TVS: ಮಧ್ಯಮ ವರ್ಗದವರಿಗೆ ಪರ್ಫೆಕ್ಟ್ ಬೈಕ್‌ಯಿದು... 1 ಲಕ್ಷ ರೂಪಾಯಿ, ಫುಲ್ ಟ್ಯಾಂಕ್ ಮಾಡಿಸಿದ್ರೆ 540 Km ಮೈಲೇಜ್!
ಟಿವಿಎಸ್ ಅಪಾಚೆ ಆರ್‌ಟಿಆರ್ 160 (TVS Apache RTR 160) ಜನಪ್ರಿಯ ಮೋಟಾರ್‌ಸೈಕಲ್ ಎಂದೇ ಹೆಸರುವಾಸಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಮಧ್ಯಮ ವರ್ಗದ ಜನರಿಗೆ ಪರ್ಫೆಕ್ಟ್ ಆಗಿದೆ. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಅಪಾಚೆ ಆರ್‌ಟಿಆರ್ 160' ಹೆಚ್ಚು ಸೂಕ್ತವಾಗಲಿದೆ. ಬನ್ನಿ.. ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಇದು ಕೈಗೆಟುಕುವ ದರದಲ್ಲೂ ಸಿಗುತ್ತದೆ. ಕನಿಷ್ಠ ರೂ.1.01 ಲಕ್ಷ ಹಾಗೂ ಗರಿಷ್ಠ ರೂ.1.23 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ಆರ್‌ಎಂ ಡ್ರಮ್ (ಬ್ಲ್ಯಾಕ್ ಎಡಿಷನ್), ಆರ್‌ಎಂ ಡ್ರಮ್, ಆರ್‌ಎಂ ಡಿಸ್ಕ್, ಆರ್‌ಎಂ ಡಿಸ್ಕ್ ಬಿಟಿ, ರೇಸಿಂಗ್ ಎಡಿಷನ್ ಹಾಗೂ ಡುಯಲ್ ಚಾನೆಲ್ ಎಬಿಎಸ್ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ಈ ಮೋಟಾರ್‌ಸೈಕಲ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲೈಟ್‌ನ್ನು ಹೊಂದಿದೆ. ರೇಸಿಂಗ್ ರೆಡ್, ಮ್ಯಾಟ್ ಬ್ಲೂ, ಪರ್ಲ್ ವೈಟ್, ಗ್ಲಾಸ್ ಬ್ಲ್ಯಾಕ್, ಟಿ ಗ್ರೇ ಹಾಗೂ ಮ್ಯಾಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimension):
ನೂತನ 'ಟಿವಿಎಸ್ ಅಪಾಚೆ ಆರ್‌ಟಿಆರ್ 160' ಬೈಕ್ ಸಾಕಷ್ಟು ವಿಶಾಲವಾಗಿದೆ. 2,085 ಮಿ.ಮೀ ಉದ್ದ, 730 ಮಿ.ಮೀ ಅಗಲ ಹಾಗೂ 1,105 ಮಿ.ಮೀ ಎತ್ತರವಿದೆ. ಜೊತೆಗಿದು 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,300 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ ಸರಿ ಸುಮಾರು 139 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಇದು ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 159.7-ಸಿಸಿ 4-ಸ್ಟ್ರೋಕ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8750 ಆರ್‌ಪಿಎಂನಲ್ಲಿ 16.04 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 7,000 ಆರ್‌ಪಿಎಂನಲ್ಲಿ 13.85 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮೈಲೇಜ್ (Mileage):
ಈ ಮೋಟಾರ್‌ಸೈಕಲ್ ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ 41.4 ರಿಂದ 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 12 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಒಮ್ಮೆ ಪೂರ್ತಿಯಾಗಿ ತುಂಬಿಸಿದರೆ 600 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು.

ವೈಶಿಷ್ಟ್ಯಗಳು (Features):
ಹೊಸ 'ಅಪಾಚೆ ಆರ್‌ಟಿಆರ್ 160' ಬೈಕ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಕ್ರ್ಯಾಶ್ ಅಲರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸ್ಪೋರ್ಟ್ಸ್, ಅರ್ಬನ್ ಹಾಗೂ ರೈನ್ ಎಂಬ ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. 107 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 5.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸೀಟ್ ಎತ್ತರವು 790 ಮಿ.ಮೀ ಇದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):
ಇದು ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಮೊನೊಟ್ಯೂಬ್ ಇನ್ವರ್ಟೆಡ್ ಗ್ಯಾಸ್-ಫಿಲ್ಡ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








