freedom Honda Shine And Honda SP

ಈ ಬೈಕ್ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ನಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆಯಲಿದೆ. ಪ್ರಯಾಣಿಕರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ & ಹಿಂಭಾಗ (ರೇರ್) ಡುಯಲ್ ರೇರ್ ಸ್ಪ್ರಿಂಗ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಎಸ್‌ಪಿ 125 (Honda SP 125):

ಇದು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ದೊರೆಯುತ್ತದೆ. ರೂ.87,653 ರಿಂದ ರೂ.92,571 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಮತ್ತು ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 1,285 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಈ ಮೋಟಾರ್‌ಸೈಕಲ್‌, 123.94 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 100 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 7.5 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ 'ಹೋಂಡಾ ಎಸ್‌ಪಿ' ಬೈಕ್ ಫುಲ್ ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸೈಲೆಂಟ್ ಸ್ಟಾರ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್-ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Friday, February 20, 2026, 22:39 [IST]
English summary
Top 3 best 125 cc bikes bajaj freedom honda shine and honda sp
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+