ಹಳ್ಳಿಗೂ ಸೈ.. ದಿಲ್ಲಿಗೂ ಜೈ! 5 ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳಿವು.. ಬೆಲೆಯೂ ಅಗ್ಗ.. ವಿಶೇಷತೆಗಳೇನು?

ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳು ಅಬ್ಬರಿಸುತ್ತಿವೆ. ಇವುಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ಇ-ಸ್ಕೂಟರ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಬಜಾಜ್ ಚೇತಕ್ 3501, ಎಥರ್ ರಿಜ್ಟಾ, ಟಿವಿಎಸ್ ಐಕ್ಯೂಬ್ ಎಸ್‌ಟಿ 5.3 ಕೆಡಬ್ಲ್ಯೂಹೆಚ್, ಸುಜುಕಿ ಇ ಆಕ್ಸೆಸ್ ಹಾಗೂ ರಿವರ್ ಇಂಡೀಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಈ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಬಜಾಜ್ ಚೇತಕ್ 3501 (Bajaj Chetak 3501):

ಇದು ಜನಪ್ರಿಯ ಇ-ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.1,39 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಬ್ರೂಕ್ಲಿನ್ ಬ್ಲ್ಯಾಕ್, ಇಂಡಿಗೋ ಮೆಟಾಲಿಕ್, ಪಿಸ್ತಾ ಗ್ರೀನ್ ಹಾಗೂ ಮ್ಯಾಟ್ ಸ್ಕಾರ್ಲೆಟ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 168 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,355 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Top 5 Popular Electric Scooters In India Chetak Rizta iQube e Access And Indie

ನೂತನ 'ಚೇತಕ್' 3.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 153 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 73 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 5.5-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಹಾಗೂ ಇಂಟಿಗ್ರೇಟೆಡ್ ನ್ಯಾವಿಗೇಷನ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಎಥರ್ ರಿಜ್ಟಾ (Ather Rizta):

ಈ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಗ್ರಾಹಕರು ಕೂಡ ಮೆಚ್ಚಿಕೊಂಡಿದ್ದಾರೆ. ರೂ.1.05 ಲಕ್ಷದಿಂದ ರೂ.1.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಡೆಕ್ಕನ್ ಗ್ರೇ, ಸಿಯಾಚಿನ್ ವೈಟ್, ಪ್ಯಾಂಗಾಂಗ್ ಬ್ಲೂ ಹಾಗೂ ಟೆರಾಕೋಟಾ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 150 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 1,285 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

Top 5 Popular Electric Scooters In India Chetak Rizta iQube e Access And Indie

ಹೊಸ 'ರಿಜ್ಟಾ' 2.9 ಮತ್ತು 3.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ಗಳನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಹಾಗೂ ಮಲ್ಟಿ ಪರ್ಪಸ್ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ಐಕ್ಯೂಬ್ ಎಸ್‌ಟಿ (TVS iQube ST 5.3 kWh):

ಇದೊಂದು ಪ್ರಮುಖ ಇ-ಸ್ಕೂಟರ್ ಆಗಿದೆ. ರೂ.1.61 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 5.3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 212 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

Top 5 Popular Electric Scooters In India Chetak Rizta iQube e Access And Indie

ಸುಜುಕಿ ಇ ಆಕ್ಸೆಸ್ (Suzuki e Access):

ಈ ಸ್ಕೂಟರ್‌ನ್ನು ಎಲ್ಲರು ತೆಗೆದುಕೊಳ್ಳಬಹುದು. ರೂ.1.88 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 3.07 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 95 ಕಿಲೋಮೀಟರ್‌ ರೇಂಜ್ (ಮೈಲೇಜ್) ನೀಡುತ್ತದೆ. 71 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. ಟಿಎಫ್‌ಟಿ ಡಿಸ್‌ಪ್ಲೇಯಂತಹ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Top 5 Popular Electric Scooters In India Chetak Rizta iQube e Access And Indie

ರಿವರ್ ಇಂಡೀ (River Indie):

ಇದೊಂದು ವಿಶ್ವಾಸಾರ್ಹ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ರೂ.1.46 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. 161 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Article Published On: Wednesday, February 18, 2026, 18:00 [IST]
English summary
Best 5 popular electric scooters in india chetak rizta iqube e access and indie
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+