ಬಡವರಿಗಾಗಿಯೇ ಇರುವ ಕಮ್ಮಿ ಬೆಲೆಯ 7 ಬೈಕ್‌ಗಳಿವು: 90 Km ತನಕ ಮೈಲೇಜ್.. ಸ್ಪ್ಲೆಂಡರ್‌ನಿಂದ ಪ್ಲಾಟಿನಾವರೆಗೆ!

ಭಾರತದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲೂ ಕೆಲವರಿಗೆ ಬದುಕಿನ ಬಂಡಿ ಎಳೆಯಲು ಮೋಟಾರ್‌ಸೈಕಲ್‌ಗಳು ತೀರಾ ಅನಿವಾರ್ಯವಾಗಿವೆ. ನೀವು ಹೊಚ್ಚ ಹೊಸ 100 ಸಿಸಿ ಬೈಕ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಹೀರೋ ಸ್ಪ್ಲೆಂಡರ್ ಪ್ಲಸ್, ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್, ಹೋಂಡಾ ಶೈನ್ 100, ಹೋಂಡಾ ಶೈನ್ 100 ಡಿಎಕ್ಸ್, ಹೀರೋ ಎಚ್ಎಫ್ ಡಿಲಕ್ಸ್, ಹೀರೋ ಪ್ಯಾಶನ್ ಪ್ಲಸ್ ಹಾಗೂ ಬಜಾಜ್ ಪ್ಲಾಟಿನಾ 100 ಮಾಡೆಲ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus):

ಇದು ನಂಬರ್ 1 ಬೈಕ್ ಆಗಿದೆ. ಅಗ್ಗದ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.74,152 ರಿಂದ ರೂ.76,437 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 70 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಐ3ಎಸ್ ಟೆಕ್ನಾಲಜಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

Top 7 100-cc Bikes In India Splendor Plus Shine 100 HF Deluxe Passion Plus to Platina 100

ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ (Hero Splendor Plus Xtec):

ಈ ಮೋಟಾರ್‌ಸೈಕಲ್‌ ಸಹ ಬಜೆಟ್ ದರದಲ್ಲಿ ಸಿಗುತ್ತದೆ. ರೂ.78,426 ರಿಂದ ರೂ.81,469 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 70 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ & ಬ್ಲೂಟೂತ್ ಕನೆಕ್ಟಿವಿಟಿಯಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೋಂಡಾ ಶೈನ್ 100 (Honda Shine 100):

ಇದೊಂದು ಪ್ರಖ್ಯಾತ ಬೈಕ್ ಆಗಿ ಹೊರಹೊಮ್ಮಿದೆ. ರೂ.65,243 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 65 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೆನ್ಸರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Top 7 100-cc Bikes In India Splendor Plus Shine 100 HF Deluxe Passion Plus to Platina 100

ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX):

ಈ ಮೋಟಾರ್‌ಸೈಕಲ್‌ನ್ನು ಗ್ರಾಹಕರು ಮೆಚ್ಚಿದ್ದಾರೆ. ರೂ.71,746 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 65 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್‌ ಮತ್ತು ಸೈಲೆಂಟ್ ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೀರೋ ಎಚ್ಎಫ್ ಡಿಲಕ್ಸ್ (Hero HF Deluxe):

ಇದು ಜನಪ್ರಿಯ ಬೈಕ್ ಆಗಿದೆ. ರೂ.61,546 ರಿಂದ ರೂ.70,149 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 70 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Top 7 100-cc Bikes In India Splendor Plus Shine 100 HF Deluxe Passion Plus to Platina 100

ಹೀರೋ ಪ್ಯಾಶನ್ ಪ್ಲಸ್ (Hero Passion Plus)

ಈ ಮೋಟಾರ್‌ಸೈಕಲ್‌ನ್ನು ಖರೀದಿದಾರರು ಇಷ್ಟಪಟ್ಟು ಕೊಂಡುಕೊಳ್ಳುತ್ತಾರೆ. ರೂ.77,691 ರಿಂದ 79,074 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 60 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಅನಲಾಗ್ ಕ್ಲಸ್ಟರ್ ಮತ್ತು ಮೊಬೈಲ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

Top 7 100-cc Bikes In India Splendor Plus Shine 100 HF Deluxe Passion Plus to Platina 100

ಬಜಾಜ್ ಪ್ಲಾಟಿನಾ 100 (Bajaj Platina 100):

ಇದೊಂದು ನಂಬಿಕಾರ್ಹ ಬೈಕ್ ಎಂದೇ ಖ್ಯಾತಿ ಗಳಿಸಿದೆ. ರೂ.66,015 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 102 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 75 ರಿಂದ 90 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

More from DriveSpark

Article Published On: Thursday, March 5, 2026, 13:25 [IST]
English summary
Top 7 100 cc bikes in india splendor plus shine 100 hf deluxe passion plus to platina 100
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+