60 Km ಮೈಲೇಜ್.. ರೂ.86,211.. ಹೊಸ 'ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್'ಗೆ 3 ಪರ್ಯಾಯ ಬೈಕ್‌ಗಳಿವು.. ಬೆಲೆ ಎಷ್ಟು?

ಇತ್ತೀಚೆಗೆ ಬಹುನಿರೀಕ್ಷಿತ ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್ (Honda Shine 125 Limited Edition) ಬೈಕ್‌ನ್ನು ಬಿಡುಗಡೆಗೊಳಿಸಲಾಗಿದೆ. ಇದು ರೂ.86,211 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. 'ಪರ್ಲ್ ಸೈರನ್ ಬ್ಲೂ' ಎಂಬ ಬಣ್ಣದೊಂದಿಗೂ ಲಭ್ಯವಿದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,285 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 113 ಕೆಜಿ ತೂಕವಿದೆ.

ಈ ಮೋಟಾರ್‌ಸೈಕಲ್‌ 123.94-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 50 ರಿಂದ 60 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್ ಆಫ್ ಹಾಗೂ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಸಿಬಿಎಸ್ (ಕಾಂಬಿ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Top 3 Best Alternative Bike For Honda Shine 125 Limited Edition Pulsar Glamour And Raider

ನೀವು ಇದೇ 'ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್'ಗೆ ಬದಲಾಗಿ ಈ 3 ಬೈಕ್‌ಗಳಾದ ಬಜಾಜ್ ಪಲ್ಸರ್ 125, ಹೀರೋ ಗ್ಲಾಮರ್ ಹಾಗೂ ಟಿವಿಎಸ್ ರೈಡರ್ 125ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಬಜಾಜ್ ಪಲ್ಸರ್ 125 (Bajaj Pulsar 125):

ಇದೊಂದು ಜನಪ್ರಿಯ ಮೋಟಾರ್‌ಸೈಕಲ್‌ ಆಗಿದ್ದು, 'ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.89,910 ರಿಂದ ರೂ.92,046 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಬ್ಲ್ಯಾಕ್ ಗ್ರೇ, ಬ್ಲ್ಯಾಕ್ ರೇಸಿಂಗ್ ರೆಡ್ ಹಾಗೂ ರೇಸಿಂಗ್ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1,320 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 146 ಕೆಜಿ ತೂಕವಿದೆ.

Top 3 Best Alternative Bike For Honda Shine 125 Limited Edition Pulsar Glamour And Raider

ಹೊಸ 'ಪಲ್ಸರ್' 124.4-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ ಹಾಗೂ ಬ್ಲೂಟೂತ್ ಕನೆಕ್ಟಿವಿಟಿಯಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೀರೋ ಗ್ಲಾಮರ್ (Hero Glamour):

ಈ ಬೈಕ್‌ನ್ನು 'ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್'ಗೆ ಬದಲಾಗಿ ಮನೆಗೆ ತರಬಹುದು. ರೂ.82,398 ರಿಂದ ರೂ.86,085 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಬ್ಲ್ಯಾಕ್ ಮೆಟಾಲಿಕ್ ಸಿಲ್ವರ್, ಕ್ಯಾಂಡಿ ಬ್ಲೇಜಿಂಗ್ ರೆಡ್ ಹಾಗೂ ಬ್ಲ್ಯಾಕ್ ಸ್ಪೋರ್ಟ್ಸ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1,267 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 121 ಕೆಜಿ ತೂಕವಿದೆ.

Top 3 Best Alternative Bike For Honda Shine 125 Limited Edition Pulsar Glamour And Raider

ನೂತನ 'ಗ್ಲಾಮರ್' 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಟಿವಿಎಸ್ ರೈಡರ್ 125 (TVS Raider 125):

ಇದು ಪ್ರಖ್ಯಾತ ಮೋಟಾರ್‌ಸೈಕಲ್‌ ಆಗಿದೆ. 'ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್'ಗೆ ಪರ್ಯಾಯವಾಗಿ ಖರೀದಿಸಬಹುದು. ರೂ.84,490 ರಿಂದ ರೂ.97,719 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ವಿಕೆಡ್ ಬ್ಲ್ಯಾಕ್, ಸ್ಟ್ರೈಕಿಂಗ್ ರೆಡ್, ಫಿಯರಿ ಯೆಲ್ಲೋ ಮತ್ತು ಬ್ಲೇಜಿಂಗ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,326 ಮಿ.ಮೀ ವೀಲ್‌ಬೇಸ್‌ನ್ನು ತನ್ನದಾಗಿಸಿಕೊಂಡಿದೆ. ಬರೋಬ್ಬರಿ 123 ಕೆಜಿ ತೂಕವಿದೆ.

Top 3 Best Alternative Bike For Honda Shine 125 Limited Edition Pulsar Glamour And Raider

ಹೊಸ 'ರೈಡರ್' 124.8-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 67 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಟರ್ನ್-ಬೈ-ಟರ್ನ್ ನಾವಿಗೇಷನ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Saturday, February 7, 2026, 16:40 [IST]
English summary
Top 3 best alternative bike for honda shine 125 limited edition pulsar glamour and raider
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+