ಗಂಡ ಹೆಂಡತಿಯರಿಬ್ಬರೂ ಓಡಿಸಬಹುದು.. ಬೆಸ್ಟ್ 5 ಫ್ಯಾಮಿಲಿ ಸ್ಕೂಟರ್‌ಗಳಿವು, ಬೆಲೆ ಎಷ್ಟು.. ಹೇಗಿವೆ?
ದೇಶದಲ್ಲಿಂದು ಸ್ಕೂಟರ್‌ಗಳು ಶೀಸಾಮಾನ್ಯರ ಕುಟುಂಬಗಳ ಅವಿಭಾಜ್ಯ ಅಂಗವಾಗಿವೆ. ಇವುಗಳನ್ನು ದಂಪತಿಗಳಿಬ್ಬರು ಸುಲಭವಾಗಿ ಬಳಕೆ ಮಾಡಬಹುದು. ನೀವು ದಿನಬಳಕೆಗೆ ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಟಿವಿಎಸ್ ಜುಪಿಟರ್ 110, ಹೋಂಡಾ ಆಕ್ಟಿವಾ 110, ಸುಜುಕಿ ಆಕ್ಸೆಸ್ 125, ಬಜಾಜ್ ಚೇತಕ್ 3501 ಹಾಗೂ ಎಥರ್ ರಿಜ್ಟಾಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಟಿವಿಎಸ್ ಜುಪಿಟರ್ 110 (TVS Jupiter 110):
ಇದು ಅತ್ಯುತ್ತಮವಾದ ಫ್ಯಾಮಿಲಿ ಸ್ಕೂಟರ್ ಆಗಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ತೆಗೆದುಕೊಳ್ಳಬಹುದು. ರೂ.76.150 ರಿಂದ ರೂ.88,350 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಒಳಗೊಂಡಿದೆ. ಮೆಟಿಯರ್ ರೆಡ್ ಗ್ಲಾಸ್, ಸ್ಟಾರ್‌ಡಸ್ಟ್ ಬ್ಲ್ಯಾಕ್, ಟೈಟಾನಿಯಂ ಗ್ರೇ ಮ್ಯಾಟ್ ಮತ್ತು ಲೂನಾರ್ ವೈಟ್ ಗ್ಲಾಸ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,275 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ಜುಪಿಟರ್' ಸ್ಕೂಟರ್ 113-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಪುಲ್ ಡಿಜಿಟಲ್ ಕಲರ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೋಂಡಾ ಆಕ್ಟಿವಾ 110 (Honda Activa 110):
ಈ ಸ್ಕೂಟರ್‌ನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.75,433 ರಿಂದ ರೂ.89,806 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಡೀಸೆಂಟ್ ಬ್ಲೂ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಪ್ರೆಷಿಯಸ್ ವೈಟ್ & ರೆಬೆಲ್ ರೆಡ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1260 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಆಕ್ಟಿವಾ' ಸ್ಕೂಟರ್ 109.51-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಸುಜುಕಿ ಆಕ್ಸೆಸ್ 125 (Suzuki Access 125):
ಇದೊಂದು ಪ್ರಖ್ಯಾತ ಸ್ಕೂಟರ್ ಆಗಿದೆ. ರೂ.81,508 ರಿಂದ ರೂ.97,202 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 124-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 64 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಎಥರ್ ರಿಜ್ಟಾ (Ather Rizta):
ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.05 ಲಕ್ಷದಿಂದ ರೂ.1.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) & 3.7 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಹಾಗೂ ಮಲ್ಟಿ ಪರ್ಪಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಬಜಾಜ್ ಚೇತಕ್ 3501 (Bajaj Chetak 3501):
ಇದು ರೂ.1,39 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 3.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 153 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಮತ್ತು ಇಂಟಿಗ್ರೇಟೆಡ್ ನ್ಯಾವಿಗೇಷನ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








