ಪ್ರಖ್ಯಾತ ಟಿವಿಎಸ್ ಜುಪಿಟರ್‌ಗೆ 5 ಬದಲಿ ಸ್ಕೂಟರ್‌ಗಳಿವು.. 83,500 ರೂಪಾಯಿ.. 50 Km ಮೈಲೇಜ್!
ಟಿವಿಎಸ್ ಜುಪಿಟರ್ 125 (TVS Jupiter 125) ಜನಮೆಚ್ಚಿದ ಸ್ಕೂಟರ್ ಆಗಿದೆ. ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ರೂ. 83,500 ರಿಂದ ರೂ.92,460 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಐವರಿ ಬ್ರೌನ್, ಇಂಡಿಬ್ಲೂ, ಟೈಟಾನಿಯಂ ಗ್ರೇ, ಪ್ರಿಸ್ಟೈನ್ ವೈಟ್, ಡಾನ್ ಆರೆಂಜ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್, ಎಲೈಟ್ ಗ್ರೀನ್ ಮತ್ತು ಮ್ಯಾಟ್ ಕಾಪರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಸಾಕಷ್ಟು ವಿಶಾಲವಾಗಿದ್ದು, 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,275 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ಈ ಸ್ಕೂಟರ್ 124.8 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಐಗೋ ಅಸಿಸ್ಟ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಹಾಗೂ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ನೀವು ಇದೇ 'ಟಿವಿಎಸ್ ಜುಪಿಟರ್ 125'ಗೆ ಪರ್ಯಾಯವಾಗಿ ಈ 5 ಸ್ಕೂಟರ್‌ಗಳಾದ ಹೋಂಡಾ ಆಕ್ಟಿವಾ, ಹೀರೋ ಜೂಮ್, ಸುಜುಕಿ ಆಕ್ಸೆಸ್, ಹೀರೋ ಡೆಸ್ಟಿನಿ ಹಾಗೂ ಟಿವಿಎಸ್ ಟಾರ್ಕ್‌ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಹೋಂಡಾ ಆಕ್ಟಿವಾ 125 (Honda Activa 125):
ಇದು ಪ್ರಮುಖ ಸ್ಕೂಟರ್ ಆಗಿದ್ದು, ಖರೀದಿದಾರರು ಮೆಚ್ಚಿಕೊಂಡಿದ್ದಾರೆ. ರೂ.89,652 ರಿಂದ ರೂ.94,096 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 123.92 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 47 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಟಿಎಫ್‌ಟಿ ಕನ್ಸೋಲ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್ ಮತ್ತು ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೀರೋ ಜೂಮ್ 125 (Hero Xoom 125):
ಈ ಸ್ಕೂಟರ್ ರೂ.80,494 ರಿಂದ ರೂ.86,025 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124.6 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 52 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಹಾಗೂ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಸುಜುಕಿ ಆಕ್ಸೆಸ್ 125 (Suzuki Access 125):
ಇದೊಂದು ಜನಪ್ರಿಯ ಸ್ಕೂಟರ್ ಆಗಿ ಹೊರಹೊಮ್ಮಿದೆ. ರೂ.81,508 ರಿಂದ 97,202 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 45 ರಿಂದ 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್ ಹಾಗೂ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೀರೋ ಡೆಸ್ಟಿನಿ 125 (Hero Destini 125):
ಈ ಸ್ಕೂಟರ್ ರೂ.75,838 ರಿಂದ ರೂ. 84,919 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 53 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಡಿಜಿಟಲ್ ಡಿಸ್‌ಪ್ಲೇ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಯ ಸಲುವಾಗಿ ಡ್ರಮ್ ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಟಿವಿಎಸ್ ಎನ್‌ಟಾರ್ಕ್ 125 (TVS Ntorq 125):
ಇದು ಪ್ರಖ್ಯಾತ ಸ್ಕೂಟರ್ ಎಂದೇ ಮನೆ ಮಾತಾಗಿದೆ. ರೂ.81,250 ರಿಂದ ರೂ.1 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 48 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್ ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








